ಸೂಕ್ತ ಸಮಯ ಬಂದಾಗ ನಾವು ಮಧ್ಯ ಪ್ರವೇಶಿಸುತ್ತೇವೆ; ಹಿಜಾಬ್ ವಿವಾದದ ಕುರಿತು ತುರ್ತು ವಿಚಾರಣೆ ಅಸಾಧ್ಯ ಎಂದ ಸುಪ್ರೀಂ ಕೋರ್ಟ್​

Karnataka Hijab Row: ಈ ವಿಚಾರವನ್ನು ದೊಡ್ಡ ಮಟ್ಟದಲ್ಲಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮತ್ತು ವಿಚಾರಣೆಯಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ ಮತ್ತು ಅದನ್ನು ದೆಹಲಿಗೆ ತರುವುದು ಸರಿಯೇ ಎಂದು ನೀವು ಯೋಚಿಸಬೇಕು ಎಂದು ಸಿಜೆಐ ಹೇಳಿದ್ದಾರೆ.

ಸೂಕ್ತ ಸಮಯ ಬಂದಾಗ ನಾವು ಮಧ್ಯ ಪ್ರವೇಶಿಸುತ್ತೇವೆ; ಹಿಜಾಬ್ ವಿವಾದದ ಕುರಿತು ತುರ್ತು ವಿಚಾರಣೆ ಅಸಾಧ್ಯ ಎಂದ ಸುಪ್ರೀಂ ಕೋರ್ಟ್​
ಸುಪ್ರೀಂಕೋರ್ಟ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 11, 2022 | 2:11 PM

ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Hijab) ಮತ್ತು ಇತರ ಧಾರ್ಮಿಕ ಉಡುಪುಗಳನ್ನು ನಿಷೇಧಿಸುವ ಕರ್ನಾಟಕ ಹೈಕೋರ್ಟ್‌ನ (Karnataka High Court) ಮಧ್ಯಂತರ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ತುರ್ತಾಗಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಸೂಕ್ತ ಸಂದರ್ಭದಲ್ಲಿ ಮಾತ್ರ ಮಧ್ಯ ಪ್ರವೇಶಿಸುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದ್ದಾರೆ. ಈ ವಿಷಯಗಳನ್ನು ರಾಷ್ಟ್ರ ಮಟ್ಟಕ್ಕೆ ಹರಡಬೇಡಿ. ಸೂಕ್ತ ಸಮಯದಲ್ಲಿ ಮಾತ್ರ ನಾವು ಹಸ್ತಕ್ಷೇಪ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಗುರುವಾರ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶದ ವಿರುದ್ಧ ವಿದ್ಯಾರ್ಥಿಯೊಬ್ಬ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಹಿರಿಯ ವಕೀಲ ದೇವದತ್ತ ಕಾಮತ್ ಸುಪ್ರೀಂ ಕೋರ್ಟ್​ನಲ್ಲಿ ಪ್ರಸ್ತಾಪಿಸಿದರು. ಕರ್ನಾಟಕ ಹೈಕೋರ್ಟ್ ಮಧ್ಯಂತರ ತೀರ್ಪಿನ ಆದೇಶವು ಇನ್ನೂ ಹೊರಬಂದಿಲ್ಲ ಎಂದು ರಾಜ್ಯ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ವಕೀಲ ದೇವದತ್ತ ಕಾಮತ್ ಸುಪ್ರೀಂ ಕೋರ್ಟ್​ನಲ್ಲಿ ಸೋಮವಾರ ವಿಚಾರಣೆ ನಡೆಸುವಂತೆ ಒತ್ತಾಯಿಸಿದರು.

ಈ ಕುರಿತು ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಚಾರವನ್ನು ದೊಡ್ಡ ಮಟ್ಟದಲ್ಲಿ ತೆಗೆದುಕೊಳ್ಳಬೇಡಿ. ರಾಜ್ಯದಲ್ಲಿ ಮತ್ತು ವಿಚಾರಣೆಯಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ ಮತ್ತು ಅದನ್ನು ದೆಹಲಿಗೆ ತರುವುದು ಸರಿಯೇ ಎಂದು ನೀವು ಯೋಚಿಸಬೇಕು ಎಂದು ಸಿಜೆಐ ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸಂಬಂಧಿತ ಉಡುಗೆಗಳನ್ನು ಧರಿಸುವುದನ್ನು ನಿರ್ಬಂಧಿಸಿ, ಸಮವಸ್ತ್ರವನ್ನು ಮಾತ್ರ ಧರಿಸಬೇಕೆಂದು ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶವನ್ನು ನೀಡಿದೆ. ಫೆಬ್ರವರಿ 14 ರಿಂದ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಪುನರಾರಂಭಗೊಳ್ಳಲಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ 10 ವರ್ಷಗಳಿಂದ ಹಿಜಾಬ್ ಅಥವಾ ತಲೆಯ ಸ್ಕಾರ್ಫ್ ಧರಿಸುತ್ತಿದ್ದಾರೆ ಎಂದು ವಾದಿಸಿದ ವಕೀಲರು ಸುಪ್ರೀಂ ಕೋರ್ಟ್​ ಆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವಂತೆ ನ್ಯಾಯಾಲಯವನ್ನು ಒತ್ತಾಯಿಸಿದಾಗ ಸಿಜೆಐ ನಿರಾಕರಿಸಿದ್ದಾರೆ.

ಉಡುಪಿಯ ಒಂದು ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರಾರಂಭವಾದ ಪ್ರತಿಭಟನೆಯು ಹಿಜಾಬ್ ಧರಿಸಿದ ಹುಡುಗಿಯರಿಗೆ ಪ್ರವೇಶವನ್ನು ಅನುಮತಿಸದ ಅನೇಕ ಸಂಸ್ಥೆಗಳಿಗೆ ಹರಡಿತು. ಹಿಜಾಬ್​ ವಿರುದ್ಧ ಹಿಂದೂ ವಿದ್ಯಾರ್ಥಿಗಳು ಕೇಸರಿ ಸ್ಕಾರ್ಫ್ ಧರಿಸಿ ತರಗತಿಗಳಿಗೆ ಬಂದ ಘಟನೆಯೂ ನಡೆಯಿತು.ಈ ಘಟನೆ ತಾರಕಕ್ಕೇರಿದ್ದರಿಂದ ಕರ್ನಾಟಕ ಸರ್ಕಾರ 3 ದಿನಗಳ ರಜೆ ಘೋಷಿಸಿದೆ. ಸೋಮವಾರದಿಂದ ಮತ್ತೆ ತರಗತಿಗಳು ಆರಂಭವಾಗಲಿವೆ. ಕಾಲೇಜುಗಳಲ್ಲಿನ ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸುತ್ತಿದೆ.

ಇದನ್ನೂ ಓದಿ: Hijab row: ಹಿಜಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಧ್ಯಂತರ ಆದೇಶ ಪ್ರಕಟ, ಏನಿದೆ ಲಿಖಿತ ತೀರ್ಪಿನಲ್ಲಿ?

ಹಿಜಾಬ್ ಗಲಾಟೆ ಮಾಡುವ ವಿಷಯ ಅಲ್ಲ, ಬಹಳ ವರ್ಷಗಳಿಂದ ಮುಸ್ಲಿಂ ಯುವತಿಯರು ಧರಿಸುತ್ತಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ

Published On - 2:05 pm, Fri, 11 February 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್