ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ಪತ್ನಿ?; ಬಿಜೆಪಿ ಸಂಸದರ ಟ್ವೀಟ್

ಜಾರ್ಖಂಡ್‌ನ ಗೊಡ್ಡಾದ ಬಿಜೆಪಿ ಸಂಸದ ದುಬೆ, ಹೊಸ ವರ್ಷವು "ಸೋರೆನ್ ಕುಟುಂಬಕ್ಕೆ ನೋವು ತರಬಹುದು" ಎಂದು ಹೇಳಿದರು. "ಜಾರ್ಖಂಡ್‌ನ ಗಂಡೇ ಶಾಸಕ ಸರ್ಫರಾಜ್ ಅಹ್ಮದ್ ಅವರು ವಿಧಾನಸಭೆಗೆ ರಾಜೀನಾಮೆ ನೀಡಿದ್ದು ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಶೀಘ್ರದಲ್ಲೇ, ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ಪತ್ನಿ?; ಬಿಜೆಪಿ ಸಂಸದರ ಟ್ವೀಟ್
ಹೇಮಂತ್ ಸೊರೆನ್
Follow us
|

Updated on: Jan 01, 2024 | 5:13 PM

ರಾಂಚಿ ಜನವರಿ 01: ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ (Hemant Soren) ರಾಜೀನಾಮೆ ನೀಡಲಿದ್ದು, ಅವರ ಪತ್ನಿ ಕಲ್ಪನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ (BJP MP Nishikant Dubey) ಹೇಳಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಶಾಸಕರೊಬ್ಬರು ವೈಯಕ್ತಿಕ ಕಾರಣಗಳನ್ನು ನೀಡಿ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಬಹುದು ಎಂದು ಸೊರೆನ್ ಭಯಪಡುತ್ತಾರೆ ಎಂದು ಮೂಲಗಳು ಹೇಳುತ್ತವೆ. ಜೆಎಂಎಂ ಕಾರ್ಯಕಾರಿ ಅಧ್ಯಕ್ಷರು ತಮ್ಮ ಪತ್ನಿಗೆ ಅಧಿಕಾರ ಹಸ್ತಾಂತರಿಸಲು ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾರ್ಖಂಡ್‌ನ ಗೊಡ್ಡಾದ ಬಿಜೆಪಿ ಸಂಸದ ದುಬೆ, ಹೊಸ ವರ್ಷವು “ಸೋರೆನ್ ಕುಟುಂಬಕ್ಕೆ ನೋವು ತರಬಹುದು” ಎಂದು ಹೇಳಿದರು. “ಜಾರ್ಖಂಡ್‌ನ ಗಂಡೇ ಶಾಸಕ ಸರ್ಫರಾಜ್ ಅಹ್ಮದ್ ಅವರು ವಿಧಾನಸಭೆಗೆ ರಾಜೀನಾಮೆ ನೀಡಿದ್ದು ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಶೀಘ್ರದಲ್ಲೇ, ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಮುಂದಿನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಚಾರದಲ್ಲಿ ಜಾರ್ಖಂಡ್ ರಾಜ್ಯಪಾಲರು ಕಾನೂನು ಸಲಹೆ ಪಡೆಯಬೇಕು ಎಂದು ಬಿಜೆಪಿ ಹೇಳಿದೆ. “ಜಾರ್ಖಂಡ್ ಅಸೆಂಬ್ಲಿಯನ್ನು ಡಿಸೆಂಬರ್ 27, 2019 ರಂದು ರಚಿಸಲಾಯಿತು. ಸರ್ಫರಾಜ್ ಅಹ್ಮದ್ ಅವರು ಡಿಸೆಂಬರ್ 31 ರಂದು ರಾಜೀನಾಮೆ ನೀಡಿದರು. ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದಿಲ್ಲ ಎಂದಿದ್ದಾರೆ ದುಬೆ.

ಜೆಎಂಎಂ, ಹೇಮಂತ್ ಸೊರೆನ್ ಅವರ ಪಕ್ಷವಲ್ಲ, ಆದರೆ ಶಿಬು ಸೋರೆನ್ ಅವರ ಪಕ್ಷ. ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಉಪಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. ವಿಚಾರಣೆಗಾಗಿ ಇಡಿ ಸೊರೆನ್‌ಗೆ ಹೊಸ ಸಮನ್ಸ್ ನೀಡಿದ ನಂತರ ದುಬೆ ಈ ರೀತಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಧರ್ಮ ಒಡೆಯುವ ಬ್ರ್ಯಾಂಡ್ ಅಂಬಾಸಿಡರ್: ಆರ್.ಅಶೋಕ್ ವಾಗ್ದಾಳಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣದಲ್ಲಿ ಕೇಂದ್ರೀಯ ಸಂಸ್ಥೆ ಜೆಎಂಎಂ ನಾಯಕನಿಗೆ ಸಮನ್ಸ್ ನೀಡಿರುವುದು ಇದು ಏಳನೇ ಬಾರಿ. ನಿಮಗೆ ನೀಡಿದ ಸಮನ್ಸ್‌ಗೆ ವಿಧೇಯನಾಗಿ ನೀವು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲವಾದ್ದರಿಂದ, 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ ನಿಮ್ಮ ಹೇಳಿಕೆಯನ್ನು ಸ್ಥಳದಲ್ಲಿ ದಾಖಲಿಸಲು ನಾವು ನಿಮಗೆ ಈ ಕೊನೆಯ ಅವಕಾಶವನ್ನು ನೀಡುತ್ತೇವೆ. ದಿನಾಂಕ ಮತ್ತು ಸಮಯ, ನಿಮಗೆ ಮತ್ತು ಕೆಳಗೆ ಸಹಿ ಮಾಡಿದವರಿಗೆ (ED) ಪರಸ್ಪರ ಅನುಕೂಲಕರವಾಗಿದೆ, ಇದು ಈ ಸೂಚನೆ/ಸಮನ್ಸ್‌ನ ಸ್ವೀಕೃತಿಯ 7 ದಿನಗಳ ಒಳಗೆ ಇರಬೇಕು ಎಂದು ಇಡಿ ತನ್ನ ಹೊಸ ಸಮನ್ಸ್‌ನಲ್ಲಿ ತಿಳಿಸಿದೆ.

ಇಡಿ ಸಮನ್ಸ್ ವಿರುದ್ಧ ಸೊರೆನ್ ಸುಪ್ರೀಂಕೋರ್ಟ್ ಮತ್ತು ಜಾರ್ಖಂಡ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು, ಆದರೆ ಅವರ ಅರ್ಜಿಗಳನ್ನು ತಿರಸ್ಕರಿಸಲಾಯಿತು. 2024ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರವು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ