ಸ್ವಾತಂತ್ರ್ಯ ದಿನಾಚರಣೆಯಂದು ಉಗ್ರರ ದಾಳಿಯ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ
Terrorist Attack: ಪಾಕಿಸ್ತಾನ ಮೂಲದ ಉಗ್ರರು ಭಾರತದ ರಾಜಧಾನಿ ದೆಹಲಿಯ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷ ಕೂಡ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ (Independence Day) ಆಚರಿಸಲು ನಿರ್ಧರಿಸಲಾಗಿದೆ. ನವದೆಹಲಿಯಲ್ಲಿ ಆಗಸ್ಟ್ 15ರಂದು ನಡೆಯಲಿರುವ 75ನೇ ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಇದೆಲ್ಲದರ ನಡುವೆ ದೆಹಲಿಯಲ್ಲಿ ಉಗ್ರರಿಂದ ಡ್ರೋನ್ ದಾಳಿ (Drone Attack) ನಡೆಯುವ ಭೀತಿ ಎದುರಾಗಿರುವುದರಿಂದ ನವದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿಲಾಗಿದೆ. ದೆಹಲಿಯ ಬಹುತೇಕ ಕಡೆ ಭದ್ರತಾ ಏಜೆನ್ಸಿಗಳಿಂದ (Security Agency) ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪಾಕಿಸ್ತಾನ ಮೂಲದ ಉಗ್ರರು ಭಾರತದ ರಾಜಧಾನಿ ದೆಹಲಿಯ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕಳೆದ ತಿಂಗಳಾಂತ್ಯದಲ್ಲಿ ಜಮ್ಮು- ಕಾಶ್ಮೀರದಲ್ಲಿ ಭಾರತೀಯ ವಾಯುಪಡೆ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿದ್ದರು. ಈ ದಾಳಿಯ ಹಿಂದೆ ಪಾಕಿಸ್ತಾನದ ಉಗ್ರರ ಕೈವಾಡದ ಶಂಕೆ ಎದುರಾಗಿತ್ತು. ಅದರ ಬೆನ್ನಲ್ಲೇ ದೆಹಲಿಯ ಮೇಲೂ ಡ್ರೋನ್ ದಾಳಿ ನಡೆಯುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ.
An alert has been issued to Delhi Police, as per which a major terror activity can be executed in the national capital with the help of drones. Terrorists and anti-social elements can execute this before 15th August: Sources
— ANI (@ANI) July 20, 2021
ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆಗಳು ಸ್ಫೋಟಕ ತುಂಬಿದ ಡ್ರೋನ್‌ಗಳನ್ನು ಬಳಸಿ ದೆಹಲಿಯ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಸತ್ನಲ್ಲಿ ಮುಂಗಾರು ಅಧಿವೇಶನ ಕೂಡ ಆರಂಭವಾಗಿರುವುದರಿಂದ ಇದರ ಮೇಲೂ ಉಗ್ರರು ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ, ದೆಹಲಿ ಪೊಲೀಸರಿಗೂ ಕಟ್ಟೆಚ್ಚರ ವಹಿಸಲು ಭದ್ರತಾ ಏಜೆನ್ಸಿಗಳು ಸೂಚನೆ ನೀಡಿವೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ಮಾನ್ಯತೆಯನ್ನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ದೆಹಲಿ ಮೇಲೆ ದಾಳಿ ನಡೆಸಬಹುದು ಎಂದು ಭದ್ರತಾ ಸಂಸ್ಥೆಗಳ ಅಧಿಕಾರಿಗಳು ದೆಹಲಿ ಪೊಲೀಸರಿಗೆ 2019ರ ಆಗಸ್ಟ್ 5ರಂದು ಎಚ್ಚರಿಕೆ ನೀಡಿದ್ದರು. ದೇಶದಲ್ಲಿ ಅಶಾಂತಿ ಸೃಷ್ಟಿಸಲು ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ಉಗ್ರರ ದಾಳಿ ನಡೆಯುವ ಆತಂಕ ಎದುರಾಗಿದೆ. ಹೀಗಾಗಿ, ದೆಹಲಿಯ ಪ್ರಮುಯಖ ಸ್ಥಳಗಳು, ಪ್ರವಾಸಿ ತಾಣಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಎಲ್ಲ ಕಡೆಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ನಿಗಾ ವಹಿಸಲಾಗಿದೆ.
ಇದನ್ನೂ ಓದಿ: Danish Siddiqui: ಅಫ್ಘಾನ್ ಸೇನೆ- ತಾಲಿಬಾನ್ ಉಗ್ರರ ಸಂಘರ್ಷದಲ್ಲಿ ಭಾರತದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ಧಿಕಿ ಹತ್ಯೆ
(high alert in Delhi ahead of August 15 Independence Day after security agencies alert on possible terrorist attack)