ಶಾಸಕರು ಹಾಗೂ ಸಂಸದರ ವಿರುದ್ಧದ ಪ್ರಕರಣಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಲು ಸುಪ್ರೀಂಕೋರ್ಟ್ ಮಾರ್ಗಸೂಚಿ ಹೊರಡಿಸಿದೆ.
ಸಂಸದರು ಹಾಗೂ ವಿಧಾನಸಭೆಗಳ ಸದಸ್ಯರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳ ಶೀಘ್ರ ಇತ್ಯರ್ಥವನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸಲು ಸುಪ್ರೀಂಕೋರ್ಟ್ಗೆ ಕಷ್ಟಕರವಾಗಿದೆ.
ಸಂಸದರು, ಶಾಸಕರ ವಿರುದ್ಧದ ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಯನ್ನು ತ್ವರಿತವಾಗಿ ವಿಲೇವಾರಿ ಮಾಡುವುದನ್ನು ಮೇಲ್ವಿಚಾರಣೆ ಮಾಡಲು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸ್ವಯಂ ಪ್ರೇರಿತ ಪ್ರಕರಣ ಎಂದು ಗೊತ್ತುಪಡಿಸಿದ ನ್ಯಾಯಾಲಯಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಸ್ವಯಂ ಪ್ರೇರಿತ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಶೇಷ ಪೀಠ ಅಥವಾ ಅವರು ನಿಯೋಜಿಸಿರುವ ಪೀಠವು ವಿಚಾರಣೆ ನಡೆಸಬಹುದಾಗಿದೆ.
ಸ್ವಯಂ ಪ್ರೇರಿತ ಪ್ರಕರಣವನ್ನು ಆಲಿಸುವ ವಿಶೇಷ ಪೀಠವು ಅಗತ್ಯವಾದ ಆದೇಶಗಳನ್ನು ಮತ್ತು ನಿರ್ದೇಶನಗಳನ್ನು ಹೈಕೋರ್ಟ್ ನೀಡಬಹುದು.
ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳಿಗೆ 5 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಅಗುವ ಪ್ರಕರಣಗಳು, ಇತರೆ ಪ್ರಕರಣಗಳು, ಅಪರೂಪದ ಹಾಗೂ ಬಲವಾದ ಕಾರಣಗಳನ್ನು ಹೊರತುಪಡಿಸಿ ವಿಚಾರಣಾ ನ್ಯಾಯಾಲಯವು ಪ್ರಕರಣವನ್ನು ಮುಂದೂಡುವುದಿಲ್ಲ.
ಮತ್ತಷ್ಟು ಓದಿ: ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್ ಕದ ತಟ್ಟಿದ ರಾಜ್ಯಗಳಿವು
ಈ ಮನವಿ ಬಳಿಕ ಸುಪ್ರೀಂಕೋರ್ಟ್ ಸೂಚನೆ
ಜನಪ್ರತಿನಿಧಿಗಳು ಸಾರ್ವಜನಿಕರ ಸೇವಕರು ಮತ್ತು ನ್ಯಾಯಾಂಗ ಸದಸ್ಯರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ಒಂದು ವರ್ಷದೊಳಗೆ ತೀರ್ಮಾನಿಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸಾಕಷ್ಟು ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಮನವಿ ಮಾಡಲಾಗಿತ್ತು.
ಕ್ರಿಮಿನಲ್ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧದ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಆಜೀವ ನಿಷೇಧದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವೆಬ್ ಸೈಟ್ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ವೆಬ್ ಸೈಟ್ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಗಂಭೀರ ಅಪರಾಧದ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ