Heeralal Samariya: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ

|

Updated on: Nov 06, 2023 | 12:08 PM

ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ(Heeralal Samariya)  ಅಧಿಕಾರವಹಿಸಿಕೊಂಡಿದ್ದಾರೆ. ವೈಕೆ ಸಿನ್ಹಾ ಅವರ ಅಧಿಕಾರಾವಧಿ ಅಕ್ಟೋಬರ್ 3 ರಂದು ಕೊನೆಗೊಂಡ ನಂತರ ಈ ಉನ್ನತ ಹುದ್ದೆ ಖಾಲಿಯಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮರಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Heeralal Samariya: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ
ಹೀರಾಲಾಲ್ ಸಾಮರಿಯಾ
Image Credit source: NDTV
Follow us on

ಕೇಂದ್ರ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಹೀರಾಲಾಲ್ ಸಾಮರಿಯಾ(Heeralal Samariya)  ಅಧಿಕಾರವಹಿಸಿಕೊಂಡಿದ್ದಾರೆ. ವೈಕೆ ಸಿನ್ಹಾ ಅವರ ಅಧಿಕಾರಾವಧಿ ಅಕ್ಟೋಬರ್ 3 ರಂದು ಕೊನೆಗೊಂಡ ನಂತರ ಈ ಉನ್ನತ ಹುದ್ದೆ ಖಾಲಿಯಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮರಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಹೀರಾಲಾಲ್ ಸಾಮರಿಯಾ ಅವರು ದೇಶದ ಮೊದಲ ದಲಿತ ಮುಖ್ಯ ಮಾಹಿತಿ ಆಯುಕ್ತರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಾಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ನಂತರ ಎಂಟು ಮಾಹಿತಿ ಆಯುಕ್ತರ ಹುದ್ದೆಗಳು ಖಾಲಿ ಇವೆ. ಸದ್ಯ ಆಯೋಗದಲ್ಲಿ ಇಬ್ಬರು ಮಾಹಿತಿ ಆಯುಕ್ತರಿದ್ದಾರೆ.

ಅಕ್ಟೋಬರ್ 30 ರಂದು ಸುಪ್ರೀಂ ಕೋರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದ ನಂತರ ನೇಮಕ ಪ್ರಕ್ರಿಯೆ ನಡೆದಿತ್ತು. ರಾಜಸ್ಥಾನದ ಭರತ್‌ಪುರ ಜಿಲ್ಲೆಯ ನಿವಾಸಿ ಸಾಮರಿಯಾ, 1985ರ ಬ್ಯಾಚ್‌ನ ಐಎಎಸ್ ಅಧಿಕಾರಿ.

ಸಿಐಸಿ ಮತ್ತು ರಾಜ್ಯ ಮಾಹಿತಿ ಆಯೋಗಗಳಲ್ಲಿ (ಎಸ್‌ಐಸಿ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಇದು ಆಗದಿದ್ದಲ್ಲಿ ಮಾಹಿತಿ ಹಕ್ಕು ಕಾಯ್ದೆ ನಿಷ್ಪರಿಣಾಮಕಾರಿಯಾಗಲಿದೆ ಎಂದು ನ್ಯಾಯಾಲಯ ಅಕ್ಟೋಬರ್ 30ರಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮಂಜೂರಾದ ಹುದ್ದೆಗಳು, ರಾಜ್ಯ ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳು ಮತ್ತು ಅಲ್ಲಿ ಬಾಕಿ ಉಳಿದಿರುವ ಒಟ್ಟು ಪ್ರಕರಣಗಳು ಸೇರಿದಂತೆ ಹಲವು ಅಂಶಗಳ ಕುರಿತು ಎಲ್ಲಾ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಲು ಡಿಒಪಿಟಿಗೆ ಸೂಚಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ