ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಹೆಣ್ಣುಮಕ್ಕಳು ಸ್ವಂತ ಆಲೋಚನಾಶಕ್ತಿ ಬೆಳೆಸಿಕೊಂಡು ಉತ್ತಮ ನಿರ್ಧಾರ ತೆಗೆದುಕೊಳ್ಳುವಂತಾಗಲು ಕನಿಷ್ಠ 21 ವರ್ಷವಾದರೂ ಆಗಬೇಕು ಹೀಗಾಗಿ ಹೆಣ್ಣುಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿ ಮಂಡಿಸಿರುವ ಮಸೂದೆಗೆ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ
ಮದುವೆ

Updated on: Aug 28, 2024 | 9:54 AM

ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ತಿದ್ದುಪಡಿಯು ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು ಮೂರು ವರ್ಷಗಳವರೆಗೆ ಹೆಚ್ಚಿಸುತ್ತದೆ. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಲಿಂಗ ಸಮಾನತೆಯನ್ನು ಒದಗಿಸಲು ಹೆಣ್ಣುಮಕ್ಕಳ ಕನಿಷ್ಠ ವಿವಾಹದ ವಯಸ್ಸನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಸಚಿವ ಧನಿ ರಾಮ್ ಹೇಳಿದ್ದಾರೆ. ಗರ್ಭಧಾರಣೆಯು ಹುಡುಗಿಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂದು ಸಚಿವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ಹೆಚ್ಚಿಸುವ ಪ್ರಯತ್ನ ಕೆಲ ಸಮಯದಿಂದ ನಡೆಯುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸು 18 ವರ್ಷಗಳು, ಇದು ಭಾರತದ ಹೆಚ್ಚಿನ ಭಾಗಗಳಲ್ಲಿದೆ.

ಮತ್ತಷ್ಟು ಓದಿ: Video: 12 ವರ್ಷದ ಬಾಲಕಿಗೆ 62ರ ವೃದ್ಧನ ಜೊತೆ ಬಲವಂತವಾಗಿ ಮದುವೆ ಮಾಡಿಸಲು ಮುಂದಾದ ಕುಟುಂಸ್ಥರು

ಆದರೆ, ಈ ಮಸೂದೆ ಅಂಗೀಕಾರದೊಂದಿಗೆ, ರಾಜ್ಯ ಸರ್ಕಾರವು ಹೆಣ್ಣುಮಕ್ಕಳಿಗೆ ಮದುವೆಗೆ ಮುನ್ನ ಶಿಕ್ಷಣ ಮತ್ತು ವೈಯಕ್ತಿಕ ಬೆಳವಣಿಗೆಗೆ ಹೆಚ್ಚಿನ ಸಮಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಾಜ್ಯಪಾಲರು ಅಂಕಿತ ಹಾಕಿದರೆ ಹೊಸ ಕಾನೂನು ಜಾರಿಗೆ ಬರಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:52 am, Wed, 28 August 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us