AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heeraben Modi Health: ಪ್ರಧಾನಿ ಮೋದಿಯ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಚೇತರಿಕೆ; ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೋದಿ ಅವರ ತಾಯಿ ಹೀರಾಬೆನ್ ಆರೋಗ್ಯ ಚೆನ್ನಾಗಿದೆ. ಅವರ ಆರೋಗ್ಯವು ವೇಗವಾಗಿ ಸುಧಾರಿಸುತ್ತಿದೆ. ಒಂದೋ ಎರಡೋ ದಿನದಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

Heeraben Modi Health: ಪ್ರಧಾನಿ ಮೋದಿಯ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಚೇತರಿಕೆ; ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಪ್ರಧಾನಿ ನರೇಂದ್ರ ಮೋದಿ- ಹೀರಾಬೆನ್
TV9 Web
| Edited By: |

Updated on: Dec 29, 2022 | 3:13 PM

Share

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben Modi) ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಗುಜರಾತ್​ನ ಅಹಮದಾಬಾದ್​​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ದಿನಗಳೊಳಗೆ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಗುಜರಾತ್ ಮುಖ್ಯಮಂತ್ರಿ ಕಚೇರಿ (Gujarat CMO) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೋದಿ ಅವರ ತಾಯಿ ಹೀರಾಬೆನ್ ಆರೋಗ್ಯ ಚೆನ್ನಾಗಿದೆ. ಅವರ ಆರೋಗ್ಯವು ವೇಗವಾಗಿ ಸುಧಾರಿಸುತ್ತಿದೆ. ಒಂದೋ ಎರಡೋ ದಿನದಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿಯಿಂದ ಅವರು ಆಹಾರ ಸೇವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್ ಆಸ್ಪತ್ರೆಗೆ ಭೇಟಿ ನೀಡಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರವೂ ಸಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ದೆಹಲಿಯಿಂದ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಲು ತೆರಳಿದ್ದರು. ಅವರು ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿ, 1 ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಇದ್ದರು. ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಜೊತೆ ಗಾಂಧಿನಗರ ಬಳಿಯ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಾಗ ರೈಸನ್‌ಗೆ ಭೇಟಿ ನೀಡುತ್ತಾರೆ. ಗುಜರಾತ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ತಮ್ಮ ತಾಯಿಯೊಂದಿಗೆ ಸಮಯ ಕಳೆಯುತ್ತಾರೆ.

ಇದನ್ನೂ ಓದಿ: PM Modi Mother Health Updates: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿತ್ತು. ಹೀಗಾಗಿ ಅವರನ್ನು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿಂದೆ 2016ರಲ್ಲಿ ಒಮ್ಮೆ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. 108 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಗಾಂಧಿನಗರದ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆದಿದ್ದರು. ಸಾಮಾನ್ಯ ರೋಗಿಗಳಂತೆ ಆಸ್ಪತ್ರೆಯ ಸಾಮಾನ್ಯ ವೈದ್ಯರ ಬಳಿ ತಪಾಸಣೆಗೆ ಒಳಗಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ