AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Helicopter Crash: ರಾಯ್​ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್​ಗಳ ಸಾವು

Raipur Chopper Crash: ಪೈಲಟ್‌ಗಳು ಹೆಲಿಕಾಪ್ಟರ್‌ ಅನ್ನು ಇಳಿಸಲು ಪ್ರಯತ್ನಿಸಿದಾಗ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರಿರಲಿಲ್ಲ.

Helicopter Crash: ರಾಯ್​ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್​ಗಳ ಸಾವು
ರಾಯ್​ಪುರ ಏರ್​ಪೋರ್ಟ್​ನಲ್ಲಿ ಹೆಲಿಕಾಪ್ಟರ್​ ಪತನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 13, 2022 | 1:40 PM

ರಾಯ್‌ಪುರ: ಛತ್ತೀಸ್‌ಗಢದ ರಾಯ್‌ಪುರದ ವಿಮಾನ ನಿಲ್ದಾಣದಲ್ಲಿ (Raipur Airport) ಗುರುವಾರ ಸಂಜೆ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೈಲಟ್‌ಗಳು ಹೆಲಿಕಾಪ್ಟರ್‌ ಅನ್ನು ಇಳಿಸಲು ಪ್ರಯತ್ನಿಸಿದಾಗ ಹೆಲಿಕಾಪ್ಟರ್‌ಗೆ (Helicopter Crash) ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರಿರಲಿಲ್ಲ.

ಮನ ಪೊಲೀಸ್ ಠಾಣೆ ವ್ಯಾಪ್ತಿಯ ರಾಯ್‌ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ರಾತ್ರಿ 9.10ರ ಸುಮಾರಿಗೆ ವಿಮಾನ ಹಾರಾಟದ ಅಭ್ಯಾಸದ ವೇಳೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ. ಈ ಅಪಘಾತದ ಕಾರಣದಿಂದ ತಕ್ಷಣವೇ ತಿಳಿದುಬಂದಿಲ್ಲ. ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(DGCA) ಮತ್ತು ಛತ್ತೀಸ್‌ಗಢ ಸರ್ಕಾರದ ಪರವಾಗಿ ವಿವರವಾದ ತಾಂತ್ರಿಕ ತನಿಖೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.

“ರಾಯಪುರದ ವಿಮಾನ ನಿಲ್ದಾಣದಲ್ಲಿ ರಾಜ್ಯದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಬಗ್ಗೆ ದುಃಖದ ಸುದ್ದಿ ಬಂದಿದೆ. ಈ ದುರಂತ ಅಪಘಾತದಲ್ಲಿ, ನಮ್ಮ ಪೈಲಟ್‌ಗಳಾದ ಕ್ಯಾಪ್ಟನ್ ಪಾಂಡ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬ ಸದಸ್ಯರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಛತ್ತೀಸ್‌ಗಢ ಸರ್ಕಾರಕ್ಕೆ ಸೇರಿದ ಹೆಲಿಕಾಪ್ಟರ್ ಮೇ 12ರಂದು ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಪತನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದರು. ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಹಾರಾಟದ ಅಭ್ಯಾಸದ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ.

ಎನ್‌ಡಿಟಿವಿ ವರದಿ ಪ್ರಕಾರ, ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ ಮತ್ತು ರಾಜ್ಯ ಸರ್ಕಾರದ ಆದೇಶದ ಆಧಾರದ ಮೇಲೆ ಘಟನೆಯ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಪೈಲಟ್‌ಗಳನ್ನು ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.

2007ರಲ್ಲಿ ರಮಣ್ ಸಿಂಗ್ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಖರೀದಿಸಿದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಲವಾರು ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದನ್ನು ಹೆಚ್ಚಿಸಿದ ಬೆಲೆಗೆ ಖರೀದಿಸಲಾಗಿದೆ, ಈ ವಿಷಯವನ್ನು ಪ್ರತಿಪಕ್ಷ ಕಾಂಗ್ರೆಸ್ ಆ ಸಮಯದಲ್ಲಿ ನ್ಯಾಯಾಲಯದಲ್ಲಿ ಪ್ರಸ್ತಾಪಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಲಿಕಾಪ್ಟರ್ ಅನ್ನು ಹೆಚ್ಚಾಗಿ ಮುಖ್ಯಮಂತ್ರಿಗಾಗಿ ಬಳಸುತ್ತಿದೆ. ಹೆಲಿಕಾಪ್ಟರ್‌ನ ಸುರಕ್ಷತೆಯ ಕಾಳಜಿಯ ನಂತರ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಪ್ರಸ್ತುತ ಕ್ಷೇತ್ರಗಳ ಪ್ರವಾಸಕ್ಕಾಗಿ ಮತ್ತೊಂದು ಹೆಲಿಕಾಪ್ಟರ್ ಅನ್ನು ಎರವಲು ಪಡೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್