ನೇತಾಜಿ ಸುಭಾಷ್ ಚಂದ್ರ ಬೋಸ್ 125 ನೇ ಜಯಂತಿ ಆಚರಣೆ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯ ಆಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಇಂದು ಗೆಜೆಟ್ ಪ್ರಕಟಣೆಯನ್ನು ಹೊರಡಿಸಲಾಗಿದೆ.
ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯ ಆಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಇಂದು ಗೆಜೆಟ್ ಪ್ರಕಟಣೆಯನ್ನು ಹೊರಡಿಸಲಾಗಿದೆ.
23 ನೇ ಜನವರಿ 2021 ರಿಂದ ಒಂದು ವರ್ಷ ಕಾಲ ನೇತಾಜಿಯವರ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಉನ್ನತ ಮಟ್ಟದ ಸಮಿತಿಯು ನಿರ್ಧರಿಸುತ್ತದೆ. ಖ್ಯಾತನಾಮರು, ಇತಿಹಾಸಕಾರರು, ಲೇಖಕರು, ತಜ್ಞರು, ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರು ಮತ್ತು ಆಜಾದ್ ಹಿಂದ್ ಫೌಜ್ (ಐಎನ್‌ಎ) ನೊಂದಿಗೆ ಸಂಬಂಧ ಇದ್ದ ಗಣ್ಯ ವ್ಯಕ್ತಿಗಳು ಸಮಿತಿಯ ಸದಸ್ಯರಾಗಿದ್ದಾರೆ. ದೆಹಲಿ, ಕೋಲ್ಕತಾ ಹಾಗೂ ನೇತಾಜಿ ಮತ್ತು ಆಜಾದ್ ಹಿಂದ್ ಫೌಜ್‌ಗೆ ಸಂಬಂಧಿಸಿದಂತೆ ಭಾರತ ಮತ್ತು ವಿದೇಶಗಳ ಇತರ ಸ್ಥಳಗಳಲ್ಲಿ ನಡೆಯುವ ಸ್ಮರಣಾರ್ಥ ಕಾರ್ಯಕ್ರಮಗಳ ಬಗ್ಗೆ ಈ ಸಮಿತಿ ಮಾರ್ಗದರ್ಶನ ನೀಡಲಿದೆ.
ನೇತಾಜಿಯ 125ನೇ ಜನ್ಮದಿನದಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ಸಂಭವ
Published On - 6:27 pm, Sat, 9 January 21