AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedarnath Dham Yatra: ಉತ್ತರಾಖಂಡದಲ್ಲಿ ಭಾರೀ ಮಳೆ, ಕೇದಾರನಾಥ ಧಾಮ ಯಾತ್ರೆ ಸ್ಥಗಿತ

ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.

Kedarnath Dham Yatra: ಉತ್ತರಾಖಂಡದಲ್ಲಿ ಭಾರೀ ಮಳೆ, ಕೇದಾರನಾಥ ಧಾಮ ಯಾತ್ರೆ ಸ್ಥಗಿತ
ಕೇದಾರನಾಥImage Credit source: India TV
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 12, 2023 | 10:36 AM

ಡೆಹ್ರಡೂನ್: ದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆಯಾಗಿದ್ದು, ಜನರು ಕಂಗಾಲಾಗಿದ್ದಾರೆ. ಹಲವು ಕಡೆ ಸಾವು-ನೋವುಗಳು ಸಂಭವಿಸಿದ್ದು, ಆಸ್ತಿ-ಪಾಸ್ತಿಗಳಿಗೂ ಹಾನಿಯಾಗಿದೆ, ಇನ್ನೂ ಉತ್ತರ ಭಾರತದ ಅನೇಕ ಕಡೆ ಮಳೆ ಹೆಚ್ಚಾಗಿದ್ದು, ಮನೆಗಳು, ವಾಹನಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿದೆ. ಇದೀಗ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು(Kedarnath Dham Yatra) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪ್ರಯಾಣಿಕರನ್ನು ಈ ಪ್ರದೇಶಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಮಳೆಯಿಂದಾಗಿ ರಾಜ್ಯದ 4 ರಸ್ತೆಗಳು ಮತ್ತು 10 ಸಂಪರ್ಕ ರಸ್ತೆಗಳು ಅವಶೇಷಗಳಿಂದ ಮುಚ್ಚಲ್ಪಟ್ಟಿವೆ. ಭಾರೀ ಮಳೆಯಿಂದಾಗಿ ಮಂದಾಕಿನಿ ಮತ್ತು ಅಲಕನಂದಾ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, ಭಾರತೀಯ ಹವಾಮಾನ ಇಲಾಖೆ (IMD) ಜುಲೈ 12 ಕ್ಕೆ ಸೋಮವಾರ ಆರೆಂಜ್ ಅಲರ್ಟ್ ನೀಡಿದ್ದಾರೆ. ಈ ಪ್ರದೇಶಗಳಲ್ಲಿ ಜುಲೈ 12 ರಂದು (115.6 ರಿಂದ 204.4 ಮಿಮೀ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಟ್ವೀಟ್‌ನಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ: Kedarnath Yatra: ಕೇದಾರನಾಥ ಯಾತ್ರೆಗೆ ಹೆಲಿಕಾಪ್ಟರ್ ಬುಕಿಂಗ್ ಶುರು; ಇಲ್ಲಿದೆ ಪೂರ್ಣ ವಿವರ

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕಾರ್ಯಚರಣೆ ಮಾಡುತ್ತಿದೆ. ಜನರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮಾಡಲಾಗಿರುವ ಮುಂಜಾಗ್ರತಾ ಕ್ರಮದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಮಳೆಯಿಂದ ಇಂತಹ ಪ್ರಕೃತಿ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ಅತಿಯಾದ ಮಳೆಯಿಂದ ಭೂಕುಸಿತಗಳು ಉಂಟಾಗುತ್ತವೆ ಮತ್ತು ನದಿಗಳ ನೀರಿನ ಮಟ್ಟವು ಹೆಚ್ಚಾಗುತ್ತದೆ. ಈ ಬಗ್ಗೆ ನಾವು ಸಂಪೂರ್ಣವಾಗಿ ಕಾರ್ಯಚರಣೆ ಮಾಡುತ್ತವೆ, ನಮ್ಮ ಜಿಲ್ಲಾಡಳಿತ ಅಲರ್ಟ್ ಮೋಡ್‌ನಲ್ಲಿ ಇರುತ್ತದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅವರೆಲ್ಲರಿಗೂ ಸಿದ್ಧ ಇರುವಂತೆ ತಿಳಿಸಿದ್ದಾರೆ. ನಮ್ಮ ಇತರ ಸಂಸ್ಥೆಗಳು ಸಹ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. NDRF, ಸೇನೆ ಮತ್ತು ನಮ್ಮ PWD ಇಲಾಖೆಯು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ ಮತ್ತು ಜನರಿಗೆ ಸಹಾಯ ಮಾಡಲು ನಾವು ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ