ಗುಜರಾತ್ನಲ್ಲಿ ಭಾರೀ ಅಕಾಲಿಕ ಮಳೆ: ಸಿಡಿಲು ಬಡಿದು 20 ಜನ ಸಾವು
ಗುಜರಾತ್ನಲ್ಲಿ ಭಾರೀ ಮಳೆ ಉಂಟಾಗಿದ್ದು, ಸೋಮವಾರ ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದ. ನೆನ್ನೆ (ನ.26) ರಾಜ್ಯದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದ್ದರಿಂದ ಸಿಡಿಲು ಬಡಿದು ಎಂಟು ಜನ ಸಾವನ್ನಪ್ಪಿದ್ದಾರೆ.
ಗಾಂಧಿನಗರ, ನ.27: ಗುಜರಾತ್ನಲ್ಲಿ (gujarat) ಭಾರೀ ಮಳೆ ಉಂಟಾಗಿದ್ದು, ಸೋಮವಾರ ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದ. ನೆನ್ನೆ (ನ.26) ರಾಜ್ಯದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ ಸುರಿದಿದ್ದರಿಂದ ಸಿಡಿಲು ಬಡಿದು ಎಂಟು ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 22 ವರ್ಷದ ಯುವಕ ಬೈಕ್ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ ಬಿದ್ದು 29 ವರ್ಷದ ಯುವಕ ಮೃತಪಟ್ಟಿದ್ದಾನೆ. ಇದರ ಜತೆಗೆ ತಾಪಿ ಜಿಲ್ಲೆಯಲ್ಲಿ ಇಬ್ಬರು ಮತ್ತು ಸಬರ್ಕಾಂತ, ಅಹಮದಾಬಾದ್, ಮೆಹ್ಸಾನಾ ಮತ್ತು ದಾಹೋದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಕೆಲವು ಕಡೆ ಸಿಡಿಲಿನ ಅಬ್ಬರಕ್ಕೆ ದನ, ಕುರಿಗಳೂ ಸಾವನ್ನಪ್ಪಿವೆ. ಪಿಟಿಐ ಸುದ್ದಿ ಸಂಸ್ಥೆಯ ಪ್ರಕಾರ, ಗುಜರಾತ್‌ನ 251 ತಾಲೂಕುಗಳಲ್ಲಿ 220 ತಾಲೂಕುಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಗಳಲ್ಲಿ 50 ಮಿಮೀ ವರೆಗೆ ಮಳೆಯಾಗಿದೆ. ಇನ್ನು ಈ ಅಕಾಲಿಕ ಮಳೆ ಈಶಾನ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತ ಉಂಟಾದ ಪರಿಣಾಮದಿಂದ ಇದಕ್ಕೆ ಕಾರಣ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಇದನ್ನೂ ಓದಿ; ಮಹಾರಾಷ್ಟ್ರ: ಸಿಡಿಲು ಬಡಿದು ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿ, ಪಾಲ್ಘಡದಲ್ಲಿ ಓರ್ವ ಸಾವು
ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸೋಮವಾರವೂ ಮಳೆಯಾಗಲಿದೆ ಎಂದು ಹವಾಮಾನ ಮೇಲ್ವಿಚಾರಣಾ ಸಂಸ್ಥೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ರಾಜ್ಯವು ಶುಷ್ಕ ಹವಾಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು IMD ವರದಿ ನೀಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ