Himachal Pradesh Election Result 2022: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈರಾಮ್ ಠಾಕೂರ್‌

ಹಿಮಾಚಲಪ್ರದೇಶದ ಹಾಲಿ ಸಿಎಂ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಸಿಎಂ ಜೈರಾಮ್ ಠಾಕೂರ್‌ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

Himachal Pradesh Election Result 2022: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈರಾಮ್ ಠಾಕೂರ್‌
ಜೈರಾಮ್ ಠಾಕೂರ್‌
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 08, 2022 | 6:01 PM

ಹಿಮಾಚಲಪ್ರದೇಶ: ಹಿಮಾಚಲಪ್ರದೇಶದ ಹಾಲಿ ಸಿಎಂ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಸಿಎಂ ಜೈರಾಮ್ ಠಾಕೂರ್‌ ಅವರು ಇಂದು  ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಠಾಕೂರ್‌ ಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ ಸೋಲು ಕಂಡ ನಂತರ ಸಂಪ್ರಾದಯಕವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಭಾರಿ ಗೆಲುವು ದಾಖಲಿಸಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ, ಜೈರಾಮ್ ಠಾಕೂರ್ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಸೆರಾಜ್‌ನಿಂದ(Seraj) ಸತತ ಆರನೇ ಬಾರಿಗೆ 20,000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.

ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದ ಗಡಿ ದಾಟಿದೆ. ಇಲ್ಲಿಯವರೆಗಿನ ಟ್ರೆಂಡ್‌ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ ದಾಖಲಾಗಿದೆ. ಕಾಂಗ್ರೆಸ್ ಪಕ್ಷವು 68 ಸ್ಥಾನಗಳಲ್ಲಿ 38 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸೋಮವಾರ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಾಗ ಜನರು ಎಣಿಕೆ ದಿನದವರೆಗೆ ಕಾಯಬೇಕು ಎಂದು ಠಾಕೂರ್ ಹೇಳಿದ್ದಾರೆ.

ಇದನ್ನು ಓದಿ: Himachal Pradesh Election Result 2022: ಸೆರಾಜ್ ಕ್ಷೇತ್ರದಿಂದ ಹಾಲಿ ಸಿಎಂ ಜೈರಾಮ್ ಠಾಕೂರ್ ಗೆಲುವು

ಹಿಮಾಚಲದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತಿದೆ ಎಂದು ಹಲವಾರು ಎಕ್ಸಿಟ್ ಪೋಲ್‌ಗಳು ತೋರಿಸಿವೆ. ಆದರೆ ಕೆಲವು ಭಾಗಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡುಬರಲಿದೆ ಎಂದು ಕೆಲವರು ಹೇಳಿದ್ದಾರೆ. ಅಂತಿಮ ಫಲಿತಾಂಶಕ್ಕಾಗಿ ನಾವು ಡಿಸೆಂಬರ್ 8 ರವರೆಗೆ ಕಾಯಬೇಕು. ನಮ್ಮ ವಿಶ್ಲೇಷಣೆಯ ಪ್ರಕಾರ, ಅಲ್ಲಿ ಸರಳ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಉತ್ತಮ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದೀಗ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರ ವಿರುದ್ಧ ಕಾಂಗ್ರೆಸ್‌ನ ಚೇತ್ರಂ ಠಾಕೂರ್ ಸ್ಪರ್ಧಿಸಿದ್ದಾರೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12 ರಂದು ಮತದಾನ ನಡೆದಿತ್ತು. 2017ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Thu, 8 December 22