Amarnath Yatra: ಕಾಶ್ಮೀರದಲ್ಲಿ ಭಾರೀ ಮಳೆ, ಅಮರನಾಥ ಯಾತ್ರೆ ಸ್ಥಗಿತ

|

Updated on: Jul 07, 2023 | 10:35 AM

ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಜುಲೈ.7)  ತಿಳಿಸಿದ್ದಾರೆ.

Amarnath Yatra: ಕಾಶ್ಮೀರದಲ್ಲಿ ಭಾರೀ ಮಳೆ, ಅಮರನಾಥ ಯಾತ್ರೆ ಸ್ಥಗಿತ
ಸಾಂದರ್ಭಿಕ ಚಿತ್ರ
Follow us on

ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು (Amarnath Yatra) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಜುಲೈ.7)  ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಬಾಲ್ಟಾಲ್ ಮತ್ತು ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆಯತ್ತ ತೆರಳಲು ಅನುಮತಿ ನೀಡಲ್ಲ ಎಂದು ಅವರು ಹೇಳಿದರು.

3,200 ಯಾತ್ರಾರ್ಥಿಗಳನ್ನು ನುನ್ವಾನ್ ಪಹಲ್ಗಾಮ್ ಶಿಬಿರದಲ್ಲಿ ಮತ್ತು 4,000 ಯಾತ್ರಾರ್ಥಿಗಳನ್ನು ಬಾಲ್ಟಾಲ್ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 80,000ಕ್ಕೂ ಹೆಚ್ಚು ಭಕ್ತರು ಯಾತ್ರೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Amarnath Yatra 2023: ಅಮರನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ನಕಲಿ ಪರವಾನಗಿಗಳನ್ನು ಹೊಂದಿದ್ದ 300 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಜಮ್ಮುವಿನ ಆನ್-ದಿ-ಸ್ಪಾಟ್ ಕೌಂಟರ್‌ಗಳಲ್ಲಿ ಹೊಸದಾಗಿ ನೋಂದಣಿ ಮಾಡಿಸಿದ ನಂತರ ಪರವಾನಗಿಗಳನ್ನು ನೀಡಲಾಗಿದೆ. ಈ ಯಾತ್ರಿಕರು ತನಕಲಿ ನೋಂದಣಿ ದಾಖಲೆಗಳನ್ನು ನೀಡುವ ಮೂಲಕ ಟ್ರಾವೆಲ್ ಏಜೆನ್ಸಿಗಳಿಗೆ ವಂಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 7,010 ಯಾತ್ರಾರ್ಥಿಗಳನ್ನು ಒಳಗೊಂಡ 8ನೇ ಬ್ಯಾಚ್ ಶುಕ್ರವಾರ 247 ವಾಹನಗಳು ಬಘವತಿ ನಗರ ಬೇಸ್ ಕ್ಯಾಂಪ್ ಜಮ್ಮುವಿನಿಂದ ಕಣಿವೆಯ ಕಡೆಗೆ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 7 July 23