AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್​ಐ ನಿಷೇಧಕ್ಕೂ ಇದೆ ನಂಟು; ಕೇಂದ್ರದ ಅಧಿಸೂಚನೆಯ ಮುಖ್ಯಾಂಶಗಳಿವು

ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸು ಹಾಗೂ ಪ್ರವೀಣ್ ನೆಟ್ಟಾರು ಕೊಲೆಯನ್ನು ಉಲ್ಲೇಖಿಸಲಾಗಿದೆ.

PFI Ban: ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್​ಐ ನಿಷೇಧಕ್ಕೂ ಇದೆ ನಂಟು; ಕೇಂದ್ರದ ಅಧಿಸೂಚನೆಯ ಮುಖ್ಯಾಂಶಗಳಿವು
ಹತ್ಯೆಯಾದ ಪ್ರವೀಣ್ ನೆಟ್ಟಾರು ಮತ್ತು ಪಿಎಫ್​ಐ ನಿಷೇಧದ ಬಗ್ಗೆ ಕೇಂದ್ರ ಸರ್ಕಾರದ ಅಧಿಸೂಚನೆ
Ghanashyam D M | ಡಿ.ಎಂ.ಘನಶ್ಯಾಮ
|

Updated on:Sep 28, 2022 | 8:15 AM

Share

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ (PFI Ban). ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿದೆ. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿದೆ. ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯಲ್ಲಿರುವ ಮುಖ್ಯಾಂಶಗಳು ಇಲ್ಲಿದೆ.

  1. ಸೊಸೈಟಿಸ್ ರಿಜಿಸ್ಟ್ರೇಶನ್ ಆ್ಯಕ್ಟ್ 1860ರ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಹಲವು ಅಧೀನ, ಸಹವರ್ತಿ ಸಂಘಟನೆಗಳನ್ನು ಹೊಂದಿದೆ. ರಿಹ್ಯಾಬ್ ಇಂಡಿಯಾ ಫೌಂಡೇಶನ್ (ಆರ್​ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್​ಐ), ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್​ಫಡರೇಷನ್ ಆಫ್ ಹ್ಯೂಮನ್ ರೈಟ್ಸ್​, ನ್ಯಾಷನಲ್ ವುಮೆನ್ಸ್​ ಫ್ರಂಟ್, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಇತ್ಯಾದಿ ಸಂಘಟನೆಗಳು ಪಿಎಫ್​ಐ ಅಧೀನದಲ್ಲಿವೆ.
  2. ಯುವಜನರು, ಮಹಿಳೆಯರು, ವಿದ್ಯಾರ್ಥಿಗಳು, ಇಮಾಮ್​ಗಳು, ವಕೀಲರು ಮತ್ತು ಸಮಾಜದ ಕೆಳವರ್ಗದ ಜನರನ್ನು ತಲುಪಲೆಂದು ಪಿಎಫ್​ಐ ಈ ಸಹವರ್ತಿಗಳನ್ನು ಹುಟ್ಟುಹಾಕಿದೆ. ಈ ಎಲ್ಲ ಸಂಘಟನೆಗಳೊಂದಿಗೆ ಪಿಎಫ್​ಐ ನೇರ ಸಂಬಂಧ ಹೊಂದಿದೆ.
  3. ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳು ಸಮಾಜೋ-ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಸಂಘಟನೆಗಳಾಗಿ ತಮ್ಮನ್ನು ಗುರುತಿಸಿಕೊಂಡಿವೆ. ಆದರೆ ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಆತಂಕ ಉಂಟುಮಾಡುವಂತೆ ನಡೆದುಕೊಳ್ಳುತ್ತಿವೆ. ಸಾಂವಿಧಾನಿಕ ಅಧಿಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಗೆ ಅಗೌರವ ತೋರುತ್ತಿದೆ.
  4. ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ ಇದರಿಂದ ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ಒದಗುವ ಅಪಾಯವಿದೆ. ಉಗ್ರವಾದಕ್ಕೆ ಬೆಂಬಲ ನೀಡಲಾಗುತ್ತಿದೆ.
  5. ಪಿಎಫ್​ಐನ ಸಂಸ್ಥಾಪಕ ಸದಸ್ಯರ ಪೈಕಿ ಹಲವರು ಸ್ಟುಡೆಂಟ್ಸ್​ ಇಸ್ಲಾಮಿಕ್ ಮೂವ್​ಮೆಂಟ್ ಆಫ್ ಇಂಡಿಯಾದ (ಸಿಮಿ) ನಾಯಕರಾಗಿದ್ದವರು. ಪಿಎಫ್​ಗೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶದೊಂದಿಗೆ (ಜೆಎಂಬಿ) ನಂಟು ಇದೆ. ಈ ಎರಡೂ ಸಂಘಟನೆಗಳನ್ನು ನಿಷೇಧಿಸಲಾಗಿದೆ.
  6. ಇಸ್ಲಾಮಿಕ್ ಸ್ಟೇಟ್​ ಆಫ್ ಇರಾಕ್ ಅಂಡ್ ಸಿರಿಯಾ (ಐಸಿಸ್) ಹಾಗೂ ಇತರ ಜಾಗತಿಕ ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆಗಳೊಂದಿಗೆ ಪಿಎಫ್​ಐಗೆ ಸಂಬಂಧ ಇರುವ ಹಲವು ಪುರಾವೆಗಳು ಲಭ್ಯವಾಗಿವೆ.
  7. ಭಾರತದಲ್ಲಿ ಅಭದ್ರತೆಯಿದೆ ಎಂದು ಬಿಂಬಿಸುವ ಮೂಲಕ ಮತೀಯವಾದಕ್ಕೆ ಪಿಎಫ್​ಐ ಮತ್ತು ಅದರ ಸಹವರ್ತಿಗಳು ಯತ್ನಿಸುತ್ತಿದ್ದರು. ಪಿಎಫ್​ಐನ ಹಲವು ಕಾರ್ಯಕರ್ತರು ಜಾಗತಿಕ ಭಯೋತ್ಪಾದಕ ಸಂಘಟನೆಗಳಿಗೆ ಸೇರಿಕೊಂಡ ಬಗ್ಗೆ ಪುರಾವೆ ಲಭ್ಯವಾಗಿದೆ.
  8. ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರವು ‘ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ’ 1967ರ ಅನ್ವಯ ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
  9. ಬಾಹ್ಯ (ಹೊರ ದೇಶ) ಸಂಪನ್ಮೂಲ ಮತ್ತು ಸೈದ್ಧಾಂತಿಕ ಬೆಂಬಲದಿಂದ ಪಿಎಫ್​ಐ ದೇಶದ ಸಾಂವಿಧಾನಿಕ ಅಧಿಕಾರಕ್ಕೆ ಅಗೌರವ ತೋರುತ್ತಿದೆ. ಇದು ಭಾರತದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದೆ. ತಮ್ಮ ಸಿದ್ಧಾಂತ ಒಪ್ಪದವರನ್ನು ಕೊಲೆ ಮಾಡಿದ, ದುಷ್ಕೃತ್ಯ ನಡೆಸಲು ಸ್ಫೋಟಕಗಳನ್ನು ಸಂಗ್ರಹಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಸಂಚು ರೂಪಿಸಿದ ಬಗ್ಗೆ ಪುರಾವೆಗಳು ಸಿಕ್ಕಿವೆ.
  10. ಸಂಜಿತ್ (ಕೇರಳ 2021), ವಿ.ರಾಮಲಿಂಗಮ್ (ತಮಿಳುನಾಡು 2019), ನಂದು (ಕೇರಳ 2021), ಅಭಿಮನ್ಯು (ಕೇರಳ 2018), ಬಿಬಿನ್ (ಕೇರಳ 2017), ಶರತ್ (ಕರ್ನಾಟಕ 2017), ಆರ್.ರುದ್ರೇಶ್ (ಕರ್ನಾಟಕ 2016), ಪ್ರವೀಣ್ ಪೂಜಾರಿ (ಕರ್ನಾಟಕ 2016), ಶಶಿ ಕುಮಾರ (ತಮಿಳುನಾಡು 2016) ಮತ್ತು ಪ್ರವೀಣ್ ನೆಟ್ಟಾರು (ಕರ್ನಾಟಕ 2022) ಅವರ ಕೊಲೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಲ್ಲಿ ಪಿಎಫ್​ಐ ಭಾಗಿಯಾಗಿದೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದು ಹಾಗೂ ಭಯ ಹೆಚ್ಚಿಸುವ ಉದ್ದೇಶವನ್ನು ಪಿಎಫ್​ಐ ಹೊಂದಿದೆ.
  11. ಅಕ್ರಮ ಹಣ ವರ್ಗಾವಣೆಗಾಗಿ ಹವಾಲಾ ಮಾರ್ಗವನ್ನು ಪಿಎಫ್​ಐ ಅನುಸರಿಸುತ್ತಿದೆ. ದೇಶದ ಒಳಗೆ ಮತ್ತು ಹೊರಗಿನಿಂದ ಹಣ ಸಂಗ್ರಹಿಸಿ, ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿ ಅಪರಾಧ, ಕಾನೂನುಬಾಹಿರ ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ.
  12. ಪಿಎಫ್​ಐ ಕಾರ್ಯಕರ್ತರ ಹೆಸರಿನಲ್ಲಿರುವ ಹಲವು ಬ್ಯಾಂಕ್ ಅಕೌಂಟ್​ಗಳಲ್ಲಿರುವ ಹಣದ ಮೊತ್ತವು ಅವರ ಆದಾಯ ಮೂಲಕ್ಕಿಂತಲೂ ಎಷ್ಟೋಪಟ್ಟು ಹೆಚ್ಚಾಗಿದೆ. ಸೊಸೈಟಿಸ್ ಕಾಯ್ದೆಯ ಅನ್ವಯ ನೋಂದಾಯಿಸಿಕೊಂಡಿರುವ ಪಿಎಫ್​ಐ ನೋಂದಣಿ ವೇಳೆ ಘೋಷಿಸಿಕೊಂಡಿರುವ ಆಶಯಗಳನ್ನು ಉಲ್ಲಂಘಿಸಿದೆ. ಹೀಗಾಗಿಯೇ ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ಕಾಯ್ದೆ 1961ರ 12ಎ ಮತ್ತು 12ಎಎ ಅನ್ವಯ ಪಿಎಫ್​ಐ ಹಾಗೂ ರಿಹ್ಯಾಬ್ ಫೌಂಡೇಶನ್​ಗೆ ನೀಡಿದ್ದ ವಿನಾಯ್ತಿಗಳನ್ನು ರದ್ದುಪಡಿಸಿದೆ.
  13. ಉತ್ತರ ಪ್ರದೇಶ, ಕರ್ನಾಟಕ ಮತ್ತು ಗುಜರಾತ್ ಸರ್ಕಾರಗಳು ಪಿಎಫ್​ಐ ನಿಷೇಧಿಸುವಂತೆ ಶಿಫಾರಸು ಮಾಡಿವೆ.
  14. ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರವು ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಸಂಘಟನೆಗಳು ಎಂದು ಘೋಷಿಸುತ್ತಿದೆ. ಐದು ವರ್ಷಗಳ ಅವಧಿಗೆ ಈ ಆದೇಶವು ಜಾರಿಯಲ್ಲಿರುತ್ತದೆ.
PFI-Ban

ಪಿಎಫ್​ಐ ನಿಷೇಧಿಸಿ ಸರ್ಕಾರ ಹೊರಡಿಸಿರುವ ಆದೇಶ

ಇದನ್ನೂ ಓದಿ: NIA Raids PFI SDPI: ಮಂಗಳೂರು ಸೇರಿ ದೇಶಾದ್ಯಂತ ಪಿಎಫ್​ಐ, ಎಸ್​ಡಿಪಿಐ ಕಚೇರಿಗಳ ಮೇಲೆ ಎನ್​ಐಎ ದಾಳಿ

ಇದನ್ನೂ ಓದಿ: PFI ಮೇಲೆ ನಾವು ಹಾಕಿದ್ದ ಕೇಸ್ ತೆಗೆದವರು ಈಗ ಟೀಕೆ ಮಾಡ್ತಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಅಶೋಕ್

Published On - 8:04 am, Wed, 28 September 22

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ