ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ, ಹಾವೇರಿ ಸೇರಿ ಕರ್ನಾಟಕದ ಹಲವೆಡೆ ಧಾರಾಕಾರ ಮಳೆ; ಸಿಡಿಲಿಗೆ ಮಹಿಳೆ ಸಾವು

ಕಲಬುರಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೇವರ್ಗಿ ತಾಲೂಕಿನ ಮಯೂರು ಗ್ರಾಮದ ಸಿದ್ದಮ್ಮ ಘತ್ತರಗಿ 35 ಮೃತ ಮಹಿಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ.

ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ, ಹಾವೇರಿ ಸೇರಿ ಕರ್ನಾಟಕದ ಹಲವೆಡೆ ಧಾರಾಕಾರ ಮಳೆ; ಸಿಡಿಲಿಗೆ ಮಹಿಳೆ ಸಾವು
ಹಾವೇರಿಯಲ್ಲಿ ಆಲಿಕಲ್ಲು ಆರಿಸಿಕೊಳ್ಳುತ್ತಿರುವ ವ್ಯಕ್ತಿ
Ghanashyam D M | ಡಿ.ಎಂ.ಘನಶ್ಯಾಮ

| Edited By: Apurva Kumar Balegere

Apr 30, 2021 | 9:17 AM


ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುರುವಾರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೇವರ್ಗಿ ತಾಲೂಕಿನ ಮಯೂರು ಗ್ರಾಮದ ಸಿದ್ದಮ್ಮ ಘತ್ತರಗಿ 35 ಮೃತ ಮಹಿಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಭಾರೀ ಗಾಳಿಯೊಂದಿಗೆ ಮಳೆ ಸುರಿಯಲು ಆರಂಭಿಸಿತು. ಹುಬ್ಬಳ್ಳಿ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲೂ ಉತ್ತಮ ಮಳೆಯಾಗಿದೆ.

ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬಿಸಿಲಿನಿಂದ ಬಳಲಿದ್ದ ಮಲೆನಾಡಿನ ಜನರಿಗೆ ಮಳೆಯಿಂದ ತಂಪು ವಾತಾವರಣದ ಖುಷಿ ಸಿಕ್ಕಿದೆ. ಜೋರು ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಕಿತ್ತೂರು, ‌ಮರಡೂರು, ಕೋಡಬಾಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಸಮೇತ ಮಳೆ ಸುರಿಯುತ್ತಿದೆ. ಜನರು ಖುಷಿಯಿಂದ ಆಲಿಕಲ್ಲು ಆರಿಸಿಕೊಳ್ಳುತ್ತಿದ್ದಾರೆ. ಬಿರುಗಾಳಿ, ಗುಡುಗು-ಸಿಡಿಲಿಗೆ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಹಳಿಂಗಳಿಯ ಗುಳ್ಳಿಮಳಿ ಪ್ರದೇಶದ ಬಿದಿರು ಬೆಟ್ಟದಲ್ಲಿ ಸಿಡಿಲು ಬಡಿದು ಅಪಾರ ಪ್ರಮಾಣ ಬಿದಿರು ಗಿಡಗಳು ನಾಶವಾಗಿವೆ.

(Heavy Rain With Thunderstorm in Hubli Kalaburagi Haveri Shivamogga)

ಇದನ್ನೂ ಓದಿ: ಅಕಾಲಿಕ ಆಲಿಕಲ್ಲು ಮಳೆಗೆ ಬೆಳೆ ನಾಶ; ಚಿಕ್ಕಬಳ್ಳಾಪುರ ರೈತರಲ್ಲಿ ಹೆಚ್ಚಿದ ಆತಂಕ

ಇದನ್ನೂ ಓದಿ: #KarnatakaLockdown: ‘ಉಪಚುನಾವಣೆ ಮುಗೀತಾ ಮುಖ್ಯಮಂತ್ರಿಗಳೇ’: ಲಾಕ್​ಡೌನ್ ಘೋಷಣೆಯ ಬೆನ್ನಲ್ಲೇ ಟ್ವಿಟರ್​ನಲ್ಲಿ ಮೀಮ್​ಗಳ ಸುರಿಮಳೆ


ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada