Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದ ಕುಲ್ಲುದಲ್ಲಿ ಭಾರೀ ಭೂಕುಸಿತ; ದೊಡ್ಡ ಮರ ಬಿದ್ದು 6 ಜನ ಸಾವು

ಹಿಮಾಚಲ ಪ್ರದೇಶದಲ್ಲಿ ಬಿರುಗಾಳಿಯಿಂದ ಬೃಹತ್ ಮರ ಉರುಳಿ ಬಿದ್ದ ಪರಿಣಾಮದಿಂದ ಭೂಕುಸಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದಾರೆ. ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಬಳಿ ಸಂಭವಿಸಿದ ಭೂಕುಸಿತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 5 ಜನರಿಗೆ ಗಾಯಗಳಾಗಿವೆ. ಭಾರೀ ಮಳೆ ಮತ್ತು ನಂತರದ ಭೂಕುಸಿತದ ನಂತರ ಗುರುದ್ವಾರದ ಎದುರಿನ ಪರ್ವತದಿಂದ ಮರವೊಂದು ಕುಸಿದು ಬಿದ್ದು ಅಪಾರ ಹಾನಿ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲುದಲ್ಲಿ ಭಾರೀ ಭೂಕುಸಿತ; ದೊಡ್ಡ ಮರ ಬಿದ್ದು 6 ಜನ ಸಾವು
Himachal Pradesh Tragedy
Follow us
ಸುಷ್ಮಾ ಚಕ್ರೆ
|

Updated on: Mar 30, 2025 | 9:47 PM

ಶ್ರೀನಗರ, ಮಾರ್ಚ್ 30: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಬಳಿ ಇಂದು (ಭಾನುವಾರ) ಸಂಭವಿಸಿದ ಭೂಕುಸಿತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. “ಕುಲ್ಲುವಿನ ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ಮರಗಳು ಉರುಳಿ ಬಿದ್ದ ನಂತರ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಜಿಲ್ಲಾಡಳಿತದ ಪೊಲೀಸರು ಮತ್ತು ರಕ್ಷಣಾ ತಂಡಗಳು ಐವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿವೆ” ಎಂದು ಕುಲ್ಲುವಿನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶ್ವನಿ ಕುಮಾರ್ ತಿಳಿಸಿದ್ದಾರೆ.

ಬಿರುಗಾಳಿ ಮತ್ತು ಭೂಕುಸಿತದ ನಂತರ ಗುರುದ್ವಾರದ ಎದುರಿನ ಪರ್ವತದ ಮೇಲಿದ್ದ ಮರವೊಂದು ಬುಡಸಮೇತ ಬಿದ್ದಿತು. ರಸ್ತೆಯಲ್ಲಿ ನಿಲ್ಲಿಸಿದ್ದ ಕೆಲವು ವಾಹನಗಳ ಮೇಲೆ ಆ ಮರ ಬಿದ್ದು 6 ಜನರು ಸಾವನ್ನಪ್ಪಿದರು ಮತ್ತು ಇತರ ಮೂವರು ಗಾಯಗೊಂಡರು ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ತಂಡಗಳು, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಇದನ್ನೂ ಓದಿ: ತಪ್ಪಿದ ಭಾರೀ ದುರಂತ; ಹಿಮಾಚಲ ಪ್ರದೇಶದ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಕೂಡ ತಮ್ಮ ಸಂತಾಪ ಸೂಚಿಸಿದರು.

ಈ ತಿಂಗಳ ಆರಂಭದಲ್ಲಿ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿತು. ಭೂಕುಸಿತಗಳು, ರಸ್ತೆಗಳು ಬಂದ್ ಆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!