ಹಿಮಾಚಲ ಪ್ರದೇಶದಲ್ಲಿ 3.3 ತೀವ್ರತೆಯ ಲಘು ಭೂಕಂಪ

Himachal Pradesh Earthquake: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ 3.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯನ್ನು 3.3 ಎಂದು ಅಂದಾಜಿಸಲಾಗಿದೆ

ಹಿಮಾಚಲ ಪ್ರದೇಶದಲ್ಲಿ 3.3 ತೀವ್ರತೆಯ ಲಘು ಭೂಕಂಪ
ಭೂಕಂಪ
Image Credit source: News 9

Updated on: Aug 10, 2023 | 7:28 AM

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ 3.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯನ್ನು 3.3 ಎಂದು ಅಂದಾಜಿಸಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ತಿಂಗಳು ಹಿಮಾಚಲದ ಕಂಗ್ರಾ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿತ್ತು. ಆ ಸಮಯದಲ್ಲಿಯೂ ಯಾವುದೇ ರೀತಿಯ ಹಾನಿಯಾಗಿರಲಿಲ್ಲ.

ಭೂಕಂಪದ ಬಗ್ಗೆ ಈ ಮಾಹಿತಿಯನ್ನು ಭಾರತೀಯ ಭೂಕಂಪನ ಇಲಾಖೆಯ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ನೀಡಿದೆ. ಭೂಮಿಯೊಳಗೆ ಏಳು ಟೆಕ್ಟೋನಿಕ್ ಪ್ಲೇಟ್​ಗಳಿವೆ, ಇವು ನಿರಂತರವಾಗಿ ತಿರುಗುತ್ತಿರುತ್ತವೆ, ಇವುಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿ ನಡುಗಲು ಶುರುವಾಗುತ್ತದೆ. ಭೂಕಂಪವನ್ನು ಅಳೆಯಲು ರಿಕ್ಟರ್ ಮಾಪಕವನ್ನು ಬಳಸಲಾಗುತ್ತದೆ ಅದನ್ನು ರಿಕ್ಟರ್ ಮ್ಯಾಗ್ನಿಟ್ಯೂಡ್ ಸ್ಕೇಲ್ ಎಂದು ಕರೆಯಲಾಗುತ್ತದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us