ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben) ಇಂದು (ಶುಕ್ರವಾರ) ಬೆಳಗಿನ ಜಾವ 3.30ರ ಸುಮಾರಿಗೆ ನಿಧನರಾಗಿದ್ದಾರೆ. 100 ವರ್ಷದ ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಈಗಾಗಲೇ ಗಾಂಧಿನಗರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ತಾಯಿಯ ಅಂತಿಮ ದರ್ಶನ ಪಡೆದರು. ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಹೋದರರೊಂದಿಗೆ ತಾಯಿಯ ಶವವನ್ನು ಹೊತ್ತು ಸಾಗಿದ್ದಾರೆ.
ಹೀರಾಬೆನ್ ಮೋದಿ ಅವರ ನಿಧನದ ಸುದ್ದಿ ಹೊರಹೊಮ್ಮುತ್ತಿದ್ದಂತೆ, ದೇಶ, ವಿದೇಶಗಳಿಂದ ಸಂತಾಪ ಮತ್ತು ಶ್ರದ್ಧಾಂಜಲಿಗಳು ಹರಿದು ಬರಲಾರಂಭಿಸಿವೆ. ಅಹಮದಾಬಾದ್‌ನಲ್ಲಿ ನಿಧನರಾದ ತಮ್ಮ ತಾಯಿ ಹೀರಾಬೆನ್ ಅವರ ಪಾರ್ಥಿವ ಶರೀರವನ್ನು ನರೇಂದ್ರ ಮೋದಿ ಹೊತ್ತೊಯ್ಯುತ್ತಿರುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಇದನ್ನೂ ಓದಿ: ಸಹೋದರನಿಗೆ ಅಪಘಾತ, ತಾಯಿಗೆ ಅನಾರೋಗ್ಯ; ಪ್ರಧಾನಿ ಮೋದಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಹೇಳಿದ್ದಿಷ್ಟು
ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಪಾರ್ಥಿವ ಶರೀರವನ್ನು ಗುಜರಾತ್‌ನ ಗಾಂಧಿನಗರದಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಕೊಂಡೊಯ್ಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದ ನಿವಾಸದಲ್ಲಿ ತಾಯಿ ಹೀರಾಬೆನ್ ಅವರಿಗೆ ನಮನ ಸಲ್ಲಿಸಿದರು.
Gujarat: Prime Minister Narendra Modi pays respect to his mother Heeraben Modi at Gandhinagar residence.
(Source: DD) pic.twitter.com/VJimh3FXZC
— ANI (@ANI) December 30, 2022
ತಮ್ಮ ತಾಯಿಯ ನಿಧನದ ಬಗ್ಗೆ ಇಂದು ಮುಂಜಾನೆ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭವ್ಯವಾದ ಶತಮಾನವೊಂದನ್ನು ಕಳೆದ ನನ್ನ ತಾಯಿ ದೇವರ ಪಾದದ ಮೇಲೆ ಮಲಗಿದ್ದಾರೆ. ಅಮ್ಮನಲ್ಲಿ ನಾನು ಯಾವಾಗಲೂ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ. ಅವರದ್ದು ತಪಸ್ವಿಯ ಪ್ರಯಾಣ. ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ನಡೆಸಿದ ನನ್ನ ತಾಯಿ ನಮ್ಮನ್ನು ಅಗಲಿದ್ದಾರೆ. ಅಮ್ಮನ 100ನೇ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ ಬುದ್ಧಿವಂತಿಕೆಯಿಂದ ಕೆಲಸ ಮಾಡು, ಶುದ್ಧತೆಯಿಂದ ಜೀವನ ನಡೆಸು ಎಂದು ನನಗೆ ಹೇಳಿದ್ದರು ಎಂದು ಮೋದಿ ತಮ್ಮ ತಾಯಿಯ ಬಗ್ಗೆ ಟ್ವೀಟ್ ಮಾಡಿದ್ದರು.
Gandhinagar, Gujarat | Mortal remains of Heeraben Modi, mother of PM Modi being taken for the last rites. pic.twitter.com/h39kmQi0Po
— ANI (@ANI) December 30, 2022
ಇದನ್ನೂ ಓದಿ: Heeraben Modi Obituary: ಬಡತನದಲ್ಲೇ ಜೀವನ ಕಳೆದು, ಸಾರ್ಥಕ 100 ವರ್ಷಗಳ ಅನುಭವ ಹೊತ್ತು ಸಾಗಿದ ಹೀರಾಬೆನ್ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯಿಂದ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಲು ತೆರಳಿದ್ದರು. ಅವರು ಆಸ್ಪತ್ರೆಯಲ್ಲಿ ತಾಯಿಯನ್ನು ಭೇಟಿ ಮಾಡಿ, 1 ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಇದ್ದರು. ಹೀರಾಬೆನ್ ಮೋದಿ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಜೊತೆ ಗಾಂಧಿನಗರ ಬಳಿಯ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಆಗಾಗ ರೈಸನ್‌ಗೆ ಭೇಟಿ ನೀಡುತ್ತಿದ್ದರು. ಗುಜರಾತ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ತಮ್ಮ ತಾಯಿಯೊಂದಿಗೆ ಸಮಯ ಕಳೆಯುತ್ತಿದ್ದರು.
#WATCH | Gandhinagar: Prime Minister Narendra Modi carries the mortal remains of his late mother Heeraben Modi who passed away at the age of 100, today. pic.twitter.com/CWcHm2C6xQ
— ANI (@ANI) December 30, 2022
ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿತ್ತು. ಹೀಗಾಗಿ ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿಂದೆ 2016ರಲ್ಲಿ ಒಮ್ಮೆ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. 108 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಗಾಂಧಿನಗರದ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆದಿದ್ದರು. ಸಾಮಾನ್ಯ ರೋಗಿಗಳಂತೆ ಆಸ್ಪತ್ರೆಯ ಸಾಮಾನ್ಯ ವೈದ್ಯರ ಬಳಿ ತಪಾಸಣೆಗೆ ಒಳಗಾಗಿದ್ದರು.