ಹಿಮಾಚಲ ಪ್ರದೇಶದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶ ಛಂಬಾ ಪ್ರದೇಶದಲ್ಲಿ ಮಧ್ಯಾಹ್ನ 1.16ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 9 ಕಿ.ಮೀ ಆಳದಲ್ಲಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ಗುರುವಾರ ಭೂಕಂಪನದ ಅನುಭವವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು. ಕಾಶ್ಮೀರದ ಪೂಂಚ್‌ನಲ್ಲೂ ಕಂಪನದ ಅನುಭವವಾಗಿದೆ. ದಿಲ್ಲಿಯ ಪಕ್ಕದ ನೋಯ್ಡಾದಲ್ಲಿ ಕೂಡ ಕಂಪನದಿಂದಾಗಿ ಜನರು ಮನೆಗಳಿಂದ ಹೊರಬಂದಿದ್ದರು.
ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಹೆಚ್ಚುತ್ತಿವೆ.ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1 ಇತ್ತು. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿತ್ತು. ಕೆಲವು ದಿನಗಳ ಹಿಂದೆ, ಜಪಾನ್‌ನಲ್ಲಿ 7 ಕ್ಕೂ ಹೆಚ್ಚು ತೀವ್ರತೆಯ ಭೂಕಂಪದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Sat, 13 January 24