AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್​​ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ

ಹಿಮಂತ್ ಬಿಸ್ವಾ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ಅಸ್ಸಾಂನಲ್ಲಿ ಸತತ ಎರಡು ಅವಧಿಗೆ ಮುಖ್ಯಮಂತ್ರಿ ಆದ ಮೊದಲ ಕಾಂಗ್ರೆಸೇತರ ನಾಯಕ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ 126 ಸ್ಥಾನಗಳಲ್ಲಿ 82 ಗೆದ್ದು ಭರ್ಜರಿ ಬಹುಮತ ಗಳಿಸಿತ್ತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಭಾಗಿಯಾಗಿದ್ದರು.

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್​​ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ
ಹಿಮಂತ್ ಬಿಸ್ವಾ ಶರ್ಮಾ
ಪ್ರಸನ್ನ ಹೆಗಡೆ
|

Updated on:May 12, 2026 | 12:29 PM

Share

ಗುವಾಹಟಿ, ಮೇ 12: ಬಿಜೆಪಿ ನಾಯಕ ಹಿಮಂತ್​​ ಬಿಸ್ವಾ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುವಾಹಟಿಯ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್​ ಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ಹಿಮಂತ್ ಜೊತೆ ಸಚಿವರಾಗಿ ನಾಲ್ವರು ಶಾಸಕರು ಕೂಡ ಇದೇ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದಾಖಲೆ ಬರೆದ ಹಿಮಂತ್​​

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ 126 ಸ್ಥಾನಗಳ ಪೈಕಿ 82 ಸ್ಥಾನಗಳನ್ನು ಗೆದ್ದು ಬಿಜೆಪಿ ಭರ್ಜರಿ ವಿಜಯ ಗಳಿಸಿತ್ತು. ಸರ್ಕಾರ ರಚನೆಗೆ 64 ಶಾಸಕರ ಬೆಂಬಲ ಅಗತ್ಯವಿದ್ದು 18 ಹೆಚ್ಚುವರಿ ಶಾಸಕರನ್ನು ಗೆದ್ದು ಬಿಜೆಪಿ ಬೀಗಿತ್ತು. ಹೀಗಾಗಿ ಜಲಕ್ಬರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹಿಮಂತ್​ ಬಿಸ್ವಾಗೆ ಸತತ ಎರಡನೇ ಬಾರಿ ಮುಖ್ಯಂತ್ರಿ ಗದ್ದುಗೆ ದೊರೆತಿದೆ. ಈ ಮೂಲಕ ಹಿಮಂತ ಬಿಸ್ವ ಶರ್ಮಾ ಅಸ್ಸಾಂನಲ್ಲಿ ಸತತ ಎರಡು ಅವಧಿಗೆ ಮುಖ್ಯಮಂತ್ರಿ ಆದ ಮೊದಲ ಕಾಂಗ್ರೆಸೇತರ ನಾಯಕ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ; ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ

ಇನ್ನು ಹಿಮಂತ್​​ ಬಿಸ್ವಾ ಶರ್ಮಾ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಕಿರಣ್ ರಿಜಿಜು, ಜ್ಯೋತಿರಾದಿತ್ಯ ಸಿಂಧ್ಯಾ, ಶಿವರಾಜ್ ಸಿಂಗ್ ಚೌಹಾಣ್, ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್​ ನಬಿನ್​​, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಒಡಿಶಾ ಸಿಎಂ ಮೋಹನ್ ಮಾಝಿ, ಮಹಾರಾಷ್ಟ್ರ ಸಿಎಂ ಫಡ್ನವೀಸ್, ಛತ್ತೀಸಗಢ ಸಿಎಂ ವಿಷ್ಣುದೇವ ಸಾಯಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಹಲವರು ಉಪಸ್ಥಿತರಿದ್ದರು.

ಹಿಮಂತ್​​ ರಾಜಕೀಯ ಹಾದಿ

2001ರಲ್ಲಿ ಅಸ್ಸಾಂ ಗಣ ಪರಿಷತ್ ನಾಯಕ ಭೃಗು ಕುಮಾರ್ ಫುಕಾನ್ ಅವರನ್ನು ಸೋಲಿಸುವ ಮೂಲಕ ಶರ್ಮಾ ಮೊದಲ ಬಾರಿಗೆ ಜಲುಕ್ಬರಿಯಿಂದ ಅಸ್ಸಾಂ ವಿಧಾನಸಭೆಗೆ ಆಯ್ಕೆಯಾಗಿದ್ದರು. 2006ರಲ್ಲಿ ಮರು ಆಯ್ಕೆಯಾದ ಅವರು, ನಂತರ 2011ರಲ್ಲಿ ಸತತ ಮೂರನೇ ಬಾರಿಗೆ 78,000 ಮತಗಳ ಅಂತರದಿಂದ ಗೆದ್ದಿದ್ದರು. 2002ರಿಂದ 2014ರ ವರೆಗೆ ಶರ್ಮಾ ಕೃಷಿ, ಯೋಜನೆ ಮತ್ತು ಅಭಿವೃದ್ಧಿ, ಹಣಕಾಸು, ಆರೋಗ್ಯ, ಶಿಕ್ಷಣ ಸಚಿವರಾಗಿದ್ದರು. ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರೊಂದಿಗಿನ ರಾಜಕೀಯ ಭಿನ್ನಾಭಿಪ್ರಾಯಗಳ ನಂತರ, ಶರ್ಮಾ ಜುಲೈ 21, 2014ರಂದು ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಬಳಿಕ ಆಗಸ್ಟ್ 23, 2015ರಂದು ನವದೆಹಲಿಯಲ್ಲಿರುವ ಅಮಿತ್ ಶಾ ಅವರ ನಿವಾಸದಲ್ಲಿ ಭಾರತೀಯ ಜನತಾ ಪಕ್ಷವನ್ನು ಶರ್ಮಾ ಸೇರಿದ್ದರು. ಮೇ 2016ರಲ್ಲಿ, ಶರ್ಮಾ ಸತತ ನಾಲ್ಕನೇ ಅವಧಿಗೆ ಜಲುಕ್ಬರಿ ಕ್ಷೇತ್ರದಲ್ಲಿ ಗೆದ್ದರು ಮತ್ತು ಮೇ 24ರಂದು ಈಶಾನ್ಯ ಭಾರತದ ಮೊದಲ ಬಿಜೆಪಿ ಸರ್ಕಾರದಲ್ಲಿ ಸೋನೋವಾಲ್ ಸಚಿವಾಲಯದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು . ಅವರಿಗೆ ಹಣಕಾಸು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಯೋಜನೆ ಮತ್ತು ಅಭಿವೃದ್ಧಿ, ಪ್ರವಾಸೋದ್ಯಮ, ಖಾತೆಗಳನ್ನು ನೀಡಲಾಗಿತ್ತು. 2021ರಲ್ಲಿ ರಿಂದ ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ ಎರಡನೇ ಅವಧಿಗೆ ಸಿಎಂ ಆಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:28 pm, Tue, 12 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!