Himachal Pradesh Earthquake: ಹಿಮಾಚಲ ಪ್ರದೇಶದಲ್ಲಿ 3.1 ತೀವ್ರತೆಯ ಭೂಕಂಪ
ಹಿಮಾಚಲ ಪ್ರದೇಶದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಿಮಾಚಲ ಪ್ರದೇಶದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶ ಛಂಬಾ ಪ್ರದೇಶದಲ್ಲಿ ಮಧ್ಯಾಹ್ನ 1.16ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 9 ಕಿ.ಮೀ ಆಳದಲ್ಲಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ಗುರುವಾರ ಭೂಕಂಪನದ ಅನುಭವವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು. ಕಾಶ್ಮೀರದ ಪೂಂಚ್‌ನಲ್ಲೂ ಕಂಪನದ ಅನುಭವವಾಗಿದೆ. ದಿಲ್ಲಿಯ ಪಕ್ಕದ ನೋಯ್ಡಾದಲ್ಲಿ ಕೂಡ ಕಂಪನದಿಂದಾಗಿ ಜನರು ಮನೆಗಳಿಂದ ಹೊರಬಂದಿದ್ದರು.
ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಹೆಚ್ಚುತ್ತಿವೆ.ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1 ಇತ್ತು. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿತ್ತು. ಕೆಲವು ದಿನಗಳ ಹಿಂದೆ, ಜಪಾನ್‌ನಲ್ಲಿ 7 ಕ್ಕೂ ಹೆಚ್ಚು ತೀವ್ರತೆಯ ಭೂಕಂಪದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Sat, 13 January 24