ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ತಾಯಿಗೆ ಕೊರೊನಾ ಲಸಿಕೆ; ಅರ್ಹರೆಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ನೀಡಿದ ಪ್ರಧಾನಿ
ನರೇಂದ್ರ ಮೋದಿ, ಹೀರಾಬೆನ್​ ಮೋದಿ
Follow us
Skanda
| Updated By: ರಶ್ಮಿ ಕಲ್ಲಕಟ್ಟ

Updated on: Mar 11, 2021 | 4:36 PM

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇತ್ತೀಚೆಗಷ್ಟೇ ಮತ್ತೊಂದು ಹಂತದ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆ ಪಡೆಯುವ ಮೂಲಕ ಜನಸಾಮಾನ್ಯರಿಗೆ ಧೈರ್ಯ ತುಂಬಿದ್ದಾರೆ. ಇದೀಗ ಪ್ರಧಾನಿಯವರ ತಾಯಿ ಹೀರಾಬೆನ್ ಸಹ ಕೊರೊನಾ ಲಸಿಕೆ ಸ್ವೀಕರಿಸಿದ್ದು, ಈ ವಿಷಯವನ್ನು ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ನನ್ನ ತಾಯಿ ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವೂ ನಿಮ್ಮ ಸುತ್ತಮುತ್ತಲಿರುವ ಅರ್ಹ ವ್ಯಕ್ತಿಗಳಿಗೆ ಕೊರೊನಾ ಲಸಿಕೆ ಸ್ವೀಕರಿಸುವಂತೆ ಪ್ರೇರೇಪಿಸಬೇಕು ಎಂದು ಎಲ್ಲರ ಬಳಿ ಕೋರಿಕೊಳ್ಳುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನ ಮಂತ್ರಿಗಳ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದು, ಮೋದಿ ಮತ್ತು ಅವರ ತಾಯಿ ಜೊತೆಯಲ್ಲಿ ಇರುವ ಫೋಟೋಗಳನ್ನು ಕಮೆಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಕೊವ್ಯಾಕ್ಸಿನ್​ಗೆ ‘ವೈದ್ಯಕೀಯ ಪ್ರಯೋಗ ಹಂತ’ ಪಟ್ಟದಿಂದ ಮುಕ್ತಿ ಭಾರತೀಯ ಸಂಸ್ಥೆ ಭಾರತ್​ ಬಯೋಟೆಕ್​ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಗೆ ಅಂತಿಮವಾಗಿ ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆ ಎಂಬ ಪಟ್ಟದಿಂದ ಮುಕ್ತಿ ಸಿಕ್ಕಿದೆ. ಕೊವ್ಯಾಕ್ಸಿನ್​ ಲಸಿಕೆ ವಿತರಣೆಗೆ ಸರ್ಕಾರ ಅನುಮತಿ ಸೂಚಿಸಿದ ಸಂದರ್ಭದಲ್ಲಿ ಇದೇ ವಿಚಾರವನ್ನಿಟ್ಟುಕೊಂಡು ಹಲವರು ಕಟುವಾಗಿ ಟೀಕಿಸಿದ್ದರು ಹಾಗೂ ಲಸಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು. ವೈದ್ಯಕೀಯ ಪ್ರಯೋಗ ಹಂತದಲ್ಲಿರುವ ಲಸಿಕೆಯನ್ನು ಜನರಿಗೆ ನೀಡಿದ ನಂತರ ಏನಾದರೂ ಹೆಚ್ಚೂಕಡಿಮೆ ಆದರೆ ಯಾರು ಗತಿ ಎಂಬ ಆತಂಕ ಅನೇಕರನ್ನು ಕಾಡಿತ್ತು. ಆದರೂ ಸರ್ಕಾರ, ಸಂಸ್ಥೆ ಮತ್ತು ಕೆಲ ತಜ್ಞರು ಲಸಿಕೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ಬೇಡ ಎಂದು ಪದೇ ಪದೇ ಧೈರ್ಯ ತುಂಬುತ್ತಲೇ ಬಂದಿದ್ದರು.

ಇದೀಗ, ಕೊವ್ಯಾಕ್ಸಿನ್​ ಲಸಿಕೆಯನ್ನು ವೈದ್ಯಕೀಯ ಪ್ರಯೋಗ ಹಂತದಿಂದ ತೆಗೆಯಲು ಮಾಡಿದ್ದ ವಿಷಯ ತಜ್ಞರ ಸಮಿತಿ ಶಿಫಾರಸನ್ನು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನ (DCGI) ಒಪ್ಪಿಕೊಂಡಿದೆ. ಈ ಬಗ್ಗೆ ಭಾರತ್ ಬಯೋಟೆಕ್​ ಸಂಸ್ಥೆಗೆ ಮಾಹಿತಿಯನ್ನೂ ನೀಡಲಾಗಿದ್ದು, ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗದ ಹಂತದಲ್ಲಿದೆ ಎನ್ನುವುದನ್ನು ತೆಗೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೊ ಅಳಿಸಲಿದೆ ಆರೋಗ್ಯ ಸಚಿವಾಲಯ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್