ಹಿಮಂತ ಬಿಸ್ವ ಶರ್ಮಾ ಅಸ್ಸಾಂ ನೂತನ ಮುಖ್ಯಮಂತ್ರಿ, ನಾಳೆ ಪ್ರಮಾಣ ವಚನ ಸ್ವೀಕಾರ

Himanta Biswa Sarma: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾನುವಾರ ಮಧ್ಯಾಹ್ನ ಕೇಂದ್ರ ಸಚಿವ ನರೇಂದ್ರಸಿಂಗ್ ತೋಮರ್ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆ ಮಾಡಿದ್ದಾರೆ.

ಹಿಮಂತ ಬಿಸ್ವ ಶರ್ಮಾ ಅಸ್ಸಾಂ ನೂತನ ಮುಖ್ಯಮಂತ್ರಿ, ನಾಳೆ ಪ್ರಮಾಣ ವಚನ ಸ್ವೀಕಾರ
ಹಿಮಂತ ಬಿಸ್ವ ಶರ್ಮಾ
Follow us
ರಶ್ಮಿ ಕಲ್ಲಕಟ್ಟ
|

Updated on:May 09, 2021 | 5:27 PM

ಗುವಾಹಟಿ: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾನುವಾರ ಮಧ್ಯಾಹ್ನ ಕೇಂದ್ರ ಸಚಿವ ನರೇಂದ್ರಸಿಂಗ್ ತೋಮರ್ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಗುವಾಹಟಿಯಲ್ಲಿ ಶಾಸಕಾಂಗದ ಪಕ್ಷ ಸಭೆ ನಡೆದ ನಂತರ ಮುಖ್ಯಮಂತ್ರಿಯಾಗಿ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.  ನಾಳೆ  ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

2014 ರ ಚುನಾನಣೆಗೆ ಮುನ್ನ ಬಿಜೆಪಿ ಸೇರಿದವರಾಗಿದ್ದಾರೆ ಶರ್ಮಾ. ಈಶಾನ್ಯ ಪ್ರದೇಶಗಳಲ್ಲಿ ಪಕ್ಷದ ಮುಖ್ಯ ಟ್ರಬಲ್ ಶೂಟರ್ ಆಗಿದ್ದಾರೆ ಇವರು. ಕಳೆದ ತಿಂಗಳು ಹಿಂದೂಸ್ತಾನ್ ಟೈಮ್ಸ್ ನಡೆಸಿದ ಸಂದರ್ಶನದಲ್ಲಿ ನೀವು ಮುಖ್ಯಮಂತ್ರಿಯಾಗುತ್ತಿದ್ದೀರಾ ಎಂದು ಕೇಳಿದಾಗ ಅಂತಿಮ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರದ್ದಾಗಿರುತ್ತದೆ ಎಂದು ಹೇಳಿದ್ದರು.

ಅಸ್ಸಾಂನ ಮುಖ್ಯಮಂತ್ರಿಯಾಗಿದ್ದ ಸರ್ಬಾನಂದ ಸೋನೊವಾಲ್ ನಂತರ ಈಶಾನ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿಯೇರಿದ ಎರಡನೇ ಬಿಜೆಪಿ ನಾಯಕರಾಗಿದ್ದಾರೆ ಶರ್ಮಾ.

ಈ ಹಿಂದೆ ಕಾಂಗ್ರೆಸ್ ನಾಯಕರಾಗಿದ್ದ ಶರ್ಮಾ ಅಸ್ಸಾಂನಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೇರಲು ಶ್ರಮವಹಿಸಿದರು. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಸೀಟುಗಳನ್ನು ಗಳಿಸಿದೆ. 126 ಸೀಟುಗಳಿರುವ ವಿಧಾನಸಭೆಯಲ್ಲಿ ಮೈತ್ರಿ ಪಕ್ಷಗೊಳೊಂದಿಗೆ ಬಿಜೆಪಿ 75 ಸೀಟುಗಳನ್ನು ಗಳಿಸಿ ಎರಡನೇ ಬಾರಿ ಅಧಿಕಾರಕ್ಕೇರಿದೆ.  ಬಿಜೆಪಿ ಮೈತ್ರಿ ಪಕ್ಷಗಳಾದ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಕ್ರಮವಾಗಿ 9 ಮತ್ತು 6 ಸ್ಥಾನಗಳನ್ನು ಗೆದ್ದಿವೆ .

ಶನಿವಾರ ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದರು. ನಡ್ಡಾ ಅವರ ಮನೆಯಲ್ಲಿ ಎರಡು ಸುತ್ತಿನ ಸಭೆ ನಡೆದಿದೆ. ಸಭೆ ಮುಗಿದ ನಂತರ ಸೋನೊವಾಲ್ ಮತ್ತು ಶರ್ಮಾ ವಿಶೇಷ ವಿಮಾನ ಮೂಲಕ ರಾತ್ರಿ ಗುವಾಹಟಿಗೆ ತಲುಪಿದ್ದರು.

(Himanta Biswa Sarma chosen as next chief minister of Assam announcement made by Union minister Narendra Singh Tomar)

ಇದನ್ನೂ ಓದಿ: ಸರ್ಬಾನಂದ ಸೋನೊವಾಲ್ ಅಥವಾ ಹಿಮಾಂತ ಬಿಸ್ವ ಶರ್ಮಾ: ಅಸ್ಸಾಂ ಮುಖ್ಯಮಂತ್ರಿ ಸ್ಥಾನ ಯಾರಿಗೆ?

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

Published On - 2:07 pm, Sun, 9 May 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ