Hijab row: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೊರೆ ಹೋದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

| Updated By: ರಶ್ಮಿ ಕಲ್ಲಕಟ್ಟ

Updated on: Mar 28, 2022 | 1:39 PM

ಹೈಕೋರ್ಟ್ ತೀರ್ಪನ್ನು "ತಪ್ಪು" ಎಂದು ಕರೆದ ಮಂಡಳಿಯು ತನ್ನ ಅರ್ಜಿಯಲ್ಲಿ ಈ ಕ್ರಮವು "ಸಾಮಾನ್ಯವಾಗಿ ಮುಸ್ಲಿಮರ ವಿರುದ್ಧ ತಾರತಮ್ಯಕ್ಕೆ ಕಾರಣವಾಗುತ್ತದೆ ಮತ್ತು ನಿರ್ದಿಷ್ಟವಾಗಿ ಮುಸ್ಲಿಂ ಬಾಲಕಿಯರ ಶಿಕ್ಷಣದ ಹಕ್ಕನ್ನು ನಿರಾಕರಿಸುತ್ತದೆ" ಎಂದು ಹೇಳಿದೆ.

Hijab row: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೊರೆ ಹೋದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
ಸುಪ್ರೀಂಕೋರ್ಟ್
Follow us on

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab) ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸೋಮವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.  ಹೈಕೋರ್ಟ್ ತೀರ್ಪನ್ನು “ತಪ್ಪು” ಎಂದು ಕರೆದ ಮಂಡಳಿಯು ತನ್ನ ಅರ್ಜಿಯಲ್ಲಿ ಈ ಕ್ರಮವು “ಸಾಮಾನ್ಯವಾಗಿ ಮುಸ್ಲಿಮರ ವಿರುದ್ಧ ತಾರತಮ್ಯಕ್ಕೆ ಕಾರಣವಾಗುತ್ತದೆ ಮತ್ತು ನಿರ್ದಿಷ್ಟವಾಗಿ ಮುಸ್ಲಿಂ ಬಾಲಕಿಯರ ಶಿಕ್ಷಣದ ಹಕ್ಕನ್ನು ನಿರಾಕರಿಸುತ್ತದೆ” ಎಂದು ಹೇಳಿದೆ. “ಹನಫಿ, ಮಾಲಿಕಿ, ಶಾಫಾಯಿ ಮತ್ತು ಹಂಬ್ಲಿ ಎಲ್ಲಾ ಚಿಂತನೆಯ ಶಾಲೆಗಳ ಧಾರ್ಮಿಕ ವಿದ್ವಾಂಸರಲ್ಲಿ ಇದು ‘ವಾಜಿಬ್’ (ಕಡ್ಡಾಯ) ಎಂದು ಒಮ್ಮತವಿದೆ,  ಅದು ಬಾಧ್ಯತೆಗಳ ಒಂದು ಗುಂಪಾಗಿದೆ. ಒಂದು ವೇಳೆ ಅದನ್ನು ಅನುಸರಿಸದೇ ಇದ್ದರೆ ಅವನು/ಅವಳು “ಪಾಪ” ಮಾಡುತ್ತಾರೆ ಅಥವಾ “ಪಾಪಿ” ಆಗುತ್ತಾರೆ ಎಂದು ಅರ್ಜಿಯಲ್ಲಿ ಹೇಳಿದೆ. ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠವು ಉಡುಪಿಯ ಪದವಿಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ಮುಸ್ಲಿಂ ಹುಡುಗಿಯರು ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕು ಕೋರಿ ಸಲ್ಲಿಸಿದ್ದ ಒಂದು ಅರ್ಜಿಯನ್ನು ವಜಾಗೊಳಿಸಿತ್ತು. ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯನ್ನು ರೂಪಿಸುವುದಿಲ್ಲ” ಮತ್ತು ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಮಂಡಳಿಯು ತನ್ನ ಕಾರ್ಯದರ್ಶಿ ಮೊಹಮ್ಮದ್ ಫಜ್ಲುರ್​​ರಹೀಮ್ ಜೊತೆಗೆ ಇಬ್ಬರು ಅರ್ಜಿದಾರರಾದ ಮುನಿಸಾ ಬುಶ್ರಾ ಮತ್ತು ಜಲೀಸಾ ಸುಲ್ತಾನಾ ಯಾಸೀನ್ ಅವರ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅದೇ  ವೇಳೆ ಇಸ್ಲಾಮಿಕ್ ಧರ್ಮಗುರುಗಳ ಸಂಘಟನೆಯಾದ “ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ” ಕೂಡ ಮುಸ್ಲಿಮರು ಹಿಜಾಬ್ ಧರಿಸುವುದನ್ನು ಎತ್ತಿಹಿಡಿದ ನಂತರ ತರಗತಿಯಲ್ಲಿ ಹಿಜಾಬ್‌ನ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾಕಾಲದ ಅರ್ಜಿಯನ್ನು ಸಲ್ಲಿಸಿದೆ.

ಹೈಕೋರ್ಟಿನ ತೀರ್ಪು ಪವಿತ್ರ ಕುರಾನ್ ಮತ್ತು ಹದೀಸ್‌ಗಳ ತಪ್ಪಾದ ವ್ಯಾಖ್ಯಾನ ಮತ್ತು ಇಸ್ಲಾಮಿಕ್ ಕಾನೂನಿನ ತಪ್ಪು ತಿಳುವಳಿಕೆಯನ್ನು ಆಧರಿಸಿದೆ ಎಂದು ಸಂಘಟನೆ ಹೇಳಿದೆ.

ಕಳೆದ ವಾರ,ಹಿಜಾಬ್ ಪ್ರಕರಣದ ತೀರ್ಪನ್ನು ಪ್ರಶ್ನಿಸುವ ಅರ್ಜಿಗಳ ತುರ್ತು ಪಟ್ಟಿಯ ಕೋರಿಕೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ತಿರಸ್ಕರಿಸಿದ್ದರು. ಮಾರ್ಚ್ 28 ರಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ ಎಂದು ಹೇಳುವ ಮೂಲಕ ತುರ್ತು ಪಟ್ಟಿಗಾಗಿ ಮುಸ್ಲಿಂ ವಿದ್ಯಾರ್ಥಿಯ ಪರವಾಗಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ ಕಾಮತ್ ಅವರಿಗೆ “ಪರೀಕ್ಷೆಗಳಿಗೂ ಈ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಸಿಜೆಐ ರಮಣ ಹೇಳಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ

Published On - 1:26 pm, Mon, 28 March 22