AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಜತೆಗೆ ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ. 

ಉತ್ತರ ಭಾರತದಲ್ಲಿ ಭಾರೀ ಮಳೆ: 17 ರೈಲುಗಳ ಸಂಚಾರ ರದ್ದು, 12 ಮಾರ್ಗ ಬದಲಾವಣೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 10:35 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆ (Heavy rains) ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನಗರಗಳು ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್​ ಉಂಟಾಗಿದೆ. ಜೊತೆಗೆ ಮುಂಗಾರು ಮಳೆಯಿಂದಾಗಿ ರೈಲ್ವೆ ಸಂಚಾರಕ್ಕೂ ಹೊಡೆತ ಬಿದ್ದಿದೆ. ಉತ್ತರ ರೈಲ್ವೆ ಭಾನುವಾರ ಸುಮಾರು 17 ರೈಲುಗಳ ಸಂಚಾರ ರದ್ದುಗೊಳಿಸಿದ್ದು, ಸುಮಾರು 12 ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಲ್ಲೆಡೆ ಜಲಾವೃತಗೊಂಡ ಕಾರಣ ನಾಲ್ಕು ಸ್ಥಳಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರ ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿಯಲ್ಲಿ ಕಳೆದ 40 ವರ್ಷಗಳ ಬಳಿಕ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ರಸ್ತೆಗಳು ಮತ್ತು ಅಂಡರ್‌ಪಾಸ್​ ಮುಳುಗಿ ಹೋಗಿವೆ. ಕೆಲವೆಡೆ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿಯಿಂದ ಸಂಚರಿಸುವ ರೈಲುಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.

ದೆಹಲಿ-ಸಬ್ಜಿ ಮಂಡಿ ಪ್ರದೇಶ ಮತ್ತು ನಿಲ್ದಾಣದ ತರಬೇತಿ ಪ್ರದೇಶದಲ್ಲಿ ಎಂಟು ಪಂಪ್​ಗಳ ಮೂಲಕ ಹಳಿಗಳಲ್ಲಿ ತುಂಬಿಕೊಂಡ ನೀರನ್ನು ತೆಗೆಯಲಾಗುತ್ತಿದ್ದು, ರದ್ದುಗೊಳಿಸಿದ ರೈಲುಗಳನ್ನು ಬಿಟ್ಟು ಇತರೆ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ.

ರದ್ದುಗೊಂಡ ರೈಲುಗಳು

ಫಿರೋಜ್‌ಪುರ ಕ್ಯಾಂಟ್ ಎಕ್ಸ್‌ಪ್ರೆಸ್, ಅಮೃತಸರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ಚಂಡೀಗಢ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ಚಂಡೀಗಢದಿಂದ ಅಮೃತಸರ ಜಂಕ್ಷನ್ ಎಕ್ಸ್‌ಪ್ರೆಸ್​ ರೈಲುಗಳನ್ನು ರದ್ದು ಮಾಡಿದರೆ, ಮುಂಬೈ ಸೆಂಟ್ರಲ್‌ಗೆ ಅಮೃತಸರ ಎಕ್ಸ್‌ಪ್ರೆಸ್, ಅಮೃತಸರ ಎಕ್ಸ್‌ಪ್ರೆಸ್, ದೌಲತ್‌ಪುರ್ ಚೌಕ್ ಎಕ್ಸ್‌ಪ್ರೆಸ್​ ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಮಳೆಯಿಂದಾಗಿ ಹವಾಮಾನ ಹದಗೆಟ್ಟ ಹಿನ್ನೆಲೆ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ

ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್