Sri Sri Ravi Shankar Guruji: ಶ್ರೀ ಶ್ರೀ ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶಿಸಿದೆ.

Sri Sri Ravi Shankar Guruji: ಶ್ರೀ ಶ್ರೀ ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
ಶ್ರೀ ಶ್ರೀ ರವಿಶಂಕರ್ ಗುರೂಜಿ

Updated on: Jan 25, 2023 | 1:13 PM

ಶ್ರೀ ಶ್ರೀ  ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆರ್ಟ್​ ಆಫ್ ಲಿವಿಂಗ್ ಸಂಸ್ಥಾಪಕರಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಹಾಗೂ ಇತರರು ತೆರಳುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಲ್ಯಾಂಡಿಂಗ್ ಆಗಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ (STR) ಬುಡಕಟ್ಟು ಕುಗ್ರಾಮವಾದ ಉಕಿನಿಯಂನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ವಿಮಾನದಲ್ಲಿದ್ದ ರವಿಶಂಕರ್ ಮತ್ತು ಇತರ ಮೂವರು, ಇಬ್ಬರು ಸಹಾಯಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ.

ಶ್ರೀ ಶ್ರೀ ರವಿಶಂಕರ್ ಗುರೂಜಿ ಬೆಂಗಳೂರಿನಿಂದ ಕಡಂಬೂರಿಗೆ 10.15ರಲ್ಲಿ ತೆರಳುತ್ತಿದ್ದರು. ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್​ ಹಾರಾಟ ಸಾಧ್ಯವಾಗಲಿಲ್ಲ, ಹಾಗಾಗಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 1:01 pm, Wed, 25 January 23