Heeraben Modi Death: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು.

Heeraben Modi
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.
ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.
(ಮಾಹಿತಿ ಅಪ್ಡೇಟ್ ಆಗುತ್ತಿದೆ)




