Helicopter Crash in Uttarkashi: ಉತ್ತರಾಖಂಡ: ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ಸಾವು

ಚಾರ್ ಧಾಮ್ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತರಾಖಂಡದ ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿ ಐವರು ಸಾವಿಗೀಡಾಗಿದ್ದಾರೆ. 7 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಐದು ಮಂದಿ ಮೃತಪಟ್ಟಿದ್ದರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ. ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

Helicopter Crash in Uttarkashi: ಉತ್ತರಾಖಂಡ: ಉತ್ತರಕಾಶಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ಸಾವು
Helicopter Crash
Image Credit source: ANI

Updated on: May 08, 2025 | 10:17 AM

ಉತ್ತರಕಾಶಿ, ಮೇ 8: ಉತ್ತರಾಖಂಡದ (Uttarakhand) ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.

ಹೆಲಿಕಾಪ್ಟರ್ ಪತನವನ್ನು ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ. ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಪರಿಹಾರ ತಂಡಗಳು ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ ಎಂದು ಅವರು ತಿಳಿಸಿರುವುದಾಗಿ ‘ಎಎನ್​​ಐ’ ಟ್ವೀಟ್ ಮಾಡಿದೆ.

ಇದನ್ನೂ ಓದಿ
ಉಗ್ರ ಮಸೂದ್ ಅಜರ್​ಗೆ ಮನೆಯವರೇ ಸತ್ತರೂ ಕಣ್ಣೀರಿಲ್ಲ, ಹತಾಶೆಯಿಲ್ಲ!
ಯುದ್ಧದ ಉದ್ವಿಗ್ನತೆ: ದೇಶಾದ್ಯಂತ ಮಾಕ್​ ಡ್ರಿಲ್​ ದರ್ಶನ ಹೇಗಿತ್ತು?
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಮಸೂದ್ ಅಜರ್, ಹಫೀಜ್ ಸಯೀದ್ ಸಾವು?

ಹೆಲಿಕಾಪ್ಟರ್ ಪತನದ ಚಿತ್ರಗಳು


ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿರುವುದು ದುಃಖ ತಂದಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿವೆ. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಧಾಮಿ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಉಗ್ರ ಮಸೂದ್ ಅಜರ್​ಗೆ ಮನೆಯವರೇ ಸತ್ತರೂ ಕಣ್ಣೀರಿಲ್ಲ, ಹತಾಶೆಯಿಲ್ಲ: ಭಯೋತ್ಪಾದನೆಯೇ ಕನಸು!

ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಅಪಘಾತದ ತನಿಖೆ ನಡೆಸಲು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ, ನಾನು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪ್ರತಿಯೊಂದು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಧಾಮಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Thu, 8 May 25