Himachal Pradesh Landslide: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಕುಲು ರಾಷ್ಟ್ರೀಯ ಹೆದ್ದಾರಿ ಬಂದ್
Kullu Landslide | ಭಾರೀ ಮಳೆ ಹಿನ್ನೆಲೆ ಹಿಮಾಚಲ ಪ್ರದೇಶದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಾಂಗ್ರಾ, ಹಮೀರ್ಪುರ್, ಸೋಲನ್, ಶಿಮ್ಲಾ, ಬಿಲಾಸ್ಪುರ, ಉನಾ, ಸಿರ್ಮೌರ್ ಮುಂತಾದ ಭಾಗಗಳಲ್ಲಿ ವಿಪರೀತ ಮಳೆಯಾಗಲಿದೆ
ಕುಲು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಮಳೆಯಿಂದ ಅನೇಕ ಕಡೆ ಭೂ ಕುಸಿತವಾಗಿದ್ದು, ಕುಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಕುಲು ಜಿಲ್ಲೆಯ ಶೋಜಾದ ರಾಷ್ಟ್ರೀಯ ಹೆದ್ದಾರಿ 305ರಲ್ಲಿ ಭೂ ಕುಸಿತದಿಂದ ವಾಹನ ಸಂಚಾರ ಸ್ಥಗಿತವಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಹಿಮಾಚಲಪ್ರದೇಶದ ಬಂಜಾರ್ ಜಿಲ್ಲೆಯ ಮ್ಯಾಜಿಸ್ಟ್ರೇಟ್, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 305 ಬಂದ್ ಆಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಭೂಸಿತ ಉಂಟಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದಿದ್ದಾರೆ.
ಭಾರೀ ಮಳೆ ಹಿನ್ನೆಲೆ ಹಿಮಾಚಲ ಪ್ರದೇಶದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಾಂಗ್ರಾ, ಹಮೀರ್ಪುರ್, ಸೋಲನ್, ಶಿಮ್ಲಾ, ಬಿಲಾಸ್ಪುರ, ಉನಾ, ಸಿರ್ಮೌರ್ ಮುಂತಾದ ಭಾಗಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ನಾಳೆಯಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ.
ಹಾಗೇ, ಹಿಮಾಚಲ ಪ್ರದೇಶದ ಸ್ಪಿತಿ ಜಿಲ್ಲೆಯ ಲಾಹೌಲ್ ಪ್ರವೇಶಿಸಲು ಪ್ರವಾಸಿಗರು ತೆರಿಗೆ ಪಾವತಿಸಬೇಕೆಂಬ ಆದೇಶ ಹೊರಡಿಸಲಾಗಿದೆ. ದ್ವಿಚಕ್ರ ವಾಹನ ಸವಾರರಿಗೆ 50 ರೂ., ಕಾರುಗಳಿಗೆ 200 ರೂ., ಎಸ್ಯುವಿ ಮತ್ತು ಎಂಯುವಿ ವಾಹನಗಳಿಗೆ 300 ರೂ., ಬಸ್ ಹಾಗೂ ಟ್ರಕ್ಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಆ ತೆರಿಗೆ ಹಣವನ್ನು ಸ್ಥಳೀಯ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಯ ತುಂಬ ನೀರು ತುಂಬಿ ನದಿಯಂತಾಗಿವೆ. ಮನೆ, ಕಾರ್ಖಾನೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣದೊಳಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಉಕ್ಕಿ ಹರಿಯುತ್ತಿದ್ದ ಚರಂಡಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ. ಕಳೆದ 46 ವರ್ಷಗಳಲ್ಲೇ ದೆಹಲಿಯಲ್ಲಿ ಅತಿ ಹೆಚ್ಚು ಮಳೆಯಾದ ವರ್ಷವಿದು ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ಇದುವರೆಗೂ 380ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ, ಸಂಪೂರ್ಣ ಮುಳುಗಡೆಯಾಗಿವೆ.
ಇದನ್ನೂ ಓದಿ: Delhi Rain: ದೆಹಲಿಯಲ್ಲಿ ವಿಪರೀತ ಮಳೆಗೆ ಜನ ತತ್ತರ; ಚರಂಡಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು
Delhi Rain: 121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ ಕಂಡ ದೆಹಲಿ, ಇಂದು ಕೂಡ ಮಳೆಯಾಗುವ ಸಾಧ್ಯತೆ
(Himachal Pradesh Landslide blocks National Highway in Kullu district after Heavy Rain)