ಕಾಂಗ್ರೆಸ್ ನಾಯಕ ಮತ್ತು ವಯನಾಡಿನ ಸಂಸದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಆಕಾಂಕ್ಷೆಯಿಂದ ಸಂಪೂರ್ಣವಾಗಿ ಹೊರಗುಳಿದಿಲ್ಲ ಎಂಬುದನ್ನು ತಿಳಿಸಿದ್ದಾರೆ.
“ನಾನು ಕಾಂಗ್ರೆಸ್ ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಪಕ್ಷದ ಚುನಾವಣೆ (ಅಧ್ಯಕ್ಷ ಸ್ಥಾನಕ್ಕೆ) ನಡೆದಾಗ ಸ್ಪಷ್ಟವಾಗುತ್ತದೆ ಎಂದು ರಾಹುಲ್ ಗಾಂಧಿ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ತಿಳಿಸಿದ್ದಾರೆ.
2024ರ ರಾಷ್ಟ್ರೀಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆರಂಭಿಕ ಹಂತದ ಪ್ರಚಾರದ ಸಂದರ್ಭದಲ್ಲಿ ಹೇಳಿದರು. ನಾನು ಏನು ಮಾಡಬೇಕೆಂದು ನಾನು ನಿರ್ಧರಿಸಿದ್ದೇನೆ. ಯಾವುದೇ ಗೊಂದಲವಿಲ್ಲ ಎಂದಷ್ಟೇ ಹೇಳಿದ್ದಾರೆ.
ಯಾತ್ರೆಯಿಂದ ನನ್ನ ಬಗ್ಗೆ ಮತ್ತು ಈ ಸುಂದರ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಪಡೆಯುತ್ತೇನೆ ಮತ್ತು ಈ ಎರಡು-ಮೂರು ತಿಂಗಳಲ್ಲಿ ನಾನು ಬುದ್ಧಿವಂತನಾಗುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ಬಹು ನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದು.
ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದಾರೆ. ಕಪಿಲ್ ಸಿಬಲ್, ಅಶ್ವನಿ ಕುಮಾರ್ ಮತ್ತು ಗುಲಾಂ ನಬಿ ಆಜಾದ್ ಸೇರಿದಂತೆ ಸರಣಿಯ ಪತನವನ್ನು ಎದುರಿಸುತ್ತಿರುವ ಕಾಂಗ್ರೆಸ್, ಗಾಂಧಿಯೇತರರು ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬಹುದೇ ಎಂಬ ಪ್ರಶ್ನೆಯೊಂದಿಗೆ ಇನ್ನೂ ಹೆಣಗಾಡುತ್ತಿದೆ.
ಆಜಾದ್ ಅವರು ಬಾಲಿಶ ವರ್ತನೆ , ಅಪ್ರಬುದ್ಧತೆ ಹೊಂದಿರುವ ರಾಹುಲ್ ಗಾಂಧಿಗೆ ಪಕ್ಷವನ್ನು ನಡೆಸಲು ಅವಕಾಶ ನೀಡಿದ್ದಾರೆ ಎಂದು ಟೀಕಿಸಿದ್ದರು.
ಸೆಪ್ಟೆಂಬರ್ 21 ರೊಳಗೆ ಕಾಂಗ್ರೆಸ್ ಹೊಸ ಅಧ್ಯಕ್ಷರನ್ನು ಹೊಂದಬೇಕಿತ್ತು, ಆದರೆ ಗಡುವನ್ನು ಒಂದು ತಿಂಗಳು ವಿಸ್ತರಿಸಲಾಯಿತು. 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಗೆದ್ದಾಗ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:36 pm, Fri, 9 September 22