AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi France visit: ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಫ್ರಾನ್ಸ್ ಪ್ರವಾಸ, ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ಮೋದಿ ಫ್ರಾನ್ಸ್ ಭೇಟಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 2 ದಿನಗಳ ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ, ಜುಲೈ 14 ರಂದು (ಶುಕ್ರವಾರ), ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.

PM Modi France visit: ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಫ್ರಾನ್ಸ್ ಪ್ರವಾಸ, ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ
ಪ್ರಧಾನಿ ಮೋದಿ ಫ್ರಾನ್ಸ್​ಗೆ
ಅಕ್ಷಯ್​ ಪಲ್ಲಮಜಲು​​
|

Updated on:Jul 13, 2023 | 9:53 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಅವರ ಆಹ್ವಾನದ ಮೇರೆಗೆ ಇಂದು ಫ್ರಾನ್ಸ್‌ಗೆ ತೆರಳಿದ್ದಾರೆ. ಈಗಾಗಲೇ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿರುವ ಮೋದಿ, ಫ್ರಾನ್ಸ್​ನಲ್ಲಿ ಎರಡು ದಿನಗಳ ಕಾಲ (ಜುಲೈ 13 ಮತ್ತು ಜುಲೈ 14) ಪ್ರವಾಸ ಮಾಡಲಿದ್ದಾರೆ. ಜುಲೈ 14 ರಂದು (ಶುಕ್ರವಾರ), ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರ ಜತೆಗೆ ಈ ಬಾಸ್ಟಿಲ್ ಡೇ ಪರೇಡ್​ನಲ್ಲಿ 269 ಸದಸ್ಯರ ಭಾರತೀಯ ತ್ರಿ-ಸೇವಾ ತುಕಡಿ ಭಾಗವಹಿಸಲಿದೆ.

ಈ ದಿನದಂದು ಫ್ರೆಂಚ್ ಜೆಟ್‌ಗಳೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ಮೂರು ರಫೇಲ್ ಫೈಟರ್ ಜೆಟ್‌ಗಳು ಫ್ಲೈಪಾಸ್ಟ್‌ಗೆ ಸೇರಿಕೊಳ್ಳಲಿವೆ. ಪ್ರಧಾನಿ ಮೋದಿ ಅವರು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಮಾತುಕತೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಫ್ರಾನ್ಸ್​ ಪ್ರವಾಸದ ನಂತರ ಅಬುಧಾಬಿಗೆ ಪ್ರಯಾಣಿಸಲಿದ್ದಾರೆ. ಫ್ರಾನ್ಸ್​ ಪ್ರವಾಸದ ಬಗ್ಗೆ ಮೋದಿ ಇಂದು ತಮ್ಮ ಟ್ವಿಟರ್​​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. “ಪ್ಯಾರಿಸ್‌ಗೆ ತೆರಳುತ್ತಿದ್ದೇನೆ, ಅಲ್ಲಿ ನಾನು ಬಾಸ್ಟಿಲ್ ಡೇ ಆಚರಣೆಯಲ್ಲಿ ಪಾಲ್ಗೊಳ್ಳುತ್ತೇನೆ. ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಇತರ ಫ್ರೆಂಚ್ ಗಣ್ಯರೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಇದರ ಜತೆಗೆ ಫ್ರಾನ್ಸ್​ನಲ್ಲಿರುವ ಭಾರತೀಯರೊಂದಿಗೆ ಸಂವಾದ ಮತ್ತು ಅಲ್ಲಿನ ಸಿಇಒಗಳೊಂದಿಗೆ ಮಾತುಕತೆ ನಡೆಸಲಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ, ದ್ವಿಪಕ್ಷೀಯ ಸಂಬಂಧಕ್ಕೆ 25 ವರ್ಷ

ಇನ್ನೂ ಯುಎಇ ಭೇಟಿ ನೀಡುವ ಬಗ್ಗೆಯು ಇಲ್ಲಿ ಪ್ರಸ್ತಾಪಿಸಿದ್ದಾರೆ. ಜುಲೈ 15 ರಂದು, ನಾನು ಯುಎಇಗೆ ಭೇಟಿ ನೀಡುತ್ತೇನೆ.  ಎಚ್‌ಎಚ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದೇನೆ. ಈ ನಮ್ಮ ಸಂವಹನವು ಭಾರತಕ್ಕೆ ಬಲವನ್ನು ನೀಡುತ್ತದೆ ಎಂದು ನನಗೆ ವಿಶ್ವಾಸವಿದೆ. ಯುಎಇ ಸ್ನೇಹದಿಂದ ನಮ್ಮ ದೇಶಗಳ ಜನರಿಗೆ ಪ್ರಯೋಜನವಾಗಿಲಿದೆ.

ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ

1. ಪ್ರಧಾನಿಯವರು ಸುಮಾರು ಸಂಜೆ 4 ಗಂಟೆಗೆ (ಭಾರತೀಯ ಕಾಲಮಾನ) ಪ್ಯಾರಿಸ್‌ಗೆ ತಲುಪಲಿದ್ದು, ಓರ್ಲಿ ವಿಮಾನ ನಿಲ್ದಾಣದಲ್ಲಿ ವಿಧ್ಯುಕ್ತ ಸ್ವಾಗತವನ್ನು ಸ್ವೀಕರಿಸಲಿದ್ದಾರೆ.

2. ರಾತ್ರಿ 7.30 ರ ಸುಮಾರಿಗೆ (IST), ಪ್ರಧಾನಿ ಮೋದಿ ಸೆನೆಟ್‌ಗೆ ಆಗಮಿಸಲಿದ್ದು, ಸೆನೆಟ್ ಅಧ್ಯಕ್ಷ ಗೆರಾರ್ಡ್ ಲಾರ್ಚರ್ ಅವರನ್ನು ಭೇಟಿಯಾಗಲಿದ್ದಾರೆ.

3. ರಾತ್ರಿ 8.45ರ ಸುಮಾರಿಗೆ (IST) ಪ್ರಧಾನಿ ಮೋದಿ ಅವರು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.

4. ಮೋದಿಯವರು  ಸುಮಾರು ರಾತ್ರಿ 11 ಗಂಟೆಗೆ (IST) ಐಕಾನಿಕ್ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

5. ಸುಮಾರು 00:30 am (IST) ಕ್ಕೆ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಆಯೋಜಿಸಿದ ಖಾಸಗಿ ಭೋಜನ ಕೂಟದಲ್ಲಿ ಪ್ರಧಾನಿ ಮೋದಿ ಎಲಿಸೀ ಅರಮನೆಗೆ ಬರಲಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Thu, 13 July 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್