ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ

|

Updated on: Aug 14, 2023 | 9:13 AM

ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಮತ್ತೆ ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಮಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೋಮವಾರ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ
ಮೇಘಸ್ಫೋಟ
Follow us on

ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಮತ್ತೆ ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಮಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೋಮವಾರ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಡೋನ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಎರಡು ಮನೆಗಳು ಮತ್ತು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿದೆ ಎಂದು ಕಂದಘಾಟ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಿದ್ಧಾರ್ಥ ಆಚಾರ್ಯ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡದಲ್ಲಿ ಭಾರೀ ಮಳೆಯು ಮುಂದುವರಿದಿದ್ದು, ಭೂಕುಸಿತಗಳು ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿವೆ, ಸೇತುವೆಗಳು ಕೊಚ್ಚಿಹೋಗಿವೆ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಒತ್ತಾಯಿಸಲಾಯಿತು ಮತ್ತು ನದಿಗಳ ನೀರಿನ ಮಟ್ಟವು ಎತ್ತರಕ್ಕೆ ತಲುಪಿದೆ.

ಹಿಮಾಚಲ ಪ್ರದೇಶದಲ್ಲಿ, ಶಿಮ್ಲಾದಲ್ಲಿ ಮರವೊಂದು ಉರುಳಿ ವಾಹನದ ಮೇಲೆ ಬಿದ್ದ ಪರಿಣಾಮ ಖಾಸಗಿ ಬಸ್‌ನ ಕಂಡಕ್ಟರ್ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಮನೆ ಕುಸಿತ, ಅವಶೇಷಗಳಡಿ ಐವರು ಸಿಲುಕಿರುವ ಶಂಕೆ

ನಿರಂತರ ಮಳೆಯಿಂದಾಗಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳನ್ನು ಆಗಸ್ಟ್ 14 (ಸೋಮವಾರ) ವರೆಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಘೋಷಿಸಿದ್ದಾರೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಮಂಡಿಯಲ್ಲಿ ಗರಿಷ್ಠ 236, ಶಿಮ್ಲಾದಲ್ಲಿ 59 ಮತ್ತು ಬಿಲಾಸ್‌ಪುರ ಜಿಲ್ಲೆಯಲ್ಲಿ 40 ಸೇರಿದಂತೆ ಒಟ್ಟು 621 ರಸ್ತೆಗಳನ್ನು ಪ್ರಸ್ತುತ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ.

ಶಿಮ್ಲಾ ಮತ್ತು ಚಂಡೀಗಢವನ್ನು ಸಂಪರ್ಕಿಸುವ ಶಿಮ್ಲಾ-ಕಲ್ಕಾ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಭಾಗವು ಕಳೆದ ಎರಡು ವಾರಗಳಿಂದ ಪುನರಾವರ್ತಿತ ಭೂಕುಸಿತಗಳಿಂದ ಪ್ರಭಾವಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ