ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ
ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಳೆ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ನಿಂದ ಮಾಹಿತಿ ಪಡೆದು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಚೆನೈ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ತಮಿಳುನಾಡು ತತ್ತರಿಸಿ ಹೋಗಿದೆ. ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್ಪೋರ್ಟ್ ರನ್ವೇ ಕೂಡ ಬಂದ್ ಆಗಿದ್ದು, ಚೆನ್ನೈ ಲೋಕಲ್ ಟ್ರೈನ್ಗಳು ಸ್ತಬ್ಧಗೊಂಡಿವೆ.
ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಳೆ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ನಿಂದ ಮಾಹಿತಿ ಪಡೆದು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ. ಮಾತ್ರವಲ್ಲದೇ ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಸೂಚನೆಯನ್ನೂ ನೀಡಿದೆ. 2015ರಿಂದ ಈಚೆಗೆ ಚೆನ್ನೈನಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆ ಆಗಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 12 ಗಂಟೆ ಅವಧಿಯಲ್ಲಿ ಭಾರಿ ಮಳೆಯಾಗಿದ್ದು, ಚೆನ್ನೈನಲ್ಲಿ ಬಹುತೇಕ ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈನ ಹಲವು ರಸ್ತೆಗಳು ಕೆರೆಗಳಂತಾಗಿವೆ. ಭಾರಿ ಮಳೆಗೆ ವಾಹನ ಸವಾರರು ತೀವ್ರ ಪರದಾಟ ಪಡುತ್ತಿದ್ದಾರೆ. ಚೆಂಬರಂ ಬಾಕ್ಕಂ, ಪೊಂಡಿ, ಪುಳಲ್ ಡ್ಯಾಂಗಳು ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ ಮಾಡಲಾಗಿದೆ. ಚೆನ್ನೈನ ಉತ್ತರ, ದಕ್ಷಿಣ ಭಾಗದ ಹಲವೆಡೆ ಜಲಾವೃತಗೊಂಡಿವೆ.
ತಮಿಳು ನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಇತರ ಸಚಿವರು ನಿನ್ನೆ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಬೆಳಗ್ಗೆ 9 ಗಂಟೆಗೆ ಪೊಂಡಿ ಜಲಾಶಯದಿಂದ 3 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಕೊಸಸ್ತಲೈಯಾರ್ ನದಿಯ ಕೆಳಭಾಗದಲ್ಲಿರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಇಂದು ಬೆಂಗಳೂರು ನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ನಾಳೆಯೂ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.
ಇದನ್ನೂ ಓದಿ
ಸಮುದ್ರ ಪ್ರವಾಸಕ್ಕೆ ಪ್ಲಾನ್ ಮಾಡಿದ್ದರೆ ಮರವಂತೆಗೆ ಭೇಟಿ ನೀಡಿ; ಒಂದೇ ಕಡೆ ಸಿಗಲಿದೆ ಬೀಚ್ ಮತ್ತು ನದಿಯ ಅದ್ಭುತ ಅನುಭವ
Petrol Price Today: ಇಂದು ಇಂಧನ ದರ ಸ್ಥಿರ; ಎಷ್ಟಿದೆ ಲೀಟರ್ ಪೆಟ್ರೋಲ್ ಬೆಲೆ? ಇಲ್ಲಿದೆ ಮಾಹಿತಿ
Published On - 8:41 am, Mon, 8 November 21