AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Political Crisis: ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು

ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್​ನ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಂಡಿದ್ದಾರೆ, ಬಂಡಾಯ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸಿದ್ದಾರೆ.

Himachal Pradesh Political Crisis: ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು
ಶಾಸಕರುImage Credit source: Rediff.com
ನಯನಾ ರಾಜೀವ್
|

Updated on:Feb 29, 2024 | 12:06 PM

Share

ಹಿಮಾಚಲ ಪ್ರದೇಶ(Himachal Pradesh)ದಲ್ಲಿ ಕಾಂಗ್ರೆಸ್​(Congress)ನ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್​ ಸಿಂಗ್ ಪಠಾನಿಯಾ ರದ್ದುಗೊಳಿಸಿದ್ದಾರೆ. ಕಾಂಗ್ರೆಸ್​ ಶಾಸಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹರ್ಷವರ್ಧನ್ ಚೌಹಾಣ್​ ಪಕ್ಷಾಂತರ ನಿಷೇಧ ಕಾಯ್ದೆಯಡಿ ಆರು ಮಂದಿಯನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗೊಂದಲ ಮುಂದುವರಿದಿದೆ. ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನವನ್ನು ಹೋಗಲಾಡಿಸಲು ಇನ್ನೂ ಸಾಧ್ಯವಾಗಿಲ್ಲ. ಆದರೆ, ವೀಕ್ಷಕರ ಹಲವು ಪ್ರಯತ್ನಗಳ ನಂತರ ವಿಕ್ರಮಾದಿತ್ಯ ಸಿಂಗ್ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಆದರೆ 6 ಬಂಡಾಯ ಕಾಂಗ್ರೆಸ್ ಶಾಸಕರು ಚಂಡೀಗಢದಲ್ಲಿ ಬೀಡು ಬಿಟ್ಟಿದ್ದಾರೆ. ಮತ್ತೊಂದೆಡೆ, ಸಿಎಂ ಸುಖವಿಂದರ್ ಸಿಂಗ್ ಸುಖು ತಮ್ಮ ಸರ್ಕಾರ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಆದರೆ ಲೋಕಸಭೆ ಚುನಾವಣೆಯ ನಂತರವೂ ಅವರ ಕುರ್ಚಿ ಸುರಕ್ಷಿತವಾಗಿ ಉಳಿಯುತ್ತದೆಯೇ ಎಂಬುದು ಪ್ರಶ್ನೆ. ಇಲ್ಲಿ ಬಂಡಾಯ ಕಾಂಗ್ರೆಸ್ ಶಾಸಕರ ಮೇಲೆ ಪಕ್ಷಾಂತರ ನಿಷೇಧ ಕಾನೂನನ್ನು ಹೇರಲಾಗಿದೆ.

ಬಂಡಾಯ ಕಾಂಗ್ರೆಸ್ ಶಾಸಕರ ಜೊತೆ ವೀಕ್ಷಕರು ಮಾತುಕತೆ ನಡೆಸಿದ್ದಾರೆ. ಅದರ ವರದಿಯನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಲಾಗಿದೆ. ಬಂಡಾಯ ಶಾಸಕರ ಜತೆ ಮಾತನಾಡುವಾಗ ಸಿಎಂ ಸುಖಾಸುಮ್ಮನೆ ಅಸಮಾಧಾನದ ಪ್ರಸ್ತಾಪವಿದೆ.

ಮತ್ತಷ್ಟು ಓದಿ:ಕಾಂಗ್ರೆಸ್ ಕತೆ ಮುಗಿಯಿತು, ಹಿಮಾಚಲ ಸರ್ಕಾರ ಶೀಘ್ರ ಪತನ: ಹರ್ಷ್ ಮಹಾಜನ್

ಹಿಮಾಚಲ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಸಂಸದೆ ಪ್ರತಿಭಾ ಸಿಂಗ್ ಅವರು ಸರ್ಕಾರ ರಚನೆಯಾದಾಗಿನಿಂದ ಅದು ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಈ ವಿಷಯವನ್ನು ನಮ್ಮ ಹೈಕಮಾಂಡ್‌ಗೆ ತಿಳಿಸಿದ್ದೇವೆ ಮತ್ತು ಪರಿಹಾರವನ್ನು ಕಂಡುಕೊಳ್ಳಬೇಕೆಂದು ನಾವು ಬಯಸಿದ್ದೇವೆ. ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅದರಿಂದಾಗಿ ಇಂದು ಈ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ಇಂದು ಶಿಮ್ಲಾದಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಫೆಬ್ರವರಿ 27ರಂದು ನಡೆದ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್​6 ಮಂದಿ ಶಾಸಕರು ಬಿಜೆಪಿಗೆ ಮತ ಹಾಕುವ ಮೂಲಕ ಅಡ್ಡಮತದಾನ ಮಾಡಿದ್ದರು. ಅದಾದ ಬಳಿಕ ಅವರು ಯಾರ ಕೈಗೂ ಸಿಗದೆ ಗುಪ್ತಸ್ಥಳದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:55 am, Thu, 29 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ