Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್

ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
Follow us
ಸುಷ್ಮಾ ಚಕ್ರೆ
|

Updated on: Jan 31, 2023 | 6:26 PM

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಎತ್ತರದ ಪ್ರದೇಶಗಳಲ್ಲಿ ಹಿಮಪಾತದಿಂದಾಗಿ (Snowfall) 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 479 ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಸ್ತುತ ಶಿಮ್ಲಾದಲ್ಲಿ ಗರಿಷ್ಠ 180 ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 150 ಲಾಹೌಲ್ ಮತ್ತು ಸ್ಪಿತಿಯಲ್ಲಿದ್ದು, 72 ಕಿನ್ನೌರ್‌ನಲ್ಲಿ, 35 ಕುಲುದಲ್ಲಿ, 27 ಚಂಬಾದಲ್ಲಿ, 8 ಮಂಡಿಯಲ್ಲಿ ಮತ್ತು ಕಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ತಲಾ 2 ರಸ್ತೆಗಳು ಬಂದ್ ಆಗಿವೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಜನಾಂಗದ ಕಿನ್ನೌರ್‌ನ ಪೂಹ್ ಮತ್ತು ಕಲ್ಪಾದಲ್ಲಿ 11 ಸೆಂ.ಮೀ ಮತ್ತು 8.6 ಸೆಂ.ಮೀ ಹಿಮಪಾತವಾಗಿದೆ. ಆದರೆ, ಶಿಮ್ಲಾ ಜಿಲ್ಲೆಯ ಖದ್ರಾಲಾದಲ್ಲಿ 6 ಸೆಂ.ಮೀ ಮತ್ತು ಕುಕುಮ್‌ಸೇರಿ ಮತ್ತು ಲಾಹೌಲ್‌ನ ಕೀಲಾಂಗ್ ಮತ್ತು ಸ್ಪಿತಿಯಲ್ಲಿ ಕ್ರಮವಾಗಿ 4.8 ಮತ್ತು 3 ಸೆಂ.ಮೀ. ಹಿಮಪಾತವಾಗಿದೆ.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹಿಮಪಾತದ ಭೀತಿ; ಕಾಂಗ್ರೆಸ್ ಚಿಂತೆ

ಮಧ್ಯ ಮತ್ತು ತಗ್ಗು ಬೆಟ್ಟಗಳ ಭಾಗಗಳಲ್ಲಿ ವ್ಯಾಪಕವಾದ ಮಧ್ಯಂತರ ಮಳೆ ಸುರಿದಿದೆ. ಚಂಬಾದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ಧರ್ಮಶಾಲಾದಲ್ಲಿ 25.3 ಮಿ.ಮೀ, ಕಂಗ್ರಾದಲ್ಲಿ 20.6 ಮಿ.ಮೀ, ಮನಾಲಿಯಲ್ಲಿ 9 ಮಿ.ಮೀ ಮತ್ತು ಪಾಲಂಪೂರ್‌ನಲ್ಲಿ ಕ್ರಮವಾಗಿ 6.6 ಮಿ.ಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಾಸರಿ 86.2 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ