AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಪ್ರವಾಹ, ಭೂಕುಸಿತದಿಂದ 6 ಜನ ಸಾವು; ಇನ್ನೂ 13 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಪ್ರವಾಹ, ಭೂಕುಸಿತದಿಂದ 6 ಜನ ಸಾವು; ಇನ್ನೂ 13 ಮಂದಿ ನಾಪತ್ತೆ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 20, 2022 | 4:41 PM

Share

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾರೀ ಮಳೆಯಿಂದ ಉಂಟಾದ ಪ್ರವಾಹ (Flood) ಮತ್ತು ಭೂಕುಸಿತದ (Landslide)  ಘಟನೆಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇನ್ನೂ 13 ಮಂದಿ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಹಠಾತ್ ಪ್ರವಾಹದ ನಂತರ ಸಿಲುಕಿಕೊಂಡಿದ್ದ 22 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಪ್ರವಾಹದಿಂದ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಚಂಬಾ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಭೂಕುಸಿತದ ನಂತರ ಮನೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 4.30ರ ಸುಮಾರಿಗೆ ಚೌವರಿ ತೆಹಸಿಲ್‌ನ ಬಾನೆಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ನಂತರ ಮನೆ ಕುಸಿದು 3 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Kullu Cloudburst: ಹಿಮಾಚಲದ ಕುಲುವಿನಲ್ಲಿ ಮೇಘಸ್ಫೋಟ; ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಅಂಗಡಿ, ವಾಹನಗಳು

ಮಂಡಿಯಲ್ಲಿ, ಭಾರೀ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಬಾಲಕಿಯೊಬ್ಬರು ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಮಂಡಿ-ಕಟೋಲಾ-ಪ್ರಶಾರ್ ರಸ್ತೆಯ ಬಾಘಿ ನುಲ್ಲಾ ಎಂಬಲ್ಲಿನ ಮನೆಯಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಆಕೆಯ ಕುಟುಂಬದ ಐವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಗೋಹರ್ ಡೆವಲಪ್‌ಮೆಂಟ್ ಬ್ಲಾಕ್‌ನ ಕಶನ್ ಗ್ರಾಮದಲ್ಲಿ ಭೂಕುಸಿತದ ನಂತರ ಮತ್ತೊಂದು ಕುಟುಂಬದ 8 ಸದಸ್ಯರು ತಮ್ಮ ಮನೆಯ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಆದರೆ, ಮೃತದೇಹಗಳನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರವಾಹ ಮತ್ತು ಭೂಕುಸಿತದ ನಂತರ ಮಂಡಿ ಜಿಲ್ಲೆಯ ಹಲವಾರು ರಸ್ತೆಗಳನ್ನು ಸಹ ನಿರ್ಬಂಧಿಸಲಾಗಿದೆ. ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ. ಕಂಗ್ರಾ, ಚಂಬಾ, ಮಂಡಿ, ಕುಲು, ಶಿಮ್ಲಾ, ಸಿರ್ಮೌರ್, ಸೋಲನ್, ಹಮೀರ್‌ಪುರ್, ಉನಾ ಮತ್ತು ಬಿಲಾಸ್‌ಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ