Manipur Violence: ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​

ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Manipur Violence: ಮಣಿಪುರದಲ್ಲಿ ಸೀಮಿತ ಇಂಟರ್ನೆಟ್ ಸೇವೆ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್​
ಮಣಿಪುರ ಹೈಕೋರ್ಟ್

Updated on: Jun 20, 2023 | 12:47 PM

ಇಂಫಾಲ್: ಮಣಿಪುರದ ಹಿಂಸಾಚಾರದಿಂದ (Manipur Violence) ಸರ್ಕಾರ ರಾಜ್ಯದಲ್ಲಿ ಇಂಟರ್ನೆಟ್​​ನ್ನು ಕಡಿತಗೊಳಿಸಿತ್ತು. ಆದರೆ ಇದೀಗ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಾಗೂ ಪ್ರಚೋದಿತ ಸುದ್ದಿಗಳನ್ನು ಹರಡುವ ಕೆಲಸ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ಇಂಟರ್ನೆಟ್​​ನ್ನು ಸಂಪೂರ್ಣ ಸ್ಥಗಿತಗೊಳಿಸಿತ್ತು. ಸರ್ಕಾರ ಕೆಲಸಕ್ಕೆ ಹೊರತುಪಡಿಸಿ, ಮತ್ತೆಲ್ಲ ವಿಚಾರಗಳಿಗೆ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು.

ಅನೇಕರು ರಾಜ್ಯದಲ್ಲಿ ಇಂಟರ್ನೆಟ್ ತುಂಬಾ ಅಗತ್ಯ ಇದೆ ಎಂದು ಸಲ್ಲಿಸಿದ ಮನವಿಗಳ ನಂತರ, ಮಣಿಪುರ ಹೈಕೋರ್ಟ್ ಇಂದು ಮಧ್ಯಂತರ ಆದೇಶದಲ್ಲಿ ತಮ್ಮ ನಿಯಂತ್ರಣದಲ್ಲಿರುವ ಕೆಲವು ಗೊತ್ತುಪಡಿಸಿದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್ ಜೂನ್ 23 ರಂದು ಮತ್ತೆ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು, ವಿಶೇಷವಾಗಿ ವಿದ್ಯಾರ್ಥಿಗಳು ಪರೀಕ್ಷೆ ಹಾಗೂ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತ್ತು ಸಾರ್ವಜನಿಕರು ತಮ್ಮ ತುರ್ತು ಮತ್ತು ಅಗತ್ಯ ಸೇವೆಗಳಿಗಾಗಿ ಸೀಮಿತ ಇಂಟರ್ನೆಟ್ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಕಾರಣ ಮಣಿಪುರವು ಮೇ 4ರಿಂದ ಇಂಟರ್ನೆಟ್ ನಿಷೇಧ ಮಾಡಲಾಗಿತ್ತು.

ಇದನ್ನೂ ಓದಿ: Manipur violence: ತುರ್ತು ವಿಚಾರಣೆ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

ಸಾಮಾಜಿಕ ಮಾಧ್ಯಮ ವೆಬ್‌ಸೈಟ್​​ನ್ನು ನಿರ್ಬಂಧಿಸುವ ಮೂಲಕ ಮತ್ತು ರಾಜ್ಯ ಸರ್ಕಾರದ ಕಾಳಜಿಯನ್ನು ಕಾಪಾಡುವ ಮೂಲಕ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಯಾವುದೇ ಕಾರ್ಯಸಾಧ್ಯತೆ ಇದೆಯೇ ಎಂಬುದನ್ನು ವಿವರಿಸುವ ಕಿರು ಅಫಿಡವಿಟ್ ಸಲ್ಲಿಸುವಂತೆ ವೊಡಾಫೋನ್, ಐಡಿಯಾ, ಜಿಯೋ, ಬಿಎಸ್‌ಎನ್‌ಎಲ್ ಮತ್ತು ಏರ್‌ಟೆಲ್‌ಗೆ ನ್ಯಾಯಾಲಯ ಸೂಚಿಸಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:37 pm, Tue, 20 June 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us