ಚೆನ್ನೈನಲ್ಲಿ ಭಾರೀ ಮಳೆ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ

ತಮಿಳುನಾಡಿನ ಚೆನ್ನೈನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ತಮಿಳುನಾಡು ಸರ್ಕಾರವು ಅಕ್ಟೋಬರ್ 15ರಿಂದ 18ರವರೆಗೆ ಮಳೆ ಪೀಡಿತ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸಲಹೆಯನ್ನು ನೀಡಿದೆ. ಭಾರೀ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD)ಯ ಎಚ್ಚರಿಕೆಯ ನಡುವೆ ತಮಿಳು ನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಾಳೆ ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನಲ್ಲಿ ಭಾರೀ ಮಳೆ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ
ಮಳೆ
Follow us
ಸುಷ್ಮಾ ಚಕ್ರೆ
|

Updated on: Oct 14, 2024 | 7:19 PM

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಕ್ಟೋಬರ್ 15ರ ಮಂಗಳವಾರ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೇ, ಕಂಪನಿಗಳ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ತಮಿಳುನಾಡು ಸರ್ಕಾರವು ಅಕ್ಟೋಬರ್ 15 ರಿಂದ 18 ರವರೆಗೆ ಮಳೆ ಹೆಚ್ಚಾಗಿರುವ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡುವ ಸಲಹೆಯನ್ನು ನೀಡಿದೆ. ಎಲ್ಲಾ ಐಟಿ ವೃತ್ತಿಪರರಿಗೆ ಅಕ್ಟೋಬರ್ 15-18 ರವರೆಗೆ ಪೀಡಿತ ಪ್ರದೇಶದಲ್ಲಿ ಮನೆಯಿಂದಲೇ ಕೆಲಸ ಮಾಡಲು ಸಲಹೆಯನ್ನು ನೀಡಲಾಗಿದೆ. ಚೆನ್ನೈನ ಹಲವು ಭಾಗಗಳಲ್ಲಿ ಆರ್‌ಎಂಸಿ ರೆಡ್ ಅಲರ್ಟ್ ಘೋಷಿಸಿದ್ದರಿಂದ ಮತ್ತು ಮಾನ್ಸೂನ್‌ನಲ್ಲಿ ಒಂದೇ ದಿನದಲ್ಲಿ 20 ಸೆಂ.ಮೀ ಮಳೆಯಾಗಲಿದೆ ಎಂದು ಹವಾಮಾನ ಕಚೇರಿ ಮುನ್ಸೂಚನೆ ನೀಡಿದ್ದರಿಂದ ಈ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸಾಲು ರಜೆ ಮುಕ್ತಾಯ, ಮಳೆ ಪರಿಣಾಮ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್

ಇಂದು ಸಿಎಂ ಸ್ಟಾಲಿನ್ ಅವರು ರಾಜ್ಯ ಸಚಿವಾಲಯದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಆದೇಶ ಹೊರಡಿಸಿದರು. ಅಕ್ಟೋಬರ್ 15 ಮತ್ತು 18ರ ನಡುವೆ ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು (ಡಬ್ಲ್ಯುಎಫ್‌ಹೆಚ್) ಸಲಹೆ ನೀಡುವಂತೆ ಐಟಿ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ಜನರನ್ನು ರಕ್ಷಿಸಲು ಮುಂಚಿತವಾಗಿ ದುರ್ಬಲ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸುವಂತೆ ಸಿಎಂ ಸ್ಟಾಲಿನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ಮಾನ್ಸೂನ್‌ನಲ್ಲಿ ಒಂದೇ ದಿನದಲ್ಲಿ 20 ಸೆಂ.ಮೀ.ವರೆಗೆ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: ಅ. 17ರ ವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಹರ್ಮಾಪುರಿ, ಸೇಲಂ, ನೀಲಗಿರಿ, ಈರೋಡ್, ನಾಮಕ್ಕಲ್, ಅರಿಯಲೂರ್, ಪೆರಂಬಲೂರ್, ತಿರುಚಿರಾಪಳ್ಳಿ, ಕರೂರ್, ತಿರುಪ್ಪೂರ್, ಕೊಯಮತ್ತೂರು, ದಿಂಡಿಗಲ್, ಪುದುಕ್ಕೊಟ್ಟೈ, ನಾಗಪಟ್ಟಣಂ, ಶಿವಗಂಗೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ