Himachal Pradesh: ಕಂದಕಕ್ಕೆ ಉರುಳಿದ ಬಸ್, ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲುವಿನ ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೆ, ಬಸ್‌ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 20 ರಿಂದ 25 ಜನರಿದ್ದರು ಎಂದು ಅವರು ಹೇಳಿದರು.
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲುವಿನ ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೆ, ಬಸ್‌ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 20 ರಿಂದ 25 ಜನರಿದ್ದರು ಎಂದು ಅವರು ಹೇಳಿದರು.
ಇತರ ಪ್ರಯಾಣಿಕರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಮ್ಮ ತಂಡವು ಸ್ಥಳದಲ್ಲಿದೆ ಎಂದು ಕುಲು ಜಿಲ್ಲಾಧಿಕಾರಿ ಎಸ್ ರವೀಶ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಾಂಪುರಕ್ಕೆ ಕಳುಹಿಸಲಾಗಿದೆ.
ಕಾರಂತಲ್‌ನಿಂದ ಬರುತ್ತಿದ್ದ ಬಸ್ ಕುಲುವಿನ ಅನ್ನಿಯ ಶ್ವಾದ್-ನಾಗನ್ ರಸ್ತೆಯ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಪಘಾತದ ದೊಡ್ಡ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಪೊಲೀಸ್ ತಂಡಗಳು ಕೂಡ ಅಪಘಾತ ಸ್ಥಳಕ್ಕೆ ತಲುಪಿವೆ.
ಮತ್ತಷ್ಟು ಓದಿ: ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ
ಮತ್ತೊಂದು ಅಪಘಾತ ಮುಂಬೈನಲ್ಲಿ ಬ್ರೇಕ್ ಫೇಲ್ ಆಗಿ ವಾಹನಗಳು, ಜನರ ಮೇಲೆ ಹರಿದ ಬಸ್ ಮುಂಬೈನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 49 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಬೈನ ನಾಗರಿಕ ಸಾರಿಗೆ ಸಂಸ್ಥೆ ಬೆಸ್ಟ್ ಬಸ್ ಪಾದಚಾರಿಗಳಿಗೆ ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದು ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ.
Himachal Pradesh: A private bus fell into a gorge in Kullu’s Ani area, killing the driver and injuring several passengers, some critically. The bus, carrying 20-25 people, was traveling from Karsog to Ani. Local residents and police are conducting rescue operations pic.twitter.com/WxbUbsFGRf
— IANS (@ians_india) December 10, 2024
ಕುರ್ಲಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ನಂತರ ಬಸ್ ಚಾಲಕನನ್ನು ಬಂಧಿಸಲಾಗಿದೆ. ಬಸ್, ಪಾದಚಾರಿಗಳಿಗೆ, ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಬುದ್ಧ ಕಾಲೊನಿಯೊಳಗಿನ ವಸತಿ ಕಟ್ಟಡದೊಳಗೆ ಪ್ರವೇಶಿಸಿತ್ತು.
ಕುರ್ಲಾದಿಂದ ಅಂಧೇರಿಗೆ ಹೋಗುವ ಮಾರ್ಗ-332 ರಲ್ಲಿ ಬಸ್ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. MH01-EM-8228 ನೋಂದಣಿ ಸಂಖ್ಯೆಯ ಬಸ್ ಕುರ್ಲಾ ರೈಲು ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ