ಜಾರ್ಖಂಡ್ ಸಿಎಂ ಆಗಿ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಜಾರ್ಖಂಡ್​ ಮುಖ್ಯಮಂತ್ರಿಯಾಗಿ ನಾಳೆ (ಗುರುವಾರ) ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಜಾರ್ಖಂಡ್ ಸಿಎಂ ಆಗಿ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಹೇಮಂತ್ ಸೋರೆನ್
Follow us
ಸುಷ್ಮಾ ಚಕ್ರೆ
|

Updated on: Nov 27, 2024 | 7:08 PM

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಇಂಡಿಯಾ ಬಣದ ಹಿರಿಯ ನಾಯಕರು ನವೆಂಬರ್ 28ರಂದು ಹೇಮಂತ್ ಸೊರೇನ್ ನೇತೃತ್ವದ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಹೇಮಂತ್ ಸೊರೇನ್ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ನಿರ್ಧಾರವೇ ಅಂತಿಮ; ಮಹಾರಾಷ್ಟ್ರ ಸಿಎಂ ಸ್ಥಾನದ ಕುರಿತು ಏಕನಾಥ್ ಶಿಂಧೆ ಸ್ಪಷ್ಟನೆ

ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಮೈತ್ರಿ ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. 81 ಸದಸ್ಯ ಬಲದ ಅಸೆಂಬ್ಲಿಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಪಡೆದುಕೊಂಡಿತು. ಹೇಮಂತ್ ಸೊರೇನ್ ಅವರು ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ಅವರನ್ನು 39,791 ಮತಗಳ ಅಂತರದಿಂದ ಸೋಲಿಸುವ ಮೂಲಕ ಬರ್ಹೈತ್ ಸ್ಥಾನವನ್ನು ಉಳಿಸಿಕೊಂಡರು.

ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧಿಸಿತು ಮತ್ತು 34 ಸ್ಥಾನಗಳನ್ನು ಗೆದ್ದುಕೊಂಡಿತು. ಇದು ಪಕ್ಷದ ಇತಿಹಾಸದಲ್ಲಿಯೇ ಅತ್ಯಧಿಕ ಮೊತ್ತವಾಗಿದೆ. ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ 16 ಸ್ಥಾನಗಳನ್ನು, ಆರ್‌ಜೆಡಿ 4 ಸ್ಥಾನಗಳನ್ನು ಮತ್ತು ಸಿಪಿಐ (ಎಂಎಲ್) 2 ಸ್ಥಾನಗಳನ್ನು ಪಡೆದುಕೊಂಡಿದೆ. ಆರ್‌ಜೆಡಿಗೆ ಒಬ್ಬ ಸಚಿವ ಸ್ಥಾನ ಸಿಗಬಹುದು.

ಇದನ್ನೂ ಓದಿ: Maharashtra CM: ಮಹಾರಾಷ್ಟ್ರದ ಸಿಎಂ ರೇಸ್​ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ

ಇದೇ ವೇಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ನಡೆದಿದೆ. ಹೇಮಂತ್ ಸೋರೆನ್ ಭಾನುವಾರ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಬಳಿಕ ಜಾರ್ಖಂಡ್ ರಾಜ್ಯದಲ್ಲಿನ ಇಂಡಿಯಾ ಬ್ಲಾಕ್‌ನ ನಾಯಕರು ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾತಾಡಿದರೆ ಯತ್ನಾಳ್ ಸರಿಹೋಗುತ್ತಾರೆ, ಸಮಸ್ಯೆಯೇನೂ ಇಲ್ಲ: ಯಡಿಯೂರಪ್ಪ
ಮಾತಾಡಿದರೆ ಯತ್ನಾಳ್ ಸರಿಹೋಗುತ್ತಾರೆ, ಸಮಸ್ಯೆಯೇನೂ ಇಲ್ಲ: ಯಡಿಯೂರಪ್ಪ
ಅಂಬೇಡ್ಕರ್ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವೆಂದು ಆಚರಣೆ
ಅಂಬೇಡ್ಕರ್ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವೆಂದು ಆಚರಣೆ
ಬಣ ಬಡಿದಾಟ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ: ಅನ್ನದಾನಿ, ಶಾಸಕ
ಬಣ ಬಡಿದಾಟ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ: ಅನ್ನದಾನಿ, ಶಾಸಕ
ನಿತ್ಯ ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ವಿಡಿಯೋ ನೋಡಿ
ನಿತ್ಯ ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಧನಲಾಭ ನಿಶ್ಚಿತ!
Daily Horoscope: ಈ ರಾಶಿಯವರಿಗೆ ಇಂದು ಧನಲಾಭ ನಿಶ್ಚಿತ!
ತಮ್ಮ- ಶಿವಕುಮಾರ್ ನಡುವಿನ ಒಳಒಪ್ಪಂದದ ಬಗ್ಗೆ ಸಿಎಂ ತಿಳಿಸಬೇಕು: ವಿಜಯೇಂದ್ರ
ತಮ್ಮ- ಶಿವಕುಮಾರ್ ನಡುವಿನ ಒಳಒಪ್ಪಂದದ ಬಗ್ಗೆ ಸಿಎಂ ತಿಳಿಸಬೇಕು: ವಿಜಯೇಂದ್ರ
ಚಿರತೆಯ ಕುತ್ತಿಗೆ ಹಿಡಿದು ಪೋಸ್ ಕೊಟ್ಟ ಗ್ರಾಮಸ್ಥರು; ವಿಡಿಯೋ ವೈರಲ್
ಚಿರತೆಯ ಕುತ್ತಿಗೆ ಹಿಡಿದು ಪೋಸ್ ಕೊಟ್ಟ ಗ್ರಾಮಸ್ಥರು; ವಿಡಿಯೋ ವೈರಲ್
ಉಡುಪಿ ಬಳಿ ಕಾರು ಪಲ್ಟಿ; ರಸ್ತೆ ಬದಿ ನಿಂತಿದ್ದ ವೃದ್ಧರಿಗೆ ಗಾಯ
ಉಡುಪಿ ಬಳಿ ಕಾರು ಪಲ್ಟಿ; ರಸ್ತೆ ಬದಿ ನಿಂತಿದ್ದ ವೃದ್ಧರಿಗೆ ಗಾಯ
ಉಜ್ಜಯಿನಿ ದೇವಸ್ಥಾನದಲ್ಲಿ ದೇವರ ಮುಂದಿಟ್ಟಿದ್ದ ಹಾಲು ಕುಡಿದ ನಾಯಿ
ಉಜ್ಜಯಿನಿ ದೇವಸ್ಥಾನದಲ್ಲಿ ದೇವರ ಮುಂದಿಟ್ಟಿದ್ದ ಹಾಲು ಕುಡಿದ ನಾಯಿ
ಅವರು ಮಾಡೋದು ಹೋರಾಟ ಅದರೆ ನಮ್ಮದು ಶಕ್ತಿ ಪ್ರದರ್ಶನವಾ? ಕುಮಾರ ಬಂಗಾರಪ್ಪ
ಅವರು ಮಾಡೋದು ಹೋರಾಟ ಅದರೆ ನಮ್ಮದು ಶಕ್ತಿ ಪ್ರದರ್ಶನವಾ? ಕುಮಾರ ಬಂಗಾರಪ್ಪ