AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joshimath Helicopter Crash: ಉತ್ತರಾಖಂಡದ ಜೋಶಿಮಠದ ಬಳಿ 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಉತ್ತರಾಖಂಡದ ಜೋಶಿಮಠ ಸಮೀಪ ಟ್ರಾನ್ಸ್‌ಭಾರತ್ ಏವಿಯೇಷನ್ ಹೆಲಿಕಾಪ್ಟರ್ ಪತನಗೊಂಡಿದೆ. ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್​ನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪರ್ವತ ಪ್ರದೇಶದಲ್ಲಿ ಕೆಟ್ಟ ಹವಾಮಾನ ಮತ್ತು ಕಡಿಮೆ ಗೋಚರತೆ ಅಪಘಾತಕ್ಕೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

Joshimath Helicopter Crash: ಉತ್ತರಾಖಂಡದ ಜೋಶಿಮಠದ ಬಳಿ 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ
ಹೆಲಿಕಾಪ್ಟರ್​
ನಯನಾ ರಾಜೀವ್
|

Updated on:Oct 30, 2026 | 3:24 PM

Share

ಉತ್ತರಾಖಂಡ, ಅಕ್ಟೋಬರ್ 30: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ  ಹೆಲಿಕಾಪ್ಟರ್​ ಪತನಗೊಂಡಿದೆ. ಟ್ರಾನ್ಸ್‌ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್​ನಲ್ಲಿ 6 ಮಂದಿ ಇದ್ದರು ಎನ್ನಲಾಗಿದೆ. ಒಂದೇ ಕುಟುಂಬದ ಐದು ಮಂದಿ ಓರ್ವ ಪೈಲಟ್ ಸೇರಿ ಒಟ್ಟು ಆರು ಮಂದಿ ಇದ್ದರು. ಹೆಲಿಕಾಪ್ಟರ್ ಬದರಿನಾಥ ಧಾಮದಿಂದ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಚಾಯ್ ಮತ್ತು ಥಾಯಾಂಗ್ ಗ್ರಾಮಗಳ ಸಮೀಪ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಕೆಟ್ಟ ಹವಾಮಾನ ಮತ್ತು ಕಡಿಮೆ ಗೋಚರತೆ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತದ ನಿಖರ ಕಾರಣ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ಹೆಲಿಕಾಪ್ಟರ್ ಪತ್ತೆಗೆ ನಡೆದ ಕಾರ್ಯಾಚರಣೆ ಹೆಲಿಕಾಪ್ಟರ್ ನಿಗದಿತ ಸಮಯಕ್ಕೆ ಸಂಪರ್ಕಕ್ಕೆ ಬಾರದ ಹಿನ್ನೆಲೆಯಲ್ಲಿ ಅದು ನಾಪತ್ತೆಯಾಗಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ದೊರೆತಿತ್ತು. ತಕ್ಷಣವೇ ಪೊಲೀಸರು, ಜಿಲ್ಲಾಡಳಿತ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ನಂತರ ಸೇನೆಯಿಂದ ದೊರೆತ ಮಾಹಿತಿ ಆಧರಿಸಿ ಅಪಘಾತ ನಡೆದ ಸ್ಥಳವನ್ನು ಪತ್ತೆಹಚ್ಚಲಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿಯ ಸ್ಥಿತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಪರ್ವತ ಪ್ರದೇಶದಲ್ಲಿ ಹವಾಮಾನ ಸವಾಲು ಉತ್ತರಾಖಂಡದ ಚಾರ್‌ಧಾಮ್ ಯಾತ್ರೆಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಸೇವೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಲಾಗುತ್ತದೆ. ವಿಶೇಷವಾಗಿ ಬದರಿನಾಥ, ಕೇದಾರನಾಥ ಸೇರಿದಂತೆ ಎತ್ತರದ ಪರ್ವತ ಪ್ರದೇಶಗಳಿಗೆ ತೆರಳುವ ಯಾತ್ರಿಕರಿಗೆ ಈ ಸೇವೆಗಳು ಅನುಕೂಲಕರವಾಗಿವೆ. ಆದರೆ ಪರ್ವತ ಪ್ರದೇಶಗಳಲ್ಲಿ ಹವಾಮಾನ ಕ್ಷಣಕ್ಷಣಕ್ಕೂ ಬದಲಾಗುತ್ತದೆ. ದಟ್ಟ ಮೋಡ, ಮಳೆ, ಮಂಜು ಮತ್ತು ಕಡಿಮೆ ಗೋಚರತೆಯಿಂದ ಹೆಲಿಕಾಪ್ಟರ್‌ಗಳ ಹಾರಾಟ ಅಪಾಯಕಾರಿಯಾಗಬಹುದು. ಹೀಗಾಗಿ ಹವಾಮಾನ ಪರಿಶೀಲನೆ ಮತ್ತು ಸುರಕ್ಷತಾ ನಿಯಮಗಳ ಪಾಲನೆ ಅತ್ಯಂತ ಮುಖ್ಯ.

ತನಿಖೆಯಿಂದಷ್ಟೇ ಅಪಘಾತದ ನಿಖರ ಕಾರಣ ತಿಳಿಯಲಿದೆ. ಅಪಘಾತದ ಸ್ಥಳದ ಪರಿಶೀಲನೆ, ಹೆಲಿಕಾಪ್ಟರ್‌ನ ತಾಂತ್ರಿಕ ಸ್ಥಿತಿ, ಹಾರಾಟದ ಮಾರ್ಗ ಮತ್ತು ಹವಾಮಾನದ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ದುರಂತಕ್ಕೆ ನಿಖರ ಕಾರಣ ತಿಳಿಯಲಿದೆ. ಗಾಯಾಳುಗಳನ್ನು ಏರ್​ಲಿಫ್ಟ್​ ಮಾಡುವಂತೆ ಸಿಎಂ ಪುಷ್ಕರ್ ಧಾಮಿ ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:07 pm, Fri, 30 October 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More