PFI Banned: ಪಿಎಫ್​ಐ ಹಾಗೂ ಅದರ ಅಂಗ ಸಂಸ್ಥೆಗಳ ನಿಷೇಧಕ್ಕೆ 15 ಕಾರಣಗಳು

ಪಿಎಫ್‌ ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿದೆ. ಇನ್ನು ಈ ಬ್ಯಾನ್​ಗೆ ಪ್ರಮುಖ ಕಾರಣಗಳ ಏನು ಎನ್ನುವುದನ್ನು ಕೇಂದ್ರ ಗೃಹ ಸಚಿವಾಲಯ ಕೊಟ್ಟಿದ್ದು, ಅವು ಈ ಕೆಳಗಿನಂತಿವೆ ನೋಡಿ...

PFI Banned: ಪಿಎಫ್​ಐ ಹಾಗೂ ಅದರ ಅಂಗ ಸಂಸ್ಥೆಗಳ ನಿಷೇಧಕ್ಕೆ 15 ಕಾರಣಗಳು
ಪಿಎಫ್​ಐ ನಿಷೇಧ
Follow us
TV9 Web
| Updated By: Digi Tech Desk

Updated on:Sep 28, 2022 | 12:43 PM

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ವನ್ನು ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಳೆದ ನಾಲ್ಕೈದು ದಿನಗಳಲ್ಲಿ ಎರಡು ಸುತ್ತಿನಲ್ಲಿ ದೇಶ ವ್ಯಾಪಿ ಪಿಎಫ್​ಐ ಮುಖಂಡರ ಮೇಲೆ ದಾಳಿ ಮಾಡಿ ಹಲವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಅಂತಿಮವಾಗಿ ಪಿಎಫ್​ಐ ಸಂಘಟನೆಯನ್ನು ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ: 5 ವರ್ಷಗಳ ಅವಧಿಗೆ PFI ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI), ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಘಟನೆಯು ಸಂಪರ್ಕ ಇಟ್ಟುಕೊಂಡಿದೆ ಎಂದು ಸರ್ಕಾರ ಉಲ್ಲೇಖಿಸಿದ್ದು, ಹಲವಾರು ಕ್ರಿಮಿನಲ್ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.

ಇನ್ನು ಪಿಎಫ್‌ಐ ನಿಷೇಧಕ್ಕೆ ಯುಪಿ, ಕರ್ನಾಟಕ ಮತ್ತು ಗುಜರಾತ್ ಸರ್ಕಾರಗಳು ಒತ್ತಾಯಿಸಿದ್ದವು. ಕ್ರಮ ಕೈಗೊಳ್ಳದಿದ್ದರೆ ಆಗುವ ಅನಾಹುತಗಳ ಬಗ್ಗೆ ಈ ರಾಜ್ಯಗಳು ಕೇಂದ್ರಕ್ಕೆ ತಿಳಿಸಿದ್ದವು.

ಪಿಎಫ್​ಐ ನಿಷೇಧಕ್ಕೆ ಪ್ರಮುಖ ಕಾರಣಗಳು

  1. ಪಿಎಫ್‌ಐನ ಜಾಲ ಭಯಾನಕ ಭಯೋತ್ಪಾದಕ ಸಂಘಟನೆ ಐಸಿಸ್‌ನೊಂದಿಗೆ ಸಂಪರ್ಕ
  2. ದೇಶದ ಜನರಲ್ಲಿ ಭಯ ಮೂಡಿಸುವುದು ಇದರ ಪಿಎಫ್ ಐ ಉದ್ದೇಶವಾಗಿತ್ತು
  3. ಯುವಕರನ್ನು ವಂಚಿಸುವ ಮೂಲಕ ಅವರನ್ನು ಭಯೋತ್ಪಾದನೆಗೆ ತಳ್ಳುತ್ತಿದೆ.
  4. ನಿಷೇಧ ಅಧಿಸೂಚನೆಯಲ್ಲಿ ಕೊಲೆಗಳ ಬಗ್ಗೆ ಉಲ್ಲೇಖ
  5. ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಹತ್ಯೆಗಳಲ್ಲಿ ಪಿಎಫ್‌ಐ ಭಾಗಿ
  6. 2018ರಲ್ಲಿ ಕೇರಳದಲ್ಲಿ ಅಭಿಮನ್ಯು, 2021ರ ನವೆಂಬರ್‌ನಲ್ಲಿ ಸಂಜಿತ್ ಮತ್ತು 2021ರಲ್ಲಿ ನಂದು ಹತ್ಯೆಯಲ್ಲಿ ಪಿಎಫ್‌ ಐ ಕೈವಾಡ.
  7. 2019ರಲ್ಲಿ ತಮಿಳುನಾಡಿನ ರಾಮಲಿಂಗಂ, 2016ರಲ್ಲಿ ಶಶಿಕುಮಾರ್ ಹತ್ಯೆ
  8. 2017ರಲ್ಲಿ ಕರ್ನಾಟಕದಲ್ಲಿ ಶರತ್, ಆರ್, 2016ರಲ್ಲಿ ರುದ್ರೇಶ್, ಪ್ರವೀಣ್ ಪೂಜಾರಿ ಹಾಗೂ 2022ರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಪಿಎಫ್ ಐ ಕೈವಾಡ.
  9. ದೇಶದಲ್ಲಿ ಶಾಂತಿ ಕದಡುವುದು ಮತ್ತು ಜನರ ಮನಸ್ಸಿನಲ್ಲಿ ಭಯ ಮೂಡಿಸುವುದು ಈ ಹತ್ಯೆಗಳ ಏಕೈಕ ಉದ್ದೇಶ
  10. PFI ಸದಸ್ಯರು ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದ ಸಂಪರ್ಕ
  11. ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಲವು ಪುರಾವೆಗಳು ಪತ್ತೆ
  12. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸುತ್ತಿವೆ ಪುರಾವೆಗಳು
  13. ಪಿಎಫ್‌ಐ ಸದಸ್ಯರು ಭಯೋತ್ಪಾದಕ ಗುಂಪುಗಳನ್ನು ಸೇರಲು ಸಿರಿಯಾ, ಇರಾಕ್ ಮತ್ತು ಅಫ್ಘಾನಿಸ್ತಾನಕ್ಕೆ ಹೋಗಿದ್ದಾರೆ
  14. ಕೆಲವರನ್ನು ವಿವಿಧ ರಾಜ್ಯ ಪೊಲೀಸರು ಮತ್ತು ಕೇಂದ್ರ ಏಜೆನ್ಸಿಗಳು ಬಂಧಿಸಿವೆ
  15. ಪಿಎಫ್ ಐ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶದ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ
  16. ಪಿಎಫ್‌ಐ ಸಂಘಟನೆ ಹವಾಲಾ ಮತ್ತು ದೇಣಿಗೆ ಮೂಲಕ ಹಣ ಸಂಗ್ರಹಿಸುತ್ತದೆ
  17. ಮುಸ್ಲಿಂ ಮೂಲಭೂತವಾದವನ್ನು ಹರಡುತ್ತಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Wed, 28 September 22

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಮೈಸೂರಿನ ಅರಮನೆ ಬಳಿ ಹೊಸ ವರ್ಷಾಚರಣೆ ರದ್ದು..!
ಮೈಸೂರಿನ ಅರಮನೆ ಬಳಿ ಹೊಸ ವರ್ಷಾಚರಣೆ ರದ್ದು..!
ಹುಬ್ಬಳ್ಳಿಯಲ್ಲಿದ್ದಾರೆ ಡಾ. ಮನಮೋಹನ್ ಸಿಂಗ್ ಹತ್ತಿರದ ಸಂಬಂಧಿಗಳು
ಹುಬ್ಬಳ್ಳಿಯಲ್ಲಿದ್ದಾರೆ ಡಾ. ಮನಮೋಹನ್ ಸಿಂಗ್ ಹತ್ತಿರದ ಸಂಬಂಧಿಗಳು