Hemant Soren: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಸಂಜೆ ಹೇಮಂತ್ ಸೋರೆನ್ ಪ್ರಮಾಣ ವಚನ ಸ್ವೀಕಾರ

Jharkhand CM Oath Taking Ceremony: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ತಮ್ಮ ಸಚಿವ ಸಂಪುಟದೊಂದಿಗೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಾರ್ಖಂಡ್ ರಾಜ್ಯಪಾಲ ಸಿ. ಪಿ ರಾಧಾಕೃಷ್ಣನ್ ಅವರು ಇಂದು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರನ್ನು ರಾಜ್ಯದಲ್ಲಿ ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ.

Hemant Soren: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಸಂಜೆ ಹೇಮಂತ್ ಸೋರೆನ್ ಪ್ರಮಾಣ ವಚನ ಸ್ವೀಕಾರ
ಹೇಮಂತ್ ಸೋರೆನ್
Follow us
ಸುಷ್ಮಾ ಚಕ್ರೆ
|

Updated on: Jul 04, 2024 | 4:21 PM

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಇಂದು (ಗುರುವಾರ) ಸಂಜೆ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಹೇಮಂತ್ ಸೊರೆನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿಯಾಗಿರುವ ಹೇಮಂತ್ ಸೋರೆನ್ ಭೂ ಹಗರಣ ಪ್ರಕರಣದಲ್ಲಿ ಸುಮಾರು 5 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ನಂತರ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜಾರ್ಖಂಡ್ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೇಮಂತ್ ಸೊರೆನ್ ಬಂಧನದ ನಂತರ ಫೆಬ್ರವರಿ 2ರಂದು ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೆನ್ ರಾಜೀನಾಮೆ ನೀಡಿದ ನಂತರ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಬುಧವಾರ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದನ್ನೂ ಓದಿ: ಜಾರ್ಖಂಡ್‌ನಿಂದ ಬಿಜೆಪಿಯನ್ನು ತೊಡೆದುಹಾಕುತ್ತೇವೆ: ಮಾಜಿ ಸಿಎಂ ಹೇಮಂತ್ ಸೊರೇನ್

ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಪುತ್ರ ಹೇಮಂತ್ ಸೊರೆನ್ ಅವರು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜೂನ್ 28ರಂದು ಜೈಲಿನಿಂದ ಬಿಡುಗಡೆಗೊಂಡರು. ಬುಧವಾರ, ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟವು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ.

ಜಾರಿ ನಿರ್ದೇಶನಾಲಯದಿಂದ ಜನವರಿ 31ರಂದು ಬಂಧಿಸುವ ಮುನ್ನವೇ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೇಮಂತ್ ಸೊರೆನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ನವದೆಹಲಿಯ ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Hemant Soren: ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಸರ್ಕಾರ ರಚಿಸಲಿದ್ದಾರೆ ಹೇಮಂತ್ ಸೊರೇನ್

ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಬಲ 45 ಶಾಸಕರಿಗೆ ಇಳಿಯಿತು. ಜೆಎಂಎಂ-27, ಕಾಂಗ್ರೆಸ್-17 ಮತ್ತು ಆರ್‌ಜೆಡಿ-1 ಸ್ಥಾನವನ್ನು ಹೊಂದಿದೆ.

ಇದಕ್ಕೂ ಮುನ್ನ ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಅವರು ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜುಲೈ 7ರಂದು ನಡೆಯಲಿದೆ ಎಂದು ತಿಳಿಸಿದ್ದರು. ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಮತ್ತು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ. ಈ ಕ್ಯಾಬಿನೆಟ್‌ನೊಂದಿಗೆ ಸಿಎಂ ಜುಲೈ 7ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ಸಮಾರಂಭ ಕೊನೆ ಕ್ಷಣದಲ್ಲಿ ಇಂದೇ ನಿಗದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್