Himachal Pradesh Landslide: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ 40ಕ್ಕೂ ಹೆಚ್ಚು ಜನ

| Updated By: ಸುಷ್ಮಾ ಚಕ್ರೆ

Updated on: Aug 11, 2021 | 4:14 PM

Landslide in Himachal Pradesh: ಹಿಮಾಚಲ ಪ್ರದೇಶದ ಕಿಣ್ಣಾವುರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಭಾರೀ ಭೂಕುಸಿತವಾಗಿದ್ದು, 40ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.

Himachal Pradesh Landslide: ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ 40ಕ್ಕೂ ಹೆಚ್ಚು ಜನ
ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ
Follow us on

ಹಿಮಾಚಲ ಪ್ರದೇಶ: ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹಿಮಾಚಲ ಪ್ರದೇಶದಲ್ಲಿ ಮಳೆಯಿಂದ ಭಾರೀ ಭೂಕುಸಿತ ಉಂಟಾಗಿದ್ದು, 40ಕ್ಕೂ ಹೆಚ್ಚು ಜನರು ಮಣ್ಣಿನಡಿ ಹುದುಗಿದ್ದಾರೆ. ಹಿಮಾಚಲ ಪ್ರದೇಶದ ಕಿಣ್ಣಾವುರ್ ಜಿಲ್ಲೆಯಲ್ಲಿ ಈ ದುರಂತ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಇಂದು ಮಧ್ಯಾಹ್ನ 12.45ಕ್ಕೆ ಈ ಭೂಕುಸಿತ ಸಂಭವಿಸಿದ್ದು, ಕಿಣ್ಣಾವುರ್ ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾದಿಖ್ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಹಿಮಾಚಲ ಪ್ರದೇಶದ ಸಾರಿಗೆ ಬಸ್ ಸಂಚರಿಸುತ್ತಿದ್ದಾಗಲೇ ಭೂಕುಸಿತ ಉಂಟಾಗಿದ್ದು, ಬಸ್​ ಹಾಗೂ ಅದರ ಹಿಂದೆ ಮುಂದೆ ಬರುತ್ತಿದ್ದ ಕೆಲವು ವಾಹನಗಳು ಕೂಡ ಮಣ್ಣಿನಡಿ ಮುಚ್ಚಿಹೋಗಿವೆ. ಆ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದಾರೆ.

ಹೆಚ್​ಆರ್​ಸಿಟಿಸಿ ಸಾರಿಗೆ ಬಸ್, ಟ್ರಕ್, ಕಾರುಗಳು ಭೂಕುಸಿತದಿಂದ ಮಣ್ಣಿನಡಿ ಮುಚ್ಚಿಹೋಗಿವೆ. ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿ ಬಂದ್ ಆಗಿದ್ದು, ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕೆಲವು ದಿನಗಳ ಹಿಂದೆ ಹಿಮಾಚಲ ಪ್ರದೇಶದ ಸಿರ್​ಮೌರ್ ಜಿಲ್ಲೆಯ ಶಿಲಾಯ್​ ಪ್ರದೇಶದ ಕಲಿ ಖಾನ್ ಏರಿಯಾದಲ್ಲಿ ಇದೇ ರೀತಿಯ ಭಾರೀ ಭೂಕುಸಿತವಾಗಿತ್ತು. ಭೂಕುಸಿತದಿಂದ ಹೈವೇಯಲ್ಲಿ 100 ಮೀಟರ್ ಅಗಲದ ಕಂದಕ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ 707ರಲ್ಲಿ ಭೂ ಕುಸಿತ ಉಂಟಾಗಿ ಇಡೀ ರಸ್ತೆಯೇ ಕುಸಿದು ಬಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಹಾಗೇ, ಇಲ್ಲಿನ ಉದಯ್​ಪುರದಲ್ಲೂ ಭೂಕುಸಿತವಾಗಿ, ಲಾಹೂಲಾಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ಬಂದಿದ್ದ 175 ಪ್ರವಾಸಿಗರು ಉದಯ್​ಪುರದಲ್ಲಿ ಸಿಲುಕಿಕೊಂಡಿದ್ದರು.

ಇದನ್ನೂ ಓದಿ: Landslide: ಹಿಮಾಚಲ ಪ್ರದೇಶದ ಭೂಕುಸಿತದ ಶಾಕಿಂಗ್ ವಿಡಿಯೋ ವೈರಲ್; ಉದಯ್​ಪುರದಲ್ಲಿ ಸಿಲುಕಿದ 175 ಪ್ರಯಾಣಿಕರು

Landslide in Himachal Pradesh ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ, ಮುರಿದು ಬಿತ್ತು ಸೇತುವೆ: 9 ಪ್ರವಾಸಿಗರು ಸಾವು

(Himachal Pradesh landslide over 40 feared buried under Debris in Kinnaur Major Landslide)

Published On - 2:38 pm, Wed, 11 August 21