AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಆವರಣದಲ್ಲಿ ಪ್ರತಿಭಟನೆ ನಡೆಸದಂತೆ ಎಎಪಿಗೆ ಹೈಕೋರ್ಟ್ ಎಚ್ಚರಿಕೆ ನೀಡಬೇಕು: ವೈಭವ್ ಸಿಂಗ್

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಸಿಎಂ ಅರವಿಂದ್​​​ ಕೇಜ್ರಿವಾಲ್ ಪರವಾಗಿ ದೆಹಲಿಯ ಎಲ್ಲ ನ್ಯಾಯಾಲಯಗಳ ಮುಂದೆ ಎಎಪಿ ಪ್ರತಿಭಟನೆ ನಡೆಸುತ್ತಿದೆ. ಇದನ್ನು ಪ್ರಶ್ನಿಸಿ ವಕೀಲ ವೈಭವ್ ಸಿಂಗ್ ಅವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ನಾಳೆ ವಿಚಾರಣೆ ನಡೆಸುವುದಾಗಿ ಕೋರ್ಟ್​​​ ಹೇಳಿದೆ.

ಕೋರ್ಟ್​ ಆವರಣದಲ್ಲಿ ಪ್ರತಿಭಟನೆ ನಡೆಸದಂತೆ ಎಎಪಿಗೆ  ಹೈಕೋರ್ಟ್ ಎಚ್ಚರಿಕೆ ನೀಡಬೇಕು: ವೈಭವ್ ಸಿಂಗ್
ವಕೀಲ ವೈಭವ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Mar 27, 2024 | 4:33 PM

Share

ದೆಹಲಿ, ಮಾ.27: ದೆಹಲಿ ಮದ್ಯ ನೀತಿಗೆ (Delhi Liquor Policy) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ (Arvind Kejriwal)​​​ ಅವರ ಪಾತ್ರವಿದೆ ಎಂದು ಇಡಿ ಅವರನ್ನು ಬಂಧಿಸಿದೆ. ಇದೀಗ ಈ ಬಂಧನವನ್ನು ವಿರೋಧಿಸಿ ಎಎಪಿ ಹೈಕೋರ್ಟ್​ ಮುಂದೆ ಪ್ರತಿಭಟನೆ ನಡೆಸುತ್ತಿದೆ. ಕೋರ್ಟ್​​ ಮುಂದೆ ಪ್ರತಿಭಟನೆ ನಡೆಸದಂತೆ ಹೈಕೋರ್ಟ್​​​​ ಎಎಪಿ ಎಚ್ಚರಿಕೆ ನೀಡಬೇಕು ಎಂದು ವಕೀಲ ವೈಭವ್ ಸಿಂಗ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ.

ನಗರದಾದ್ಯಂತ ನ್ಯಾಯಾಲಯದ ಆವರಣದಲ್ಲಿ ಎಎಪಿ ಕಾನೂನು ಘಟಕದ ಪ್ರತಿಭಟನೆಗೆ ಕರೆ ನೀಡಿದ್ದನ್ನು ವಿರೋಧಿಸಿ ವಕೀಲ ವೈಭವ್ ಸಿಂಗ್ ಸಲ್ಲಿಸಿದ ಪತ್ರದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಮುಂದೆ ಈ ಅರ್ಜಿಯನ್ನು ಸಿಂಗ್ ಪ್ರಸ್ತಾಪಿಸಿದರು ಮತ್ತು ಆಮ್ ಆದ್ಮಿ ಪಕ್ಷ ಮಾಧ್ಯಮ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಯ ಎಲ್ಲಾ ಜಿಲ್ಲಾ ನ್ಯಾಯಾಲಯಗಳಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಹಾಗೂ ರಾಜಕೀಯ ಉದ್ದೇಶಗಳಿಗಾಗಿ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ವಕೀಲ ವೈಭವ್ ಸಿಂಗ್ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಗುರುವಾರ (ಮಾ.28)ಕ್ಕೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಸಹಾನುಭೂತಿ ಪಡೆಯಲು ಕೇಜ್ರಿವಾಲ್ ನಡೆಸಿದ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ: ಮನ್ಸುಖ್ ಮಾಂಡವಿಯಾ

ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು, ಈ ಬಗ್ಗೆ ಪೀಠಿ ಸರಿಯಾದ ಕ್ರಮವನ್ನು ತೆಗೆದುಕೊಳ್ಳುತ್ತದೆ. ಹಾಗೂ ಇದನ್ನು ಯಾರಿದಲ್ಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಎಲ್ಲರಿಗೂ ತಮ್ಮ ಹಕ್ಕನ್ನು ಪ್ರತಿಪಾದಿಸುವ ಅಧಿಕಾರ ಇದೆ ಎಂದು ಹೇಳಿದೆ. ಯಾರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಅಧಿಕಾರ ಇಲ್ಲ, ಒಂದು ವೇಳೆ ಕಾನೂನು ಕ್ರಮ ತೆಗೆದುಕೊಳ್ಳವ ಪರಿಸ್ಥಿತಿ ಬಂದರೆ ಖಂಡಿತ ಅದನ್ನು ಮಾಡಲಾಗುವುದು ಎಂದು ಕೋರ್ಟ್​​ ಹೇಳಿದೆ

ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಗೆ ಕರೆ ನೀಡುವುದರಿಂದ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಯಾಗುತ್ತದೆ, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ವೃತ್ತಿಪರ ನೈತಿಕತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ವೈಭವ್ ಸಿಂಗ್ ಹೇಳಿದ್ದಾರೆ. ಇದು ಕಾನೂನು ಹಾಗೂ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ