AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷವನ್ನು ಶುದ್ಧೀಕರಿಸಿ: ಹಿಮಾಚಲದಲ್ಲಿ ಅಡ್ಡ ಮತದಾನ ವಿರುದ್ಧ ನವಜೋತ್ ಸಿಂಗ್ ಸಿಧು ಗುಡುಗು

ನಷ್ಟವು ಮನು ಸಿಂಘ್ವಿ ಅವರದ್ದಲ್ಲ.  ಆದರೆ ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರ ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ, ಅವರ ಕಾರ್ಯಗಳು ಪಕ್ಷದ ಅಸ್ತಿತ್ವದ ಮೇಲೆ ಆಳವಾದ ಗಾಯಗಳನ್ನು ಉಂಟುಮಾಡುತ್ತವೆ. ಗಾಯಗಳು ವಾಸಿಯಾಗಬಹುದು. ಮಾನಸಿಕ ಕಲೆಗಳು ಉಳಿಯುತ್ತವೆ. ಅವರ ಲಾಭವೇ ಕಾಂಗ್ರೆಸ್ ಕಾರ್ಯಕರ್ತರ ದೊಡ್ಡ ನೋವು ಎಂದು ನವಜೋತ್ ಸಿಂಗ್ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಶುದ್ಧೀಕರಿಸಿ: ಹಿಮಾಚಲದಲ್ಲಿ ಅಡ್ಡ ಮತದಾನ ವಿರುದ್ಧ ನವಜೋತ್ ಸಿಂಗ್ ಸಿಧು ಗುಡುಗು
ನವಜೋತ್ ಸಿಂಗ್ ಸಿಧು
ರಶ್ಮಿ ಕಲ್ಲಕಟ್ಟ
|

Updated on:Feb 28, 2024 | 4:25 PM

Share

ದೆಹಲಿ ಫೆಬ್ರವರಿ 28: ಹಿಮಾಚಲ ಪ್ರದೇಶದಲ್ಲಿ (Himachal Pradesh) ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಆರು ಪಕ್ಷದ ಶಾಸಕರ ಮೇಲೆ ಕಾಂಗ್ರೆಸ್‌ನ (Congress) ಪಂಜಾಬ್ ನಾಯಕ ನವಜೋತ್ ಸಿಂಗ್ ಸಿಧು (Navjot Singh Sidhu) ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪಕ್ಷವು ಸುಲಭವಾಗಿ ಗೆಲ್ಲಬೇಕಿದ್ದಲ್ಲಿ ಅಡ್ಡ ಮತದಾನದಿಂದಾಗಿ ಕಾಂಗ್ರೆಸ್ ಪರಾಭವಗೊಂಡಿತ್ತು. ಅಡ್ಡ ಮತದಾನ ವಿರುದ್ಧ ಗುಡುಗಿದ ಮಾಜಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (PPCC) ಮುಖ್ಯಸ್ಥ ಸಿಧು ಪಕ್ಷದ ‘ಆಸ್ತಿ ಮತ್ತು ಹೊಣೆಗಾರಿಕೆಗಳ ಮೌಲ್ಯಮಾಪನ’ಕ್ಕೆ ಕರೆ ನೀಡಿದರು.

“ಕಾಂಗ್ರೆಸ್ ಪಕ್ಷಕ್ಕೆಹಿಮಾಚಲ ವೈಫಲ್ಯವು ಸ್ವತ್ತುಗಳು ಮತ್ತು ಹೊಣೆಗಾರಿಕೆಗಳ ಮೌಲ್ಯಮಾಪನಕ್ಕೆ ಕರೆ ನೀಡುತ್ತದೆ. ಸಿಬಿಐ, ಇಡಿ ಮತ್ತು ಐಟಿಯಂತಹ ಏಜೆನ್ಸಿಗಳ ಟ್ಯೂನ್‌ಗಳಿಗೆ ರಹಸ್ಯವಾಗಿ ನೃತ್ಯ ಮಾಡುವ ಉನ್ನತ ಸ್ಥಾನದಲ್ಲಿರುವವವರ ಮೇಲೆ ವೇಷಧಾರಿಗಳು ಅನೇಕ ಬಾರಿ ಅಂತಿಮ ತೀರ್ಪುಕೊಟ್ಟಿದ್ದಾರೆ!” ಎಂದು ನವಜೋತ್ ಸಿಂಗ್ ಸಿಧು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರನ್ನು ದೂರವಿರಿಸಲು ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕರು ಒತ್ತಿ ಹೇಳಿದರು.

ಸಿಧು ಟ್ವೀಟ್

“ನಷ್ಟವು ಮನು ಸಿಂಘ್ವಿ ಅವರದ್ದಲ್ಲ.  ಆದರೆ ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರ ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ, ಅವರ ಕಾರ್ಯಗಳು ಪಕ್ಷದ ಅಸ್ತಿತ್ವದ ಮೇಲೆ ಆಳವಾದ ಗಾಯಗಳನ್ನು ಉಂಟುಮಾಡುತ್ತವೆ. ಗಾಯಗಳು ವಾಸಿಯಾಗಬಹುದು. ಮಾನಸಿಕ ಕಲೆಗಳು ಉಳಿಯುತ್ತವೆ. ಅವರ ಲಾಭವೇ ಕಾಂಗ್ರೆಸ್ ಕಾರ್ಯಕರ್ತರ ದೊಡ್ಡ ನೋವು. ನಿಷ್ಠೆಯೇ ಎಲ್ಲವಲ್ಲ ಆದರೆ ಅದು ಇರಲೇಬೇಕು ಎಂದು ಸಿಧು ಹೇಳಿದ್ದಾರೆ.

ಹಿಮಾಚಲ ಪ್ರದೇಶದ 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಹೊಂದಿದ್ದರೂ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದೆ.

ಶಿಮ್ಲಾಗೆ ತೆರಳಿದ ಕಾಂಗ್ರೆಸ್ ವೀಕ್ಷಕರು

ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮೂವರು ಹಿರಿಯ ನಾಯಕರನ್ನು ಶಿಮ್ಲಾಗೆ ಕಳುಹಿಸಲಾಗಿದೆ ಎಂದಿದ್ದಾರೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪಕ್ಷದ ಶಾಸಕರೊಂದಿಗೆ ಮಾತನಾಡಲು ಶಿಮ್ಲಾಗೆ ತೆರಳಿದ್ದಾರೆ.

ವೀಕ್ಷಕರು ತಮ್ಮ ವರದಿಯನ್ನು ಸಲ್ಲಿಸಿದ ನಂತರ ಮುಂದಿನ ಹಾದಿಯ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಎಲ್ಲಾ ವ್ಯಕ್ತಿಗಳಿಗಿಂತ ಪಕ್ಷದ ಹಿತಾಸಕ್ತಿ ಮತ್ತು ಜನಾದೇಶಕ್ಕೆ ಹೆಚ್ಚಿನ ಸ್ಥಾನವನ್ನು ನೀಡಲಾಗುವುದು ಎಂದು ರಮೇಶ್ ಹೇಳಿದರು. ಮುಖ್ಯಮಂತ್ರಿ ಸುಖವಿಂದರ್ ಸುಖು ಅವರನ್ನು ಬದಲಾಯಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದು ಯಾವುದೇ ನಿರ್ಧಾರಗಳನ್ನ ವರದಿ ನಂತರವೇ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ಕೋರ್ಟ್; ಬಂಧಿಸಲು ಸೂಚನೆ 

ವೀಕ್ಷಕರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಎಲ್ಲಾ ಶಾಸಕರನ್ನು ಭೇಟಿ ಮಾಡಿ, ಅವರ ದೂರುಗಳು ಮತ್ತು ಬೇಡಿಕೆಗಳನ್ನು ಆಲಿಸಿ ಮತ್ತು ಸಾಧ್ಯವಾದಷ್ಟು ಬೇಗ ನನಗೆ ವರದಿಯನ್ನು ಸಲ್ಲಿಸುವಂತೆ ಹೇಳಿದ್ದಾರೆ.ಅಡ್ಡ ಮತದಾನ ನಡೆದಿದೆ, ಆದರೆ ಮುಂದೆ ಏನಾಗುತ್ತದೆ ಎಂಬುದಕ್ಕೆ ಈಗ ನಾವು ವಿಚಾರಿಸಬೇಕಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 28 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು