ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಭೂಕುಸಿತವಾಗಿ ಬಸ್ನಲ್ಲಿದ್ದ 18 ಜನರು ಸಾವು
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭಾರಿ ಭೂಕುಸಿತದಲ್ಲಿ ಖಾಸಗಿ ಬಸ್ ಭಾರೀ ಅವಶೇಷಗಳ ಅಡಿಯಲ್ಲಿ ಸಿಲುಕಿ 18 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಹಲವಾರು ಪ್ರಯಾಣಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಂಭೀರವಾಗಿ ಗಾಯಗೊಂಡ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಲಾಸ್ಪುರ, ಅಕ್ಟೋಬರ್ 7: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಇಂದು (ಅಕ್ಟೋಬರ್ 7) ಪ್ರಯಾಣಿಕರ ಬಸ್ ಭೀಕರ ಭೂಕುಸಿತದಲ್ಲಿ (Landslide) ಸಿಲುಕಿದೆ. ಇದರ ಪರಿಣಾಮವಾಗಿ 18 ಜನರು ಮೃತಪಟ್ಟಿದ್ದಾರೆ. ಈ ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಲಿಸುತ್ತಿದ್ದ ಬಸ್ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದು, ಅವಶೇಷಗಳು ಮತ್ತು ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.
ಈಗಾಗಲೇ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಜನರಿದ್ದರು. ಆದರೆ ಈ ಹಂತದಲ್ಲಿ ನಿಖರವಾದ ಸಾವಿನ ಸಂಖ್ಯೆ ತಿಳಿದಿಲ್ಲ ಎಂದು ಬಿಲಾಸ್ಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಲ್ಲು ಸೇತುವೆಯ ಬಳಿ ಈ ಘಟನೆ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಿಂದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಜಾರಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ ಅವಶೇಷಗಳ ಅಡಿಯಲ್ಲಿ ಹೂತುಹೋಗಿದೆ.
ಇದನ್ನೂ ಓದಿ: ಡಾರ್ಜಿಲಿಂಗ್ ಭೂಕುಸಿತದ ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಹಲವು ಜನ ನಾಪತ್ತೆ
ಈ ಅಪಘಾತ ಸಂಭವಿಸಿದಾಗ ಬಸ್ ಮರೋಟನ್-ಕಲಾವುಲ್ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಪೊಲೀಸರು, ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡಗಳು ಸ್ಥಳಕ್ಕೆ ತಲುಪಿದ್ದು, ಅವಶೇಷಗಳನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿವೆ.
Bilaspur, Himachal Pradesh | At least 10 people were killed and several others injured after a private bus was hit by a landslide in the Balurghat area of Jhandhuta subdivision in Himachal Pradesh’s Bilaspur district. Excavation and rescue operations are continuing on a war… pic.twitter.com/1mlKWXCDkQ
— ANI (@ANI) October 7, 2025
ಈ ದುರಂತ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಆದರೆ ಇನ್ನೂ ಅನೇಕರು ಗಂಭೀರವಾದ ಗಾಯಗಳಿಗೆ ಒಳಗಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ, ಕೆಲವರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ಡಾರ್ಜಿಲಿಂಗ್ ಭೂಕುಸಿತ; ಪ್ರಾಣದ ಹಂಗು ತೊರೆದು ಎನ್ಡಿಆರ್ಎಫ್ನಿಂದ ರಕ್ಷಣಾ ಕಾರ್ಯಾಚರಣೆ
ಪೊಲೀಸ್ ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ. ಬಸ್ ಮೇಲೆ ಸಂಪೂರ್ಣ ಪರ್ವತ ಕುಸಿದಿದೆ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಸಂಪೂರ್ಣ ತನಿಖೆಯ ನಂತರ ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




