AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು.

Gujarat Rain: ಡಿಸೆಂಬರ್​ 1, 2ರಂದು ಗುಜರಾತ್​​ನಲ್ಲಿ ಭಾರಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಐಎಂಡಿ
ಮಳೆಯ ಚಿತ್ರ
TV9 Web
| Updated By: Lakshmi Hegde|

Updated on:Nov 29, 2021 | 4:03 PM

Share

ಈಗಾಗಲೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಆದರೆ ಮಳೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಗುಜರಾತ್​​ನಲ್ಲಿ ಡಿ.1 ಮತ್ತು 2ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಗುಜರಾತ್​​ನ ಆನಂದ್, ಬರೂಚ್​, ನವ್ಸರಿ, ವಲ್ಸೇದ್​, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಡಿಸೆಂಬರ್​ 1ರಂದು ಆರೆಂಜ್​ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್​ 2ರಂದು ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಸಕ್ರಿಯ ಪಾಶ್ಚಿಮಾತ್ಯ ಅಡಚಣೆಯಿಂದಾಗಿ ಗುಜರಾತ್​​ನಲ್ಲಿ ನವೆಂಬರ್ 30ರಿಂದ ಮಳೆ ಪ್ರಾರಂಭವಾಗಲಿದೆ. ನವೆಂಬರ್​ 30ರ ಮಧ್ಯರಾತ್ರಿಯಿಂದಲೇ ವಾಯುವ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯ ಭಾರತದೆಲ್ಲೆಡೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇನ್ನು ಗುಜರಾತ್​​ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್​ 30ರಿಂದ ಡಿಸೆಂಬರ್​ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.

ನವೆಂಬರ್​ 30ರಂದು ಅಹ್ಮದಾಬಾದ್, ಆನಂದ್​, ಖೇಡಾ, ಪಂಚಮಹಲ್​, ರಾಜ್​ಕೋಟ್​​ ಸೇರಿ ದಕ್ಷಿಣ ಗುಜರಾತ್​​ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ಈ ವೇಳೆ ಗಂಟೆಗೆ 40-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ.  ಇನ್ನು ಡಿಸೆಂಬರ್​ 1ರಂದು ಆನಂದ್, ಬರೂಚ್​, ನವ್​ಸರಿ, ವಲ್ಸಾದ್​ ಸೂರತ್​, ಡಂಗ್ಸ್​, ಅಮ್ರೇಲಿ, ಜುನಾಗಢ್​, ಗಿರ್​, ಸೋಮ್​ನಾಥ್​, ಬೋಟಾಡ್​ ಮತ್ತು ಭವನಗರ, ಡಾಹೋಡ್​, ಛೋಟಾಉದೇಪುರ್​, ಪಂಚಮಹಲ್​​ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೇ, ಡಿಸೆಂಬರ್​ 2ರಂದು ಬನಸ್ಕಾಂತ, ಸಬರಕಾಂತ, ಅರಾವಳಿ, ಮಹಿಸಾಗರ, ಡಾಂಗ್ಸ್ ಮತ್ತು ತಾಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಪತ್ತೆಯಾಗಿದೆಯಾ ಒಮಿಕ್ರಾನ್​ ಸೋಂಕು?- ಸದ್ಯ ಎರಡು ರಾಜ್ಯಗಳ ಮೇಲೆ ಹೆಚ್ಚಿನ ನಿಗಾ !

Published On - 4:02 pm, Mon, 29 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ