ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ತಬ್ಲಿಘಿಯಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
Edited By:

Updated on: Dec 21, 2020 | 7:19 PM

ನವದೆಹಲಿ: ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರ ಮೇಲಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್​​ ಖುಲಾಸೆಗೊಳಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ 36 ವಿದೇಶಿಯರು ಅವರ ದೇಶಗಳಿಗೆ ಹಿಂದಿರುಗಲು ಸಹಾಯ ಮಾಡಿ ಎಂದು ನಿರ್ದೇಶನ ನೀಡಿದೆ.

ಮಾರ್ಚ್​​ನಲ್ಲಿ ಕೊರೊನಾ ವೈರಸ್​ ಭಾರತದಲ್ಲಿ ನಿಧಾನವಾಗಿ ಹಬ್ಬಲು ಆರಂಭಿಸಿತ್ತು. ಆದಾಗ್ಯೂ ದೆಹಲಿಯಲ್ಲಿ ತಬ್ಲಿಘಿ ಜಮಾತ್​ ಕಾರ್ಯಕ್ರಮ ನಡೆಸಲಾಗಿತ್ತು. ಇಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಕೊರೊನಾ ವೈರಸ್​ ಹಬ್ಬಿತ್ತು. ಈ ದೇಶದಲ್ಲಿ ಕೊರೊನಾ ವೈರಸ್​ ಹರಡಿದ್ದೇ ಇವರಿಂದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 36 ವಿದೇಶಿಗರ ವಿರುದ್ಧ ಚಾರ್ಜ್​​ಶೀಟ್​ ಕೂಡ ಸಲ್ಲಿಕೆ ಆಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಡಿಸೆಂಬರ್ 15ರಂದು ಪ್ರಕರಣವನ್ನು ಖುಲಾಸೆ ಮಾಡಿತ್ತು.

ದೋಷಮುಕ್ತಗೊಂಡವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ನ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ವಿದೇಶಿಗರ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ, ವಿದೇಶಿಯರು ಸುಗಮವಾಗಿ ನಿರ್ಗಮಿಸಲು ನ್ಯಾಯಪೀಠ ಹಸ್ತಕ್ಷೇಪ ಮಾಡಬೇಕು ಎಂದು ಕೋರಿದರು. ಈ ವಿನಂತಿಗೆ ಪ್ರಕ್ರಿಯಿಸಿದ ನ್ಯಾಯಾಲಯ, ಇದಕ್ಕಾಗಿ ನಾವು ನೋಡೆಲ್ ಅಧಿಕಾರಿ ನೇಮಕ ಮಾಡುತ್ತೇವೆ. ಈ ವಿದೇಶಿಯರು ನೋಡೆಲ್​ ಅಧಿಕಾರಿಯನ್ನು ಸಂಪರ್ಕಿಸಿ, ಅವರ ನೆರವಿನೊಂದಿಗೆ ವಿದೇಶಕ್ಕೆ ಮರಳಬಹುದು ಎಂದು ಭರವಸೆ ನೀಡಿತು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us