AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab row: ಉತ್ತರ ಪ್ರದೇಶದ ಅಲಿಗಢ ಧರ್ಮ ಸಮಾಜ ಕಾಲೇಜು ಸಹ ಸಮವಸ್ತ್ರ ಶಿಷ್ಟಾಚಾರ ವಿಧಿಸಿತು

ಮುಖ ಮುಚ್ಚಿರುವ ವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು. ಅಂದರೆ ಕೇಸರಿ ವಸ್ತ್ರವನ್ನಾಗಲಿ ಅಥವಾ ಹಿಜಾಬ್ ವಸ್ತ್ರವನ್ನಾಗಲಿ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಧರ್ಮ ಸಮಾಜ ಕಾಲೇಜು ಆಡಳಿತ ಮಂಡಳಿ ನಿನ್ನೆ ಗುರುವಾರ ನೋಟಿಸ್​ ಬೋರ್ಡ್​​ನಲ್ಲಿ ಸೂಚನೆ ಪ್ರಕಟಿಸಿದೆ.

Hijab row: ಉತ್ತರ ಪ್ರದೇಶದ ಅಲಿಗಢ ಧರ್ಮ ಸಮಾಜ ಕಾಲೇಜು ಸಹ ಸಮವಸ್ತ್ರ ಶಿಷ್ಟಾಚಾರ ವಿಧಿಸಿತು
ಉತ್ತರ ಪ್ರದೇಶ: ಅಲಿಗಢ ಧರ್ಮ ಸಮಾಜ ಕಾಲೇಜು ಸಹ ಸಮವಸ್ತ್ರ ಶಿಷ್ಟಾಚಾರ ವಿಧಿಸಿತು
TV9 Web
| Updated By: ಸಾಧು ಶ್ರೀನಾಥ್​|

Updated on:Feb 18, 2022 | 10:48 AM

Share

ಉತ್ತರ ಪ್ರದೇಶ: ಕರ್ನಾಟಕದಲ್ಲಿ ಹಬ್ಬಿರುವ ಹಿಜಾಬ್​ ಧಾರಣೆ ವಿಚಾರ ದೂರದ ಉತ್ತರ ಪ್ರದೇಶದಲ್ಲಿಯೂ ಪ್ರತಿಧ್ವನಿಸಿದೆ. ಅಲ್ಲಿನ ಅಲಿಗಢ ಧರ್ಮ ಸಮಾಜ ಕಾಲೇಜು (Aligarh Dharm Samaj college) ಸಹ ಸಮವಸ್ತ್ರ ಶಿಷ್ಟಾಚಾರವನ್ನು ಕಡ್ಡಾಯಗೊಳಿಸಿದೆ. ಆಗ್ರಾದ ಡಾ. ಬಿ ಆರ್​ ಅಂಬೇಡ್ಕರ್​ ವಿಶ್ವವಿದ್ಯಾಲಯಕ್ಕೆ ಅಂಕಿತವಾಗಿರುವ ಧರ್ಮ ಸಮಾಜ ಕಾಲೇಜು ಶಿಷ್ಟಾಚಾರದ ಅನುಸಾರ ಸೂಚಿತ ಸಮವಸ್ತ್ರ ವನ್ನು ಧರಿಸಿ ಕಾಲೇಜಿಗೆ ಹಾಜರಾಗುವುದು ಅಲ್ಲಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿದೆ (Hijab row).

ಮುಖ ಮುಚ್ಚಿರುವ ವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು. ಅಂದರೆ ಕೇಸರಿ ವಸ್ತ್ರವನ್ನಾಗಲಿ ಅಥವಾ ಹಿಜಾಬ್ ವಸ್ತ್ರವನ್ನಾಗಲಿ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಧರ್ಮ ಸಮಾಜ ಕಾಲೇಜು ಆಡಳಿತ ಮಂಡಳಿ ನಿನ್ನೆ ಗುರುವಾರ ನೋಟಿಸ್​ ಬೋರ್ಡ್​​ನಲ್ಲಿ ಸೂಚನೆ ಪ್ರಕಟಿಸಿದೆ. ಡಿ ಎಸ್ ಕಾಲೇಜು ಪ್ರಿನ್ಸಿಪಾಲ್ ಡಾ. ರಾಜ್​ ಕುಮಾರ್​ ವರ್ಮಾ ಈ ಆದೇಶ ಜಾರಿಗೊಳಿಸಿದ್ದಾರೆ ಎಂದು ANI News ಸುದ್ದಿ ಸಂಸ್ಥೆ ವರದಿ ಮಾಡಿದೆ.

Karnataka Hijab Row: ಕರ್ನಾಟಕ ಹೈಕೋರ್ಟ್​​ನಲ್ಲಿ ಹಿಜಾಬ್ ಪ್ರಕರಣ ವಿಚಾರಣೆ ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದ್ದು ಕೆಲ ದಿನಗಳು ಕಳೆದಿವೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ಈ ಮಧ್ಯೆ ವಿವಾದದ ಬಗ್ಗೆ ಇಂದು (ಫೆಬ್ರವರಿ 18) ಹೈಕೋರ್ಟ್​ನಲ್ಲಿ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದುವರಿಯಲಿದೆ.

ನಿನ್ನೆ ಗುರುವಾರ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಪರ ಜಿ.ಆರ್. ಮೋಹನ್ ವಾದ ಮಂಡಿಸಿದ್ದಾರೆ. ಸರ್ಕಾರದ ಹಿಜಾಬ್ ನಿರ್ದೇಶನ ನಮಗೆ ಅನ್ವಯವಾಗುವುದಿಲ್ಲ. ಈ ಬಗ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ರಾಜಿ ಸಂಧಾನಕ್ಕೆ ಪ್ರಕರಣ ಒಪ್ಪಿಸಲು ವಕೀಲೆಯೊಬ್ಬರ ಮನವಿ ಮಾಡಲಾಗಿದೆ. ಈ ಬಗ್ಗೆ ನಾನು ಮಧ್ಯಂತರ ಅರ್ಜಿ ಸಲ್ಲಿಸಿದ್ದೇನೆ. ರಾಜಿ ಸಂಧಾನಕ್ಕೆ ಒಪ್ಪಿಸಿದರೆ ಸಮಸ್ಯೆ ಬಗೆಹರಿಯಬಹುದು ಎಂದು ಮಧ್ಯಂತರ ಅರ್ಜಿದಾರ ವಕೀಲೆಯ ವಾದ ಮಂಡಿಸಲಾಗಿದೆ. ಎರಡೂ ಕಡೆಯವರು ಒಪ್ಪಿದರೆ ಮಾತ್ರ ರಾಜಿ ಸಂಧಾನ ಸಾಧ್ಯ, ಇಲ್ಲಿ ಸಂವಿಧಾನಿಕ ಪ್ರಶ್ನೆಗಳನ್ನು ಉಲ್ಲೇಖಿಸಲಾಗಿದೆ ಎಂದು ಸಿಜೆ ಹೇಳಿದ್ದಾರೆ.

ಮಧ್ಯಂತರ ಅರ್ಜಿದಾರರ ಪರ ಸುಭಾಷ್ ಝಾ ಮನವಿ ಮಾಡಿದ್ದಾರೆ. ನನಗೆ ಅರ್ಧ ಗಂಟೆ ಸಮಯ ಕೊಡಿ, ಒಂದು ಕಡೆಯ ವಾದ ಮಾತ್ರ ಕೇಳಲಾಗಿದೆ. ನನ್ನ ವಾದವನ್ನು ಹೇಳಲು ಅವಕಾಶ ಕೊಡಿ ಎಂದು ವಕೀಲ ಸುಭಾಷ್ ಝಾ ಮನವಿ ಮಾಡಿದ್ದಾರೆ. ಮಧ್ಯಂತರ ಅರ್ಜಿದಾರರ ವಾದ ಕೇಳಬೇಕೇ ಬೇಡವೇ ನಿರ್ಧರಿಸಿಲ್ಲ. ಮೊದಲಿಗೆ ಅರ್ಜಿದಾರರು ಪ್ರತಿವಾದಿಗಳ ವಾದ ಕೇಳುತ್ತೇವೆ, ನಂತರ ಮಧ್ಯಂತರ ಅರ್ಜಿಗಳ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಸಿಜೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ಹಾಗೂ ಗಡ್ಡ ಬಿಡುವುದರ ಬಗ್ಗೆ ಕೋರ್ಟ್ ಗಳ ತೀರ್ಪುಗಳಿವೆ. ಇದರ ಬಗ್ಗೆ ನಾನು ಕೋರ್ಟ್ ಗಮನಕ್ಕೆ ತರಬಯಸುತ್ತೇನೆ ಎಂದು ಸುಭಾಷ್ ಝಾ ಹೇಳಿದ್ದಾರೆ.

Published On - 8:04 am, Fri, 18 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!